Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲೂ ನಡೆಯಲಿದೆ ಕೆಎಸ್ಸಾರ್ಟಿಸಿ...

ಮಂಗಳೂರಿನಲ್ಲೂ ನಡೆಯಲಿದೆ ಕೆಎಸ್ಸಾರ್ಟಿಸಿ ನೌಕರರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ24 July 2016 5:23 PM IST
share
ಮಂಗಳೂರಿನಲ್ಲೂ ನಡೆಯಲಿದೆ ಕೆಎಸ್ಸಾರ್ಟಿಸಿ ನೌಕರರ ಮುಷ್ಕರ

ಮಂಗಳೂರು, ಜು.24; ಖಾಸಗಿ ಬಸ್‌ಗಳ ಪ್ರಾಬಲ್ಯವಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಎಸ್ಸಾರ್ಟಿಸಿ ನೌಕರರು ಇಂದು ಮಧ್ಯರಾತ್ರಿಯಿಂದಲೇ ಮುಷ್ಕರವನ್ನು ಆರಂಭಿಸಲು ನಿರ್ಧಸಿದ್ದಾರೆ.

ಮೂಲವೇತನದಲ್ಲಿ ಶೇ.35ರಷ್ಟು ಹೆಚ್ಚಿಸಬೇಕು, ವೈಟೇಜ್ ಫಾರ್ ಸರ್ವೀಸ್ ಬೇಡಿಕೆಯಲ್ಲಿದ್ದಂತೆ ಕೊಡಬೇಕು. ಎಲ್ಲಾ ಬಾಟ ಹಾಗೂ ಭತ್ಯೆಯನ್ನು ಬೇಡಿಕೆಯಲ್ಲಿದ್ದಂತೆ ಹೆಚ್ಚಿಸಬೇಕು, ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು, ಎನ್‌ಐಎನ್‌ಸಿ ಪ್ರಕರಣಗಳಲ್ಲಿ ನಿರ್ವಾಹಕರ ಮೇಲೆ ಯಾವುದೆ ಕ್ರಮ ತೆಗೆದುಕೊಳ್ಳಬಾರದು, ನಿರ್ವಾಹಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು, ಚಾಲಕರನ್ನು ಅಪಘಾತ ಪ್ರಕರಣಗಳಲ್ಲಿ ಹೊಣೆಯನ್ನಾಗಿ ಮಾಡಬಾರದು, ಫಾರಂ 4ನ್ನು ಕಾನೂನಿನಂತೆ ಪುನರ್‌ರೂಪಿಸಬೇಕು, ಚಾಲಕ ನಿರ್ವಾಹಕರಿಗೆ ರನ್ನಿಂಗ್ ಟೈಮ್‌ನಂತೆ ವೇತನವನ್ನು, ಒಟಿಯನ್ನು ಕೊಡಬೇಕು, ಚಾಲಕ ಕಂ ನಿರ್ವಾಹಕರಿಗೆ ಅವರು ಇಚ್ಛೆಪಡುವ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕು. ಇನ್ನು ಮುಂದೆ ಚಾಲಕ ಕಂ ನಿರ್ವಾಹಕ ಹುದ್ದೆ ರದ್ದು ಮಾಡಬೇಕು, ಚಾಲಕರು,ನಿರ್ವಾಹಕರು, ಯಾಂತ್ರಿಕ ಸಿಬ್ಬಂದಿಯ ವೇತನದಲ್ಲಿ ಅಕ್ರಮ ಕಡಿತ ಪೂರ್ಣವಾಗಿ ರದ್ದು ಮಾಡಬೇಕು, ಮಹಿಳೆಯರಿಗೆ ಎಲ್ಲಾ ಕಡೆ ವಿಶ್ರಾಂತಿ ಗೃಹ ಮತ್ತು ಕ್ರೀಚ್ ನಿರ್ಮಿಸುವುದು ಮತ್ತು ಮಹಿಳೆಯರಿಗೆ ಕಾರ್ಯಸ್ಥಾನದಲ್ಲಿ ಕಿರುಕುಳ ತಪ್ಪಬೇಕು, ಟ್ರೈನಿ ಪದ್ದತಿಯನ್ನು ರದ್ದು ಮಾಡಬೇಕು, ತರಬೇತಿದಾರರನ್ನು ಕೆಲಸಕ್ಕೆ ಸೇರಿದ ದಿನದಿಂದ ಖಾಯಂಗೊಳಿಸಬೇಕು, ಅಮಾನತ್ತಿನಲ್ಲಿಡುವ ಪದ್ದತಿಯನ್ನು ರದ್ದು ಮಾಡಬೇಕು, ಆಪೇಕ್ಷೆಪಟ್ಟ ನೌಕರರಿಗೆ ಒಂದು ನಿಗಮದಿಂದ ಇನ್ನೊಂದು ನಿಗಮಕ್ಕೆ ವರ್ಗಾವಣೆಗೆ ಅವಕಾಶ ನೀಡಬೇಕು, ಎಲ್ಲಾ ಸಾರಿಗೆ ನೌಕರರಿಗೆ, ಅವಲಂಬಿತ ತಂದೆ, ತಾಯಿಗಳನ್ನೊಳಗೊಂಡ ಪೂರ್ಣ ಮೆಡಿಕಲ್ ರಿಯಂಬರ್ಸ್‌ಮೆಂಟ್ ಮಾಡಬೇಕು ಸೇರಿದಂತೆ 44 ಬೇಡಿಕೆಗಳನ್ನಿಟ್ಟುಕೊಂಡು ಮುಷ್ಕರವನ್ನು ರಾಜ್ಯಾದ್ಯಾಂತ ನಡೆಸಲು ನಿರ್ಧರಿಸಲಾಗಿದೆ.

ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್‌ ಫೆಡರೇಶನ್(ಎಐಟಿಯುಸಿ), ಅಖಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ(ಐಎನ್‌ಟಿಯುಸಿ), ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಮತ್ತು ಕರಾರಸಾಸಂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದು ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.

ದ.ಕ ಜಿಲ್ಲೆಯಲ್ಲಿ ಮಂಗಳೂರು ವಿಭಾಗದಲ್ಲಿ 500 ಬಸ್‌ಗಳಿದ್ದು 2,500 ಕಾರ್ಮಿಕರಿದ್ದಾರೆ. ಪುತ್ತೂರು ವಿಭಾಗದಲ್ಲಿ 550 ಬಸ್‌ಗಳಿದ್ದು 5,500 ಕಾರ್ಮಿಕರಿದ್ದಾರೆ. ಇವರೆಲ್ಲರೂ ಮುಷ್ಕರದಲ್ಲಿ ಭಾಗವಹಿಸುವ ಸಾಧ್ಯತೆ ಹೆಚ್ಚಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸೋಮವಾರದಿಂದ ಕೆಎಸ್ಸಾರ್ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ರವಿರಾತ್ರಿ 12 ಗಂಟೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಬಸ್‌ಗಳು ಸಂಚರಿಸುವುದಿಲ್ಲ. ಎಲ್ಲಾ ಕಾರ್ಮಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಸರಕಾರ ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಯನ್ನು ಈಡೇರಿಸಬೇಕು.

- ಪ್ರವೀಣ್ ಕುಮಾರ್, ಪ್ರ.ಕಾರ್ಯದರ್ಶಿ, ಕೆಎಸ್ಸಾರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್‌ ಫೆಡರೇಶನ್ (ಎಐಟಿಯುಸಿ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X