Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದನೆ ಹತ್ತಿಕ್ಕಲು ಎನ್‌ಡಿಎ ಸರಕಾರ...

ಭಯೋತ್ಪಾದನೆ ಹತ್ತಿಕ್ಕಲು ಎನ್‌ಡಿಎ ಸರಕಾರ ವಿಫಲ, ಆದರೆ ಮೋದಿ ಇನ್ನೂ ‘ಕೊನೆಯ ಆಶಾಕಿರಣ’:ಠಾಕ್ರೆ

ವಾರ್ತಾಭಾರತಿವಾರ್ತಾಭಾರತಿ25 July 2016 7:56 PM IST
share
ಭಯೋತ್ಪಾದನೆ ಹತ್ತಿಕ್ಕಲು ಎನ್‌ಡಿಎ ಸರಕಾರ ವಿಫಲ, ಆದರೆ ಮೋದಿ ಇನ್ನೂ ‘ಕೊನೆಯ ಆಶಾಕಿರಣ’:ಠಾಕ್ರೆ

ಮುಂಬೈ,ಜು.25: ಕೇಂದ್ರದ ವಿರುದ್ಧ ತನ್ನ ದಾಳಿಯನ್ನು ಮಂದುವರಿಸಿರುವ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಭಯೋತ್ಪಾದನೆಯ ಪಿಡುಗನ್ನು ಕಟುನಿಟ್ಟಾಗಿ ನಿಗ್ರಹಿಸುವ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಈ ಸರಕಾರವು ವಿಫಲಗೊಂಡಿದೆ, ಆದರೂ ನರೇಂದ್ರ ಮೋದಿ ಸರಕಾರವು ದೇಶದ ‘ಕೊನೆಯ ಆಶಾಕಿರಣ ’ವಾಗಿರುವುದರಿಂದ ಅದು ‘ಪ್ರತಿಯೊಂದನ್ನೂ ಸರಿ ಪಡಿಸಲಿದೆ ’ಎಂದು ತಾನು ಆಶಯ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಪಕ್ಷದ ಮುಖವಾಣಿ ‘ಸಾಮನಾ’ದಲ್ಲಿ ಸೋಮವಾರ ತನ್ನ ಸಂದರ್ಶನದ ಎರಡನೆಯ ಭಾಗದಲ್ಲಿ, ಸರಕಾರವು ಭಯೋತ್ಪಾದನೆ ಕುರಿತಂತೆ ಮೃದು ನಿಲುವು ತಳೆದಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅವರು, ತಾನು ಈ ವಿಷಯದಲ್ಲಿ ತಜ್ಞನಲ್ಲ...ಆದರೆ ಜನತೆ ಮತ್ತು ದೇಶದ ನಾಡಿಮಿಡಿತವನ್ನು ಗ್ರಹಿಸಬಲ್ಲೆ ಎಂದು ಹೇಳಿದ್ದಾರೆ.


 ಸರಕಾರವು ಅಧಿಕಾರದಲ್ಲಿ ತನ್ನ ಎರಡು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಭಯೋತ್ಪಾದನೆ ಅಥವಾ ಉಗ್ರವಾದದ ಹೆಸರಿನಲ್ಲಿ ಹೆಡೆಯೆತ್ತುತ್ತಿರುವ ಚಟುವಟಿಕೆಗಳನ್ನು ಸಮರ್ಥವಾಗಿ ನಿಗ್ರಹಿಸಬಹುದಿತ್ತು. ಆದರೆ ಹಾಗೆ ಆಗಿಲ್ಲ. ಆದರೆ ಮೋದಿಯವರು ಎಲ್ಲವನ್ನೂ ಸರಿಮಾಡುತ್ತಾರೆ ಎಂಬ ಆಶಾವಾದವನ್ನು ಹೊಂದಿದ್ದೇನೆ ಎಂದರು.


ಕಾಶ್ಮೀರದಲ್ಲಿಯ ಬೆಳವಣಿಗೆಗಳು ಮತ್ತು ಭಾರತದ ಆಂತರಿಕ ವ್ಯವಹಾರಗಳಲ್ಲಿ ಪಾಕಿಸ್ತಾನದ ಹೆಚ್ಚುತ್ತಿರುವ ಹಸ್ತಕ್ಷೇಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಹಿಂದಿರುವ ಕಾರಣಗಳು ಎಲ್ಲರಿಗೂ ಗೊತ್ತು. ಈ ಹಂತದಲ್ಲಿ ನೀವು ಏನನ್ನು ಬೋಧಿಸುತ್ತಿರೋ ಅದನ್ನು ಆಚರಿಸಿ ಎಂಬ ನಮ್ಮ ಸಂತರ ಮಾತು ನನಗೆ ನೆನಪಾಗುತ್ತಿದೆ. ಹಾಗೆ ಮಾಡುವವರು ಆರಾಧಿಸಲ್ಪಡುತ್ತಾರೆ. ಆದರೆ ದುರದೃಷ್ಟವಶಾತ್ ಭಯೋತ್ಪಾದನೆಯನ್ನು ಅಳಿಸುವ ಭರವಸೆಯನ್ನು ಪೂರೈಸುವ ಆಡಳಿತಗಾರ ಭಾರತಇನ್ನೂ ದೊರಕಿಲ್ಲ ಎಂದರು.


ನಿಮ್ಮ ಪಕ್ಷವು ಕೇಂದ್ರದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವಾಗ ಸರಕಾರವನ್ನು ಟೀಕಿಸುವ ನಿಮ್ಮ ಪಕ್ಷದ ಉದ್ದೇಶವೇನು ಎಂಬ ಪ್ರಶ್ನೆಗೆ, ಈ ಸರಕಾರದ ಕುರಿತು ನಮ್ಮ ನಿಲುವು ಅತ್ಯಂತ ಪ್ರಾಮಾಣಿಕವಾಗಿದೆ. ಈ ದೇಶದ ಜನರಿಗೆ ನೀಡಿರುವ ಭರವಸೆಗಳು ಈಡೇರುವಂತಾಗಲು ಈ ಸರಕಾರವು ಸುಗಮವಾಗಿ ನಡೆಯಬೇಕೆಂದು ನಾವು ಬಯಸಿದ್ದೇವೆ. ಆದರೆ ಸರಕಾರವು ದಾರಿ ತಪ್ಪಿದ ಸಂದರ್ಭಗಳಲ್ಲಿ ಎಚ್ಚರಿಕೆ ಗಂಟೆಯನ್ನು ಬಾರಿಸುವ ಎಲ್ಲ ಹಕ್ಕನ್ನು ನಾವು ಹೊಂದಿದ್ದೇವೆ ಎಂದು ಅವರು ಉತ್ತರಿಸಿದರು.


ರಾಜ್ಯ ಮತ್ತು ಕೇಂದ್ರದಲ್ಲಿ ಸಚಿವ ಖಾತೆಗಳ ಹಂಚಿಕೆ ಕುರಿತಂತೆ ಶಿವಸೇನೆ ಮತ್ತು ಬಿಜೆಪಿ ನಡುವೆ ಭಿನ್ನಾಭಿಪ್ರಾಯಗಳಿವೆ ಎನ್ನುವುದನ್ನು ಉದ್ಧವ್ ನಿರಾಕರಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X