Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪಂಜಾಬ್ ಕಡೆ ಕಣ್ಣೆತ್ತಿ ನೋಡಬಾರದು’

‘ಪಂಜಾಬ್ ಕಡೆ ಕಣ್ಣೆತ್ತಿ ನೋಡಬಾರದು’

ಆದೇಶಿಸಿದ್ದ ಬಿಜೆಪಿ; ಸಿಧು ಆರೋಪ

ವಾರ್ತಾಭಾರತಿವಾರ್ತಾಭಾರತಿ25 July 2016 11:54 PM IST
share

ಹೊಸದಿಲ್ಲಿ, ಜು.25: ವಾರದ ಬಳಿಕ ವೌನ ಮುರಿದಿರುವ ನವಜೋತ್ ಸಿಂಗ್ ಸಿಧು, ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಂಜಾಬ್‌ನತ್ತ ‘ಕಣ್ಣೆತ್ತಿಯೂ ನೋಡಬಾರದು’ ಎಂದು ತನಗೆ ತಾಕೀತು ಮಾಡಿದ್ದ ಕಾರಣದಿಂದ ತಾನು ಬಿಜೆಪಿ ಸಂಸದನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಂದು ಇಂದು ಹೇಳಿದ್ದಾರೆ.

ಅವರ ಹೆಗ್ಗುರುತಾದ ದ್ವಿಪದಿಗಳಿಂದ ಕೂಡಿದ್ದ ಕ್ರೋಧತಪ್ತ ಹೇಳಿಕೆಯೊಂದರಲ್ಲಿ ಸಿಧು, ಅವರು ಅರವಿಂದ ಕೇಜ್ರಿವಾಲರ ಆಮ್‌ಆದ್ಮಿ ಪಕ್ಷ(ಎಎಪಿ) ಸೇರುತ್ತಾರೆಯೇ ಎಂಬ ಕುರಿತಾದ ಪ್ರಶ್ನೆಗಳಿಂದ ನುಣುಚಿ ಕೊಳ್ಳಲು ಯಶಸ್ವಿಯಾದರು.
ತನಗೆ ಪಂಜಾಬ್‌ನಿಂದ ದೂರವಿರುವಂತೆ ಸೂಚಿಸಲಾಗಿತ್ತು. ತನ್ನ ಬೇರುಗಳನ್ನು ತಾನು ಹೇಗೆ ತ್ಯಜಿಸಲಿ? ಮೊದಲ ಸಲ ಏನೋ ತಪ್ಪಾಗಿದೆ ಎನ್ನಬಹುದು. ಆದರೆ, ಇದು ನಾಲ್ಕನೆ ಬಾರಿ ನಡೆದಿದೆ. ಅದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಕೋಪ ಕಾರುತ್ತಿದ್ದ ಕಣ್ಣುಗಳೊಂದಿಗೆ ಸಿಧು ಹೊಸದಿಲ್ಲಿಯಲ್ಲಿ ಪತ್ರಕರ್ತರಿಗೆ ತಿಳಿಸಿದರು.
ಸಂಕಷ್ಟವೊದಗಿದ್ದಾಗ ಸಿಧು, ಸಿಧು ಎಂದಿದ್ದವರೇ ಈಗ, ಪಂಜಾಬ್‌ನತ್ತ ತಿರುಗಿಯೂ ನೋಡದಂತೆ ತನಗೆ ತಿಳಿಸುತ್ತಾರೆ. ತಾನೇನಾದರೂ ತಪ್ಪು ಮಾಡಿದ್ದೇನೆಯೇ? ಕನಿಷ್ಠ ತನ್ನ ಅಪರಾಧವನ್ನಾದರೂ ಹೇಳಲಿ. ಕೆಲವರ ಸ್ವಹಿತಾಸಕ್ತಿಯ ರಕ್ಷಣೆಗಾಗಿ ತಾನು ದೂರ ಉಳಿಯಬೇಕೇ ಎಂದವರು ಪ್ರಶ್ನಿಸಿದರು.
ಪ್ರಪಂಚದಲ್ಲಿ ಪಂಜಾಬ್‌ಗಿಂತ ಯಾವುದೇ ಪಕ್ಷವೂ ದೊಡ್ಡದಲ್ಲ. ತಾನು ಪರಿಣಾಮವನ್ನು ಎದುರಿಸ ಬಯಸಿದ್ದೇನೆ ಎಂದು ಸಿಧು ಘೋಷಿಸಿದರು.
2004ರ ರಾಷ್ಟ್ರೀಯ ಚುನಾವಣೆಯ ವೇಳೆ, 14 ದಿನಕ್ಕೆ ಮೊದಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತನಗೆ ಕರೆ ಮಾಡಿ ಅಮೃತಸರದಿಂದ ಸ್ಪರ್ಧಿಸುವಂತೆ ವಿನಂತಿಸಿದ್ದರು. ತಾನಲ್ಲಿ ಸ್ಪರ್ಧಿಸಿ ಗೆದ್ದಿದ್ದೆ. ಉತ್ತರಭಾರತದಲ್ಲಿ ತಾನೊಬ್ಬನೇ ಅವರ ಗೆಲುವಿನ ಅಭ್ಯರ್ಥಿಯೆಂಬ ದಿನಗಳಿದ್ದವು. ಬಳಿಕ ಮೋದಿ ಅಲೆ ಬಂದಿತು. ಅದು ಕೇವಲ ವಿಪಕ್ಷಗಳನ್ನು ಮಾತ್ರ ಮುಳುಗಿಸಿದುದಲ್ಲ. ಸಿಧುವನ್ನೂ ಮುಳುಗಿಸಿತು ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X