ದ.ಕ., ಉಡುಪಿಯಲ್ಲಿ ರಜೆ ನಿರಾಕರಣೆಗೆ ಕ್ಯಾಂಪಸ್ ಫ್ರಂಟ್ ಖಂಡನೆ
ಮಂಗಳೂರು, ಜು.25: ಕರ್ನಾಟಕ ರಾಜ್ಯಾದ್ಯಂತ ಸರಕಾರಿ ಬಸ್ ನೌಕರರ ಮುಷ್ಕರದ ಹಿನ್ನಲೆಯಲ್ಲಿ ರವಿವಾರದಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ. ರಾಜ್ಯದ ವಿವಿದ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆಯನ್ನು ನಿರಾಕರಿಸಿರುವುದನ್ನು ಕ್ಯಾಂಪಸ್ ಫ್ರಂಟ್ ಖಂಡಿಸಿದೆ.
ಸರಕಾರಿ ಬಸ್‌ಗಳು ಸಂಚರಿಸದ ಕಾರಣ ಬಸ್‌ಪಾಸ್ ಪಡೆದ ವಿದ್ಯಾರ್ಥಿಗಳು ಇಂದು ಬಸ್ಸುಗಳಿಲ್ಲದೆ ಪರದಾಡುವಂತಾಗಿದೆ. ಉಡುಪಿ, ಪುತ್ತೂರು ಮತ್ತು ಬೆಳ್ತಂಗಡಿಯಿಂದ ಮಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳು ಜನ ಜಂಗುಳಿಯಿಂದ ನೇತಾಡಿಗೊಂಡು ಬಂದಿದ್ದಾರೆ ಇದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಪ್ರಕಟನೆಯಲ್ಲಿ ತಿಳಿಸಿದೆ.
Next Story





