Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಕರು ಸೇನೆಗೆ ಸೇರಲು ಮುಂದಾಗಬೇಕು:...

ಯುವಕರು ಸೇನೆಗೆ ಸೇರಲು ಮುಂದಾಗಬೇಕು: ಕಾರ್ಗಿಲ್ ವೀರಯೋಧ ಪ್ರವೀಣ್ ಕರೆ

ವಾರ್ತಾಭಾರತಿವಾರ್ತಾಭಾರತಿ26 July 2016 8:57 PM IST
share
  • ಯುವಕರು ಸೇನೆಗೆ ಸೇರಲು ಮುಂದಾಗಬೇಕು: ಕಾರ್ಗಿಲ್ ವೀರಯೋಧ ಪ್ರವೀಣ್ ಕರೆ
  • ಯುವಕರು ಸೇನೆಗೆ ಸೇರಲು ಮುಂದಾಗಬೇಕು: ಕಾರ್ಗಿಲ್ ವೀರಯೋಧ ಪ್ರವೀಣ್ ಕರೆ

ಉಳ್ಳಾಲ, ಜು.26: ಕುತ್ತಾರುವಿನ ದುರ್ಗಾವಾಹಿನಿ ಮಹಿಳಾ ಮಂಡಳಿ ಸಭಾಗೃಹದಲ್ಲಿ ಮಂಗಳವಾರ ಕರಾವಳಿ ಸಾಂಸ್ಕೃತಿಕ ಪರಿಷತ್ ಉಳ್ಳಾಲದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ ಆಚರಣೆಯಲ್ಲಿ ಕಾರ್ಗಿಲ್ ಯುದ್ಧದಲ್ಲಿ ಶತ್ರು ರಾಷ್ಟ್ರದ ಸೇನೆಯೊಂದಿಗೆ ಸೆಣಸಿದ್ದ ಮಂಗಳೂರು ಬೋಳೂರಿನ ನಿವೃತ್ತ ಯೋಧ ಪ್ರವೀಣ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರವೀಣ್, ಹುಟ್ಟು ಇದ್ದ ಮೇಲೆ ಸಾವು ಕೂಡಾ ನಿಶ್ಚಿತವಾಗಿಯೇ ಇದೆ. ಅಂತಹ ಸಾವು ನಮಗೆ ಯಾವ ಗಳಿಗೆಯಲ್ಲೂ ಬರಬಹುದು. ಯುವಕರು ಯಾವುದೋ ಅರ್ಥಹೀನ ಕಾರಣಗಳಿಗೆ ಅಮಾನುಷವಾಗಿ ಬೀದಿ ಹೆಣವಾಗುವುದಕ್ಕಿಂತ ಭಾರತೀಯ ಸೇನೆಗೆ ಸೇರಿ ತಾಯಿ ಭಾರತಿಯ ರಕ್ಷಣೆಗಾಗಿ ಪ್ರಾಣ ಬಲಿದಾನ ನೀಡಿದರೆ ಸತ್ತ ನಂತರವೂ ಅಮರರಾಗುವ ಸುಯೋಗ ದೊರೆಯುವುದು ಎಂದು ಅಭಿಪ್ರಾಯಪಟ್ಟರು.

ಯುವಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಲು ಉತ್ಸಾಹ ಮೈಗೂಡಿಸುವುದರ ಜೊತೆಗೆ ಯುವಕರನ್ನು ಸೇನೆಗೆ ಸೇರುವಂತೆ ಬಂಧು,ಬಾಂಧವರು,ಸ್ನೇಹಿತರು ಬೆನ್ನು ತಟ್ಟಿ ಪ್ರೋತ್ಸಾಹಿಸುವಂತಾಗಬೇಕೆಂದು ಕರೆ ನೀಡಿದರು.

ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನದ ಸೈನ್ಯದೊಂದಿಗೆ ರಣಭೂಮಿಯಲ್ಲಿ ಜೀವದ ಹಂಗು ತೊರೆದು ಹೋರಾಡಿ ಬದುಕುಳಿದ ಸೈನಿಕರಲ್ಲಿ ಪ್ರವೀಣ್ ಕೂಡಾ ಒಬ್ಬರಾಗಿದ್ದು,ಯುದ್ಧದಲ್ಲಿ ದೇಹಕ್ಕೆ ಹೊಕ್ಕಿದ್ದ ಮದ್ದುಗುಂಡುಗಳಿಂದ ಅವರ ದೇಹದ ಒಂದು ಪಾರ್ಶ್ವ ಈಗಲೂ ಜರ್ಝರಿತವಾಗಿದೆ. ಇದಲ್ಲದೆ ಅವರ ಎರಡು ವರುಷದ ಹೆಣ್ಣುಮಗು ವೃದ್ಧಿಯು ಹುಟ್ಟು ವಿಕಲಾಂಗೆಯಾಗಿದ್ದು, ಅವಳ ಪಾಲನೆಗಾಗಿ ಪ್ರವೀಣ್ ಪತ್ನಿಯೂ ಉಪನ್ಯಾಸಕಿ ಕೆಲಸ ಬಿಟ್ಟು ಮನೆಯಲ್ಲೇ ಉಳಿದಿದ್ದು ಕೌಟುಂಬಿಕ ವಿಚಾರದಲ್ಲಿ ಮಾನಸಿಕವಾಗಿ ಎದೆಗುಂದುವಂತಾಗಿದೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯಕ್ಕೆ ಫ್ಯಾಕ್ಸ್ ಮುಖಾಂತರ ವಿಜ್ಞಾಪನಾ ಪತ್ರ ರವಾನಿಸಿ ಕುಟುಂಬಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ನೆರವು ನೀಡುವಂತೆ ಕೋರುವುದಾಗಿ ಹೇಳಿದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾರ್ಗದರ್ಶಕ ಪಿ.ಎಸ್. ಪ್ರಕಾಶ್, ಮಾಜಿ ಶಾಸಕ ಜಯರಾಮ್ ಶೆಟ್ಟಿ, ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ದೇರಳಕಟ್ಟೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಗುರುಸ್ವಾಮಿ ವಿಶ್ವನಾಥ್ ಕಾಯರ್‌ಪಳಿಕೆ, ಮಾಜಿ ಮಂಡಲ ಪ್ರಧಾನ ಪರಮೇಶ್ವರ ಶೆಟ್ಟಿ, ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಅಧ್ಯಕ್ಷ ಕೆ.ಟಿ.ಸುವರ್ಣ, ಮುಖಂಡರಾದ ಜೀವನ್ ಕೆರೆಬೈಲು, ಹರೀಶ್ ಪೂಜಾರಿ ಅಂಬ್ಲಮೊಗರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X