ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗೃಹ ಸಚಿವರಿಗೆ ಮನವಿ
ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ

ಮಂಗಳೂರು,ಜು.23: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಂಘವಾರಿವಾರದ ಕೈವಾಡವಿದ್ದರೂ ಆರೋಪಿಗಳ ಬಂಧನವಾಗಿಲ್ಲ. ಕೂಡಲೆ ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯ ಹಾಗೂ ಆತನ ಸಹಚರ ನವೀನ್ ಶೆಟ್ಟಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಇಂದು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮನಪಾ ಮೇಯರ್ ಹರಿನಾಥ್, ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಕೆ.ಅಶ್ರಫ್, ಕಾಂಗ್ರೆಸ್ ಸೇವಾದಳ ಮುಖಂಡ ಅಶ್ರಫ್, ಕಾಂಗ್ರೆಸ್ ಮುಖಂಡರುಗಳಾದ ಪದ್ಮನಾಭ ನರಿಂಗಾನ, ವಿಶ್ವಾಸ್‌ಕುಮಾರ್ ದಾಸ್, ಅಮೃತ್ ಕದ್ರಿ, ಸುಧೀರ್ ಟಿ.ಕೆ., ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story





