Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ...

ಇನ್ನು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಎಕ್ಸಿಟ್ ಎಕ್ಸಾಮ್

ವಾರ್ತಾಭಾರತಿವಾರ್ತಾಭಾರತಿ27 July 2016 11:40 PM IST
share

ಹೊಸದಿಲ್ಲಿ, ಜು.27: ವೈದ್ಯಕೀಯ ಶಿಕ್ಷಣದ ಗುಣಮಟ್ಟ ಖಾತ್ರಿಪಡಿಸುವ ಸಲುವಾಗಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನಿರ್ಗಮನ ಪರೀಕ್ಷೆಯನ್ನು ಆಯೋಜಿಸುವ ಬಗ್ಗೆ ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸಿದೆ.
ದೇಶದ ಎಲ್ಲ ಸರಕಾರಿ ಹಾಗೂ ಖಾಸಗಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಶಿಕ್ಷಣ ಗುಣಮಟ್ಟ ಖಾತ್ರಿಪಡಿಸಲು ಮತ್ತು ಭಾರತೀಯ ವೈದ್ಯರ ಗುಣಮಟ್ಟದ ಬಗೆಗಿನ ಆತಂಕವನ್ನು ದೂರ ಮಾಡುವ ಸಲುವಾಗಿ ಈ ಕ್ರಮಕ್ಕೆ ಮುಂದಾಗಿದೆ.
ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ನೇತೃತ್ವದ ಉನ್ನತ ಮಟ್ಟದ ಸಮಿತಿ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ವ್ಯಾಪಕ ಕ್ರಮಗಳನ್ನು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಕೇಂದ್ರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಪ್ರಧಾನಿಯವರ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಿಶ್ರಾ ಹಾಗೂ ನೀತಿ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಭ್‌ಕಾಂತ್ ಈ ಸಮಿತಿಯ ಸದಸ್ಯರಾಗಿದ್ದರು.
ಭಾರತೀಯ ವೈದ್ಯಕೀಯ ಮಂಡಳಿಯನ್ನು ರದ್ದು ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ರಚಿಸುವಂತೆಯೂ ಸಮಿತಿ ಶಿಫಾರಸು ಮಾಡಿದೆ. ಈ ಆಯೋಗದಲ್ಲಿ ವೈದ್ಯಕೀಯ ಪದವಿ, ಸ್ನಾತಕೋತ್ತರ ವೈದ್ಯ ಪದವಿ, ಕಾಲೇಜುಗಳ ಮಾನ್ಯತೆ ಮತ್ತು ರೇಟಿಂಗ್ ಹಾಗೂ ವೈದ್ಯಕೀಯ ದಾಖಲೆ ಮತ್ತು ನೀತಿಸಂಹಿತೆಗಾಗಿ ನಾಲ್ಕು ಸ್ವತಂತ್ರ ಮಂಡಳಿಗಳು ಇರಬೇಕು ಎಂದು ಸಲಹೆ ಮಾಡಿದೆ. ಎನ್‌ಇಇಟಿ ಜಾರಿಗೊಳಿಸುವುದರಿಂದ ವೈದ್ಯಕೀಯ ಪ್ರವೇಶಕ್ಕೆ ವಿವಿಧ ಪರೀಕ್ಷೆಗಳನ್ನು ಎದುರಿಸುವುದು ತಪ್ಪಲಿದೆ. ಇದರಿಂದ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ವಿಧಾನ ಜಾರಿಗೆ ಬರಲಿದೆ. ಇದರ ಜೊತೆಗೆ ನಿರ್ಗಮನ ಪರೀಕ್ಷೆ ಮತ್ತು ಹೊಸ ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೊಳಿಸುವುದರಿಂದ ಅಂತಿಮ ಪರಿಣಾಮ ಧನಾತ್ಮಕವಾಗಲಿದೆ ಎಂಬ ವಿಶ್ವಾಸವನ್ನು ಉನ್ನತ ಮೂಲಗಳು ವ್ಯಕ್ತಪಡಿಸಿವೆ.

..............

ಸ್ವಾಮಿ ವಿರುದ್ಧದ 6 ಮಾನಹಾನಿ ಪ್ರಕರಣಗಳಿಗೆ ಹೈಕೋರ್ಟ್ ತಡೆ
ಚೆನ್ನೈ,ಜು.27: ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಮಾನಕಾರಿ ಹೇಳಿಕೆಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ವಿರುದ್ಧ ತಮಿಳುನಾಡು ಸರಕಾರವು ದಾಖಲಿಸಿರುವ ಎಲ್ಲ ಆರೂ ಮಾನಹಾನಿಕರ ಪ್ರಕರಣಗಳ ವಿಚಾರಣೆಗೆ ಮದ್ರಾಸ್ ಉಚ್ಚ ನ್ಯಾಯಾಲಯವು ಬುಧವಾರ ಮಧ್ಯಾಂತರ ತಡೆಯಾಜ್ಞೆಯನ್ನು ನೀಡಿದೆ.
ನ್ಯಾ.ಪಿ.ಎನ್.ಪ್ರಕಾಶ್ ಅವರು 6 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ಸ್ವಾಮಿಯವರ ಖುದ್ದು ಹಾಜರಾತಿಗೆ ವಿನಾಯಿತಿಯನ್ನೂ ನೀಡಿದರು.
ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಂ.ಎಲ್.ಜಗನ್ ಅವರು ಜಯಲಲಿತಾರ ಪರವಾಗಿ ಈ ಪ್ರಕರಣಗಳನ್ನು ದಾಖಲಿಸಿದ್ದರು.
ಎಲ್ಲ ಪ್ರಕರಣಗಳ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಿರುವಂತೆ ಸ್ವಾಮಿಯವರಿಗೆ ಸೂಚಿಸಲಾಗಿತ್ತು.
ಸುದ್ದಿಗಾರರೊಡನೆ ಮಾತನಾಡಿದ ಸ್ವಾಮಿ,ಈ ಆದೇಶವನ್ನು ತಾನು ಸ್ವಾಗತಿಸುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X