ನೇಪಾಳ: ಭಾರೀ ಮಳೆ, ಭೂಕುಸಿತ; 33 ಸಾವು

ಕಠ್ಮಂಡು, ಜು. 27: ನೇಪಾಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 33 ಮಂದಿ ಮೃತಪಟ್ಟಿದ್ದಾರೆ ಎಂದು ಸರಕಾರದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ದೇಶಾದ್ಯಂತದ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಮತ್ತು ಭೂಕುಸಿತಗಳಿಗೆ ಕಾರಣವಾಗಿವೆ. ಹಲವಾರು ಮನೆಗಳು ಕೊಚ್ಚಿಹೋಗಿವೆ.
ರಾಜಧಾನಿಯಲ್ಲಿರುವ ಶಾಲೆಯೊಂದು ಆಂಶಿಕವಾಗಿ ಕುಸಿದಾಗ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
‘‘ಹಲವಾರು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಮತ್ತು ಭೂಕುಸಿತಗಳ ಹಿನ್ನೆಲೆಯಲ್ಲಿ ಸೋಮವಾರದಿಂದೀಚೆಗೆ 33 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ 23 ಮಂದಿ ನಾಪತ್ತೆಯಾಗಿದ್ದಾರೆ’’ ಎಂದು ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು.
Next Story





