ಉಡುಪಿ ಎಸ್ಪಿ ಅಣ್ಣಾಮಲೈ ವರ್ಗಾವಣೆ
ಉಡುಪಿ ಜಿಲ್ಲಾ ಎಸ್ಪಿ ಸ್ಥಾನಕ್ಕೆ ಕೆ.ಟಿ.ಬಾಲಕೃಷ್ಣ

ಉಡುಪಿ, ಜು.26: ಕಳೆದ ಒಂದೂವರೆ ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅಣ್ಣಾಮಲೈ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
2011ರ ಐಪಿಎಸ್ ಬ್ಯಾಚ್‌ನ ಅಣ್ಣಾಮಲೈ ಕಾರ್ಕಳದಲ್ಲಿ ಒಂದೂವರೆ ವರ್ಷಗಳ ಕಾಲ ಪ್ರೊಬೆಷನರಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ, 2015ರ ಜ.1ಕ್ಕೆ ಉಡುಪಿ ಜಿಲ್ಲಾ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡರು.
ಜಿಲ್ಲೆಯಲ್ಲಿ ಹಲವು ಜನಸ್ನೇಹಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ವಿಶ್ವಾಸ ಗಳಿಸಿಕೊಂಡರು. ಆರು ತಿಂಗಳ ಹಿಂದೆ ಇವರ ವರ್ಗಾವಣೆ ವಂದತಿಗೆ ಇಡೀ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಇದೀಗ ಅಣ್ಣಾಮಲೈ ಅವರಿಂದ ತೆರವಾಗಿರುವ ಉಡುಪಿ ಜಿಲ್ಲಾ ಎಸ್ಪಿ ಸ್ಥಾನಕ್ಕೆ ಈಗ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ಕೆ.ಟಿ.ಬಾಲಕೃಷ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story





