Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಮಹಾದಾಯಿ: ಕರ್ನಾಟಕಕ್ಕೆ ಅನ್ಯಾಯ

ಮಹಾದಾಯಿ: ಕರ್ನಾಟಕಕ್ಕೆ ಅನ್ಯಾಯ

ವಾರ್ತಾಭಾರತಿವಾರ್ತಾಭಾರತಿ27 July 2016 11:40 PM IST
share
ಮಹಾದಾಯಿ: ಕರ್ನಾಟಕಕ್ಕೆ ಅನ್ಯಾಯ

ಅಂತಾರಾಜ್ಯ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ. ಕುಡಿಯುವ ನೀರಿಗಾಗಿ ಉತ್ತರಕರ್ನಾಟಕದ ಜನತೆ ಕಳೆದ ಒಂದು ವರ್ಷದಿಂದ ಹೋರಾಡುತ್ತಾ ಬಂದಿದ್ದಾರೆ. ಮಹಾದಾಯಿ ಯೋಜನೆ ಕಾರ್ಯಗತಗೊಂಡರೆ ಆ ಭಾಗದ ಕುಡಿಯುವ ನೀರಿನ ಸಮಸ್ಯೆ ಕೊಂಚ ಮಟ್ಟಿಗೆ ನಿವಾರಣೆಯಾಗುತ್ತದೆ ಎಂಬುದು ಅವರ ಆಶಯವಾಗಿತ್ತು.

ಆದರೆ, ಗೋವಾ ಸರಕಾರ ಅಡ್ಡಗಾಲು ಹಾಕಿದ್ದರಿಂದ ಈ ವಿವಾದ ನ್ಯಾಯಾಧೀಕರಣದ ಮುಂದೆ ಹೋಗಿತ್ತು. ಮಹಾದಾಯಿನ್ಯಾಯಾಧೀಕರಣದಿಂದ ತಮಗೆ ನ್ಯಾಯ ಸಿಗಬಹುದು ಎಂದು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದ ಈ ಭಾಗದ ಜನತೆಗೆ ಈಗ ನಿರಾಶೆಯಾಗಿದೆ. 7.5 ಟಿಎಂಸಿ ನೀರಿಗಾಗಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯನ್ನು ನ್ಯಾಯಾಧಿಕರಣ ವಜಾಮಾಡಿದೆ. ಇದರಿಂದ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಜನತೆಗೆ ತೀವ್ರ ನಿರಾಶೆಯಾಗಿದೆ. ಅಂತಲೇ ಅವರು ರೊಚ್ಚಿಗೆದ್ದು ಹೋರಾಟಕ್ಕೆ ಬೀದಿಗಿಳಿದಿದ್ದಾರೆ. ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಗಜೇಂದ್ರಗಡ, ಬೆಳಗಾವಿ ಮತ್ತು ಬೈಲಹೊಂಗಲಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ವರ್ಷಗಳಿಂದ ಮಳೆ ಇಲ್ಲದೆ ತತ್ತರಿಸಿದ್ದ ಜನತೆಗೆ ಮಹಾದಾಯಿ ನ್ಯಾಯಾಧಿಕರಣ ನ್ಯಾಯ ಒದಗಿಸಿಕೊಡುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಬುಧವಾರ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಬಳಕೆಗೆ ಅವಕಾಶ ಇಲ್ಲವೆಂದು ಸ್ಪಷ್ಟವಾಗಿ ಹೇಳಲಾಗಿದೆ.

ನಮ್ಮ ರಾಜ್ಯದಲ್ಲಿ ಹರಿದು ಗೋವಾದ ಮಹಾದಾಯಿ ನದಿಯನ್ನು ಸೇರಿಕೊಳ್ಳುವ ಹಳ್ಳಕೊಳ್ಳಗಳ ನೀರನ್ನು ನಾವು ಬಳಸಕೂಡದೆಂದು ನ್ಯಾಯಾಧಿಕರಣ ನೀಡಿದ ತೀರ್ಪು ದೇಶದ ಒಕ್ಕೂಟ ವ್ಯವಸ್ಥೆಗೆ ನೀಡಿದ ಕೊಡಲಿಪೆಟ್ಟಾಗಿದೆ. ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸೌಹಾರ್ದಯುತವಾಗಿ ಈ ಸಮಸ್ಯೆಯನ್ನು ಬಗೆಹರಿಸಿ ಕೊಳ್ಳಬಹುದಾಗಿತ್ತು. ಆದರೆ, ಅದಕ್ಕೆ ಬದಲಾಗಿ ಕೇಂದ್ರ ಸರಕಾರ ನ್ಯಾಯಾಧಿಕರಣದ ಮುಂದೆ ತನ್ನ ವಕೀಲರನ್ನು ಕಳುಹಿಸಿ ಗೋವಾ ಸರಕಾರದ ಪರವಾಗಿ ವಾದ ಮಾಡಲು ಸೂಚಿಸಿದೆ.

ಈ ರೀತಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದರೂ ಕೇಂದ್ರ ಸಂಪುಟದಲ್ಲಿರುವ ರಾಜ್ಯದ ಸಚಿವರು ತುಟಿ ಮುಚ್ಚಿಕೊಂಡು ಕುಳಿತಿದ್ದಾರೆ. ಅಂತಲೇ ಈ ಜನಪ್ರತಿನಿಧಿಗಳ ವಿರುದ್ಧ ಉತ್ತರಕರ್ನಾಟಕದ ಜನ ಆಕ್ರೋಶಗೊಂಡು ಬೀದಿಗಿಳಿದಿದ್ದಾರೆ. ಮಹಾದಾಯಿ ನದಿನೀರು ಹಂಚಿಕೆ ಪ್ರಶ್ನೆಯಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಇದರಿಂದ ಸ್ಪಷ್ಟವಾಗುತ್ತದೆ. ನ್ಯಾಯಾಧಿಕರಣದ ಮುಂದೆ ಈ ಸಮಸ್ಯೆ ಇತ್ಯರ್ಥವಾಗುವುದಿಲ್ಲ ಎಂದು ತಿಳಿದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವರ್ಷ ಸರ್ವಪಕ್ಷ ನಿಯೋಗವೊಂದನ್ನು ಪ್ರಧಾನಿ ಬಳಿ ಕರೆದುಕೊಂಡು ಹೋಗಿದ್ದರು. ಈ ನಿಯೋಗದಲ್ಲಿ ಬಿಜೆಪಿ ನಾಯಕರು ಮಾತ್ರವಲ್ಲದೇ, ಉಳಿದ ಕನ್ನಡಪರ ಸಂಘಟನೆಗಳ ಮುಖಂಡರಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ನಿರಾಕರಿಸಿದರು.

ಅವರದೇ ಪಕ್ಷದ ಗೋವಾ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಕರೆದು ಕಿವಿಮಾತು ಹೇಳಿದ್ದರೆ ಈ ಪ್ರಶ್ನೆ ಇತ್ಯರ್ಥವಾಗುತ್ತಿತ್ತು. ಪ್ರಧಾನಿ ಅವರು ಉದ್ದೇಶಪೂರ್ವಕವಾಗಿ ಗೋವಾ ಮತ್ತು ಮಹಾರಾಷ್ಟ್ರಗಳ ಕಾಂಗ್ರೆಸ್ ಮುಖಂಡರನ್ನು ಕರೆದುಕೊಂಡು ಬನ್ನಿ ಎಂಬ ಉಡಾಫೆಯ ಉತ್ತರವನ್ನು ನೀಡಿದ್ದರು. ಆಗ ಕರ್ನಾಟಕದ ನಿಯೋಗದಲ್ಲಿದ್ದ ಬಿಜೆಪಿ ಮುಖಂಡರು ಬಾಯಿಮುಚ್ಚಿಕೊಂಡು ಕುಳಿತಿದ್ದರು. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದ ಬಿಜೆಪಿ ಸಂಸದರು ತಮ್ಮನ್ನು ಚುನಾಯಿಸಿದ ಜನತೆಗೆ ದ್ರೋಹ ಮಾಡಿದರು. ಉತ್ತರಕರ್ನಾಟಕದ ಜನ ಕೃಷಿ ಚಟುವಟಿಕೆಗಳಿಗಾಗಿ ನೀರನ್ನು ಕೇಳಿರಲಿಲ್ಲ. ಹುಬ್ಬಳ್ಳಿ, ಧಾರವಾಡ, ಗದಗ ಮುಂತಾದ ಮಹಾನಗರಗಳಿಗೆ ಕುಡಿಯುವ ನೀರಿಗಾಗಿ 7.5 ಟಿಎಂಸಿ ನೀರನ್ನು ಅವರು ಕೇಳಿದ್ದರು. ಅದರಲ್ಲೂ ಅವರಿಗೆ ಅನ್ಯಾಯವಾಗಿದೆ. ಕಳಸಾ ಬಂಡೂರಿ ಸಮಸ್ಯೆ ಇತ್ಯರ್ಥವಾಗಬೇಕಿದ್ದರೆ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಆದರೆ, ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಚಳವಳಿಯಲ್ಲಿ ರಾಜಕೀಯ ಸ್ವಹಿತಾಸಕ್ತಿಯ ಲಾಭ ಹುಡುಕಲು ಯತ್ನಿಸಿದರು. ಅಂತಲೇ ಚಳವಳಿಯು ದಿಕ್ಕುತಪ್ಪಿ ಎಲ್ಲೆಲ್ಲಿಯೋ ಹೋಯಿತು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂದಿನ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಸ್ಯೆ ಇತ್ಯರ್ಥವಾಗದಂತೆ ಮಾಡಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಕೂಡಾ ಅವೆರಡೂ ಪಕ್ಷಗಳನ್ನು ಮೂಲೆಗುಂಪು ಮಾಡಲು ನೋಡಿದರು. ಇವೆಲ್ಲದರ ಒಟ್ಟು ಪರಿಣಾಮವೆಂದರೆ ಉತ್ತರಕರ್ನಾಟಕದ ಜನತೆಗೆ ತುಂಬಾ ಅನ್ಯಾಯವಾಗಿದೆ. ಈ ಹಿಂದೆ ಕಾವೇರಿ ನದಿ ನೀರು ಹಂಚಿಕೆ ಪ್ರಶ್ನೆಯಲ್ಲೂ ದಕ್ಷಿಣ ಕರ್ನಾಟಕದ ಜನತೆಗೆ ಇದೇ ರೀತಿ ಅನ್ಯಾಯವಾಗಿದೆ. ಇದಕ್ಕೆ ಕಾರಣವೆಂದರೆ ಕೇಂದ್ರದಲ್ಲಿ ಕರ್ನಾಟಕದ ಪರವಾಗಿ ಸರಕಾರದ ಮೇಲೆ ಒತ್ತಡ ತರುವಂತಹ ಪ್ರಭಾವಿಯಾದ ಲಾಬಿ ಹಿಂದೆಯೂ ಇರಲಿಲ್ಲ. ಈಗಲೂ ಇಲ್ಲ. ಹೀಗಾಗಿ ಕರ್ನಾಟಕದ ಯೋಜನೆಗಳೆಲ್ಲಾ ನನೆಗುದಿಗೆ ಬಿದ್ದಿವೆ. ಮಹಾದಾಯಿ ನ್ಯಾಯಾಧಿಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕಾದರೆ ಕೇಂದ್ರ ಸಂಪುಟದಲ್ಲಿರುವ ಕರ್ನಾಟಕದ ಸಂಸದರು ತಕ್ಷಣ ರಾಜೀನಾಮೆ ನೀಡಬೇಕು. ಕುಡಿಯುವ ನೀರಿಗಾಗಿ ಹೋರಾಟಕ್ಕಿಳಿದಿರುವ ಜನತೆಯ ಜೊತೆಗೆ ಬೀದಿಯಲ್ಲಿ ಬಂದು ನಿಲ್ಲಬೇಕು. ಇಲ್ಲವಾದರೆ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ತಂದು ಸೌಹಾರ್ದಯುತವಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಪರಿಹಾರ ಸೂತ್ರ ರೂಪಿಸಬೇಕು. ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಬೇಕೆಂದಿದ್ದರೆ ಪ್ರಧಾನಮಂತ್ರಿಗಳು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿ ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ನ್ಯಾಯಾಧಿಕರಣದ ಆಚೆಗೆ ಸೌಹಾರ್ದಯುತವಾದ ಪರಿಹಾರವನ್ನು ಕಂಡುಹಿಡಿಯಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X