Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಂದೀಪ್ ಯಾದವ್ ಡೋಪಿಂಗ್ ಟೆಸ್ಟ್‌ನಲ್ಲಿ...

ಸಂದೀಪ್ ಯಾದವ್ ಡೋಪಿಂಗ್ ಟೆಸ್ಟ್‌ನಲ್ಲಿ ಫೇಲ್

ಕುಸ್ತಿಪಟು ನರಸಿಂಗ್ ಯಾದವ್ ರೂಮ್‌ಮೇಟ್

ವಾರ್ತಾಭಾರತಿವಾರ್ತಾಭಾರತಿ25 July 2016 10:40 PM IST
share
ಸಂದೀಪ್ ಯಾದವ್ ಡೋಪಿಂಗ್ ಟೆಸ್ಟ್‌ನಲ್ಲಿ ಫೇಲ್

ಹೊಸದಿಲ್ಲಿ, ಜು.25: ಭಾರತದ ಇನ್ನೋರ್ವ ಕುಸ್ತಿಪಟು ಸಂದೀಪ್ ತುಳಸಿ ಯಾದವ್ ರಾಷ್ಟ್ರೀಯ ಉದ್ದೀಪನಾ ತಡೆ ಘಟಕ(ನಾಡಾ) ನಡೆಸಿರುವ ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ.

 ರಿಯೋ ಒಲಿಂಪಿಕ್ಸ್‌ಗೆ ಭಾರತ ತಂಡದೊಂದಿಗೆ ತೆರಳಿರುವ ನರಸಿಂಗ್ ಯಾದವ್ ರವಿವಾರ ನಿಷೇಧಿತ ದ್ರವ್ಯ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದರು. ಈ ಮೂಲಕ ಅವರು ರಿಯೋ ಗೇಮ್ಸ್‌ನಲ್ಲಿ ಭಾಗವಹಿಸುವುದರಿಂದ ವಂಚಿತರಾಗುವ ಭೀತಿಯಲ್ಲಿದ್ದಾರೆ. ನರಸಿಂಗ್ ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾದ ಮರುದಿನವೇ ಸೋನೆಪತ್‌ನ ಸಾಯ್ ಕೇಂದ್ರದ ಕೊಠಡಿಯಲ್ಲಿ ನರಸಿಂಗ್ ಯಾದವ್‌ರ ಜೊತೆ ವಾಸಿಸುತ್ತಿದ್ದ ಸಂದೀಪ್ ಯಾದವ್ ಡೋಪಿಂಗ್ ಬಲೆಗೆ ಸಿಲುಕಿದ್ದಾರೆ.

 ಗ್ರೀಕೊ-ರೊಮನ್ ಶೈಲಿಯ ಕುಸ್ತಿಪಟು ಸಂದೀಪ್ 2013ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 66 ಕೆಜಿ ತೂಕ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು. ಸೋನೆಪತ್‌ನ ಸಾಯ್ ಕೇಂದ್ರದಲ್ಲಿ ನರಸಿಂಗ್ ಯಾದವ್‌ರ ರೂಮ್‌ಮೇಟ್ ಆಗಿದ್ದ ಸಂದೀಪ್ ಕೂಡ ಉದ್ದೀಪನಾ ಮದ್ದು ಸೇವನೆ ಪರೀಕ್ಷೆಯಲ್ಲಿ ಫೇಲಾಗಿದ್ದಾರೆ. ಈ ಬೆಳವಣಿಗೆ ಡೋಪಿಂಗ್‌ಪರೀಕ್ಷೆಯ ಹಿಂದೆ ಷಡ್ಯಂತ್ರ ಇರುವುದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಸಂದೀಪ್ ಹಾಗೂ ನರಸಿಂಗ್ ಯಾದವ್ ಒಂದೇ ಕೊಠಡಿಯಲ್ಲಿದ್ದರು. ಇವರಿಬ್ಬರೂ ಒಂದೇ ರೀತಿಯ ನಿಷೇಧಿತ ದ್ರವ್ಯವನ್ನು ಸೇವಿಸಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಭಾರತದ ಕುಸ್ತಿ ಫೆಡರೇಶನ್(ಡಬ್ಲು ಎಫ್‌ಐ) ಸಹಾಯಕ ಕಾರ್ಯದರ್ಶಿ ವಿನೋದ್ ಥೋಮರ್ ತಿಳಿಸಿದ್ದಾರೆ.


 ‘‘ಸ್ಯಾಂಪಲ್‌ನಲ್ಲಿ ಭಾರೀ ಪ್ರಮಾಣದ ದ್ರವ್ಯವಿತ್ತು. ಇದನ್ನು ನಂಬಲು ಸಾಧ್ಯವಿಲ್ಲ. ಇದರ ಹಿಂದೆ ಪಿತೂರಿ ಅಡಗಿದೆ. ಯಾವ ಕುಸ್ತಿಪಟು ಕೂಡ ಇಷ್ಟೊಂದು ಡೋಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಶಿಬಿರದಲ್ಲಿದ್ದ ಇನ್ನುಳಿದ ಯಾವ ಕುಸ್ತಿಪಟುಗಳು ಡೋಪಿಂಗ್ ಟೆಸ್ಟ್‌ನಲ್ಲಿ ಸಿಕ್ಕಿಬಿದ್ದಿಲ್ಲ. ಕೇವಲ ಇವರಿಬ್ಬರು ಮಾತ್ರ ಫೇಲಾಗಿದ್ದಾರೆ. ಕಾಣದ ಕೈ ಕೆಲಸ ಮಾಡಿರುವ ಸಂಕೇತ ಇದಾಗಿದೆ’’ ಎಂದು ಥೋಮರ್ ಆರೋಪಿಸಿದರು.


 ‘‘ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ನಾನು ಯಾವುದೇ ನಿಷೇಧಿತ ದ್ರವ್ಯವನ್ನು ಸೇವಿಸಿಲ್ಲ. ನಾನು ಮುಗ್ದ. ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾದ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು 74 ಕೆಜಿ ವಿಭಾಗದಲ್ಲಿ ಸುಶೀಲ್ ಕುಮಾರ್‌ರನ್ನು ಸ್ಪರ್ಧೆಯಲ್ಲಿ ಹಿಂದಿಕ್ಕಿ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದ ನರಸಿಂಗ್ ಯಾದವ್ ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X