Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಧ್ರೋತ್ತರ ದಂಗೆ ಪ್ರಕರಣ: ಏಳು ಜನರಿಗೆ...

ಗೋಧ್ರೋತ್ತರ ದಂಗೆ ಪ್ರಕರಣ: ಏಳು ಜನರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ25 July 2016 11:57 PM IST
share

ಅಹ್ಮದಾಬಾದ್, ಜು.25: 2002ರ ಗೋಧ್ರೋತ್ತರ ದಂಗೆ ಸಂದರ್ಭ ಅಹ್ಮದಾಬಾದ್ ಜಿಲ್ಲೆಯ ವಿರಾಮಗಾಮ್ ಪಟ್ಟಣದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದ ಮೂವರ ಹತ್ಯೆ ಪ್ರಕರಣದಲ್ಲಿ 2011ರಲ್ಲಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಮೂವರು ಸೇರಿದಂತೆ ಏಳು ಜನರಿಗೆ ಗುಜರಾತ್ ಉಚ್ಚ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಈ ಏಳೂ ಜನರ ವಿರುದ್ಧದ ಕೊಲೆ ಮತ್ತು ಇತರ ಆರೋಪಗಳನ್ನು ನ್ಯಾಯಾಲಯವು ಎತ್ತಿ ಹಿಡಿಯಿತು. ಈ ಪೈಕಿ ಮೂವರನ್ನು ಖುಲಾಸೆಗೊಳಿದ್ದ ವಿಚಾರಣಾ ನ್ಯಾಯಾಲಯವು ಉಳಿದ ನಾಲ್ವರಿಗೆ ಲಘು ಅಪರಾಧಗಳಿಗಾಗಿ ಕಡಿಮೆ ಪ್ರಮಾಣದ ಶಿಕ್ಷೆಯನ್ನು ವಿಧಿಸಿತ್ತು. ಕೊಲೆ ಆರೋಪವನ್ನು ಅದು ಕೈಬಿಟ್ಟಿತ್ತು.
ಆದರೆ ಎಲ್ಲ ಏಳೂ ಆರೋಪಿಗಳ ವಿರುದ್ಧದ ಕೊಲೆ ಆರೋಪವನ್ನು ಎತ್ತಿ ಹಿಡಿದ ನ್ಯಾಯಾಧೀಶರಾದ ಹರ್ಷ ದೇವಾನಿ ಮತ್ತು ಬೀರಸೇನ್ ವೈಷ್ಣವ ಅವರನ್ನೊಳಗೊಂಡ ವಿಭಾಗೀಯ ಪೀಠವು ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಜೊತೆಗೆ ಇತರ ಇಬ್ಬರು ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ದೃಢಪಡಿಸಿತು. ಒಟ್ಟು 10 ಆರೋಪಿಗಳ ಪೈಕಿ ಒಂಬತ್ತು ಜನರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.
2002,ಫೆ.28ರಂದು ಈ ಘಟನೆ ನಡೆದಿತ್ತು. ಗುಂಪೊಂದು ಸ್ಥಳೀಯ ಮಸೀದಿಯನ್ನು ಧ್ವಂಸಗೊಳಿಸುತ್ತಿದ್ದಾಗ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಅದನ್ನು ತಡೆಯಲು ಮುಂದಾಗಿದ್ದರು. ಅವರ ಮೇಲೆ ದಾಳಿ ನಡೆಸಿದ್ದ ಗುಂಪು ಸ್ಥಳದಲ್ಲೇ ಇಬ್ಬರನ್ನು ಹತ್ಯೆಗೈದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಇನ್ನೋರ್ವ ಅಹ್ಮದಾಬಾದ್‌ನ ವಿಎಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಗೋಧ್ರೋತ್ತರ ದಂಗೆಗಳಿಗೆ ಸಂಬಂಧಿಸದಂತೆ ಇದು ಉಚ್ಚ ನ್ಯಾಯಾಲಯವು ವಿಚಾರಣಾ ನ್ಯಾಯಾಲಯದ ತೀರ್ಪಿಗೆ ವಿರುದ್ಧದ ತೀರ್ಪನ್ನು ನೀಡಿರುವ ಪ್ರಕರಣವಾಗಿದೆ.ಕಳೆದ ವಾರ ಉಚ್ಚ ನ್ಯಾಯಾಲಯವು ಮೆಹ್ಸಾನಾ ಜಿಲ್ಲೆಯ ಮೇಟಾ ಅದ್ರಜ್ ಗ್ರಾಮದಲ್ಲಿ ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣದ 27 ಆರೋಪಿಗಳ ಪೈಕಿ 10 ಜನರನ್ನು ಅಪರಾಧಿಗಳೆಂದು ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X