Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕನ್ ಹಿಂದೂ ದೇವಾಲಯಕ್ಕೆ ಮುಸ್ಲಿಂ...

ಅಮೆರಿಕನ್ ಹಿಂದೂ ದೇವಾಲಯಕ್ಕೆ ಮುಸ್ಲಿಂ ಭದ್ರತಾಧಿಕಾರಿ!

ವಾರ್ತಾಭಾರತಿವಾರ್ತಾಭಾರತಿ24 July 2016 3:39 PM IST
share
ಅಮೆರಿಕನ್ ಹಿಂದೂ ದೇವಾಲಯಕ್ಕೆ ಮುಸ್ಲಿಂ ಭದ್ರತಾಧಿಕಾರಿ!

ಇಂಡಿಯಾನಾಪೊಲೀಸ್, ಜು.24: ಅಮೆರಿಕದ ಇಂಡಿಯಾನಾಪೊಲೀಸ್‌ನಲ್ಲಿರುವ ಅತಿದೊಡ್ಡ ಹಿಂದೂ ದೇವಾಲಯಕ್ಕೆ ಭದ್ರತೆ ಒದಗಿಸುವ ಹೊಣೆ ಹೊತ್ತ ಅಧಿಕಾರಿ ಯಾರು ಗೊತ್ತೇ? ಭಾರತ ಮೂಲದ ಹೆಮ್ಮೆಯ ಮುಸ್ಲಿಂ ಅಧಿಕಾರಿ ಜಾವೆದ್ ಖಾನ್!

ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಧಾರ್ಮಿಕ ಅಸಹಿಷ್ಣುತೆ ಎದುರಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಈ ಅಪರೂಪದ ಅಂತರ್‌ಧರ್ಮೀಯ ಸಹಕಾರ ಮಾದರಿಯಾಗಿದೆ. ಎಂಟನೆ ಡಿಗ್ರಿ ಬ್ಲ್ಯಾಕ್ ಬೆಲ್ಟ್ ಟೆಕ್ವಾಂಡೊ ಮತ್ತು ಕಿಕ್ ಬಾಕ್ಸಿಂಗ್ ಚಾಂಪಿಯನ್ ಲೆಫ್ಟಿನೆಂಟ್ ಜಾವೆದ್ ಖಾನ್, ಸ್ಥಳೀಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರು ಈಗ ಇಲ್ಲಿನ ಹಿಂದೂ ದೇವಾಲಯದ ಭದ್ರತಾ ವಿಭಾಗದ ನಿರ್ದೇಶಕರಾಗಿರುತ್ತಾರೆ.

ಸಾವಿರಾರು ಮಂದಿ ಇಲ್ಲಿಗೆ ಪ್ರತಿದಿನ ಭೇಟಿ ನೀಡುತ್ತಾರೆ. ಅದರಲ್ಲೂ ಮುಖ್ಯವಾಗಿ ವಾರಾಂತ್ಯದಲ್ಲಿ ಜನಪ್ರವಾಹವೇ ಇರುತ್ತದೆ. ಮುಂಬೈನಲ್ಲಿ ಹುಟ್ಟಿನ ಖಾನ್, ಪುಣೆಯಲ್ಲಿ ಬೆಳೆದವರು. ಇದೀಗ ಹಿಂದೂ ದೇವಸ್ಥಾನದ ಅವಿಭಾಜ್ಯ ಅಂಗವಾಗಿದ್ದಾರೆ.

ನನ್ನ ಸಂದೇಶ ಇಷ್ಟೇ; ನಾವೆಲ್ಲರೂ ಒಂದು. ಎಲ್ಲರೂ ದೇವರ ಮಕ್ಕಳು. ದೇವರು ಒಬ್ಬನೇ. ವಿವಿಧ ರೂಪ, ಹೆಸರು ಆತನಿಗೆ. ನಾವು ಪ್ರಾರ್ಥನೆ ರೂಢಿಸಿಕೊಂಡಿದ್ದೇವೆ ಎಂದು ಖಾನ್ ಹೇಳಿದ್ದಾರೆ.

ನಾವು ಭಾರತೀಯರು. ನಮ್ಮ ಅರ್ಧ ಕುಟುಂಬ ಹಿಂದೂ ಸಂಪ್ರದಾಯದ್ದು. ನನಗೆ, ಹಿಂದೂ ಅಥವಾ ಮುಸ್ಲಿಂ ಎನ್ನುವುದರಲ್ಲಿ ನಂಬಿಕೆ ಇಲ್ಲ. ನಾನು ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದು ಅವರು ಹೇಳುತ್ತಾರೆ. 1986ರಿಂದಲೂ ವಿವಿಧ ಯುದ್ಧಕೌಶಲ ಸ್ಪರ್ಧೆಗಳಿಗಾಗಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದ ಅವರು, 2001ರಲ್ಲಿ ಅಮೆರಿಕಕ್ಕೆ ವಲಸೆ ಬಂದು ಇಂಡಿಯಾನಾದಲ್ಲಿ ನೆಲೆ ನಿಂತರು.

ಖಾನ್ ತಮ್ಮ ಪುತ್ರಿಯ ವಿವಾಹವನ್ನು ಈ ದೇವಸ್ಥಾನದಲ್ಲಿ ತೆಲುಗು ಹುಡುಗನೊಬ್ಬನ ಜತೆ ನೆರವೇರಿಸಿದ್ದರಿಂದ ಇಲ್ಲಿನ ಸಂಪರ್ಕಕ್ಕೆ ಬಂದಿದ್ದಾಗಿ ಹೇಳಿಕೊಂಡಿದ್ದಾರೆ. ಆ ಬಳಿಕ ದೇವಸ್ಥಾನಕ್ಕೆ ಸಂಬಂಧಪಟ್ಟ ಎಲ್ಲರ ಪರಿಚಯವಾಯಿತು ಎಂದು ಖಾನ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X