ಎರಡನೆ ದಿನವೂ ಮುಂದುವರಿದ ಬಸ್ ನೌಕರರ ಮುಷ್ಕರ

ಬೆಂಗಳೂರು, ಜು26: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಎರಡನೆ ದಿನವೂ ಮುಂದುವರಿದಿದ್ದು, ಬಸ್ ಇಲ್ಲದೆ ಜನ ಸಾಮಾನ್ಯರು ಪರದಾಡುವಂತಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಮುಷ್ಕರದ ಬಿಸಿ ತಟ್ಟಿದೆ. ಕರಾವಳಿ ಪ್ರದೇಶದಲ್ಲಿ ಖಾಸಗಿ ಬಸ್ ಗಳ ಪೈಪೋಟಿ ಇರುವ ಹಿನ್ನೆಲೆಯಲ್ಲಿ ಮುಷ್ಕರದಿಂದ ಅಷ್ಟೇನೂ ತೊಂದರೆಯಾಗಿಲ್ಲ.
ಸಾರಿಗೆ ಸಂಸ್ಥೆಯ ಬಸ್‌ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮವಾಗಿ ಸುಮಾರು 17 ಕೋಟಿ ರೂ. ನಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
ನಗರದಲ್ಲಿ ಆಟೋ ರಿಕ್ಷಾಗಳಿಗೆ ಎಲ್ಲಿಲ್ಲದ ಬೇಡಿಕೆ. ಪ್ರಯಾಣಿಕರು ದುಪ್ಪಟ್ಟು ಹಣ ನೀಡಿ ಪ್ರಯಾಣಿಸುವಂತಾಗಿದೆ. .
Next Story





