ಸಿ.ಎಂ.ಪುತ್ರನ ಆರೋಗ್ಯಕ್ಕಾಗಿ ಉಳ್ಳಾಲ ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ

ಉಳ್ಳಾಲ,ಜು.27: ಅನಾರೋಗ್ಯದಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರನ ಆರೋಗ್ಯಕ್ಕಾಗಿ ಉಳ್ಳಾಲ ದರ್ಗಾದಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಉಳ್ಳಾಲ್ ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಹಾಜಿ ಅಹ್ಮದ್ ಬಾವ ಮುಸ್ಲಿಯಾರ್ ದುವಾ ನೆರವೇರಿಸಿದರು.
ಈ ಸಂದರ್ಭ ಉಪಾಧ್ಯಕ್ಷ ಯು.ಕೆ. ಮೋನು ಕೋಟೆಪುರ, ಪ್ರಧಾನ ಕಾರ್ಯದರ್ಶಿ ತ್ವಾಹ ಮುಹಮ್ಮದ್, ಜೊತೆ ಕಾರ್ಯದರ್ಶಿ ನೌಷದ್ ಮೇಲಂಗಡಿ, ಸದಸ್ಯರಾದ ಆಸಿಫ್ ಅಬ್ದುಲ್ಲ, ಹಮ್ಮಬ್ಬ ಕೋಟೆಪುರ, ಕೆ. ಮುಹಮ್ಮದ್, ಮಾಜಿ ಪುರಸಭಾ ಅಧ್ಯಕ್ಷ ಬಾಝಿಲ್ ಡಿ’ಸೋಜಾ, ಪುರಸಭಾ ಮಾಜಿ ಅಧ್ಯಕ್ಷ ಯು.ಎ ಇಸ್ಮಾಯೀಲ್, ನಗರ ಸಭಾ ಸದಸ್ಯ ಮುಸ್ತಾಫ ಅಬ್ದುಲ್ಲ, ಮುಅಝ್ಝಿನ್ ಮನ್ಸೂರ್ ಮುಸ್ಲಿಯಾರ್, ಕಾರ್ಯ ನಿರ್ವಾಹಣಾಧಿಕಾರಿ ಸೈಯ್ಯದ್ ಶಿಹಾಬ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಉಳ್ಳಾಲದಲ್ಲಿ ಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿರುವ ಆನಂದ ಕಬೂರಿ ಅನಾರೋಗ್ಯದಿಂದ ಇದ್ದು ಅವರೂ ಗುಣಮುಖವಾಗಲೆಂದು ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.





