Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು...

ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಸಾವಿರಾರು ದಲಿತರ ನಿರ್ಧಾರ

ಉನಾ ಘಟನೆಯ ನೋವು

ವಾರ್ತಾಭಾರತಿವಾರ್ತಾಭಾರತಿ27 July 2016 11:44 PM IST
share

ಅಹ್ಮದಾಬಾದ್, ಜು.27: ಉನಾದಲ್ಲಿ ದಲಿತರ ಮೇಲೆ ನಡೆದ ಮಾರಕ ಹಲ್ಲೆಯ ಹಿನ್ನೆಲೆಯಲ್ಲಿ ಬಾಣಸ್ಕಂಠ ಜಿಲ್ಲೆಯಲ್ಲಿ ಸಮುದಾಯದ ಕನಿಷ್ಠ 1 ಸಾವಿರ ಸದಸ್ಯರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಸಮಾನತೆಯಿಂದ ನಡೆಸಿಕೊಳ್ಳದಿದ್ದಲ್ಲಿ ತಾವು ಹಿಂದೂಗಳಾಗಿ ಮುಂದುವರಿಯುವುದರಲ್ಲಿ ಅರ್ಥವಿಲ್ಲವೆಂದು ಅವರು ಅಭಿಪ್ರಾಯಿಸಿದ್ದಾರೆ.

ಮತಾಂತರಕ್ಕೆ ಸಮ್ಮತಿ ಸೂಚಿಸಿ, ಈ ದಲಿತರು ಫಾರ್ಮ್‌ಗಳನ್ನು ತುಂಬಿದ್ದು, ಅವುಗಳನ್ನು ಶೀಘ್ರವೇ ಸರಕಾರಿ ಅಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಇದೇ ವೇಳೆ, ತಮ್ಮ ಚಳವಳಿಯ ಮಾರ್ಗನಕ್ಷೆಯನ್ನು ನಿರ್ಧರಿಸಲು ಜು.31ರಂದು ಇಲ್ಲಿ ಸಭೆಯೊಂದನ್ನು ಸಂಘಟಿಸುವ ಘೋಷಣೆಯನ್ನು ವಿವಿಧ ದಲಿತ ಹಕ್ಕು ಸಂಘಟನೆಗಳು ಮಾಡಿವೆ.
ಉನಾದಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ರಾಜ್ಯಾದ್ಯಂತದ ದಲಿತರಿಗೆ ತೀವ್ರ ನೋವಾಗಿದೆ. ಇದು ತಾವಿನ್ನೂ ಜಾತಿ, ಮತ ಹಾಗೂ ವೃತ್ತಿಯ ಹೆಸರಿನಲ್ಲಿ ತಾರತಮ್ಯ ಹಾಗೂ ನಾನಾ ರೀತಿಯ ದೌರ್ಜನ್ಯಕ್ಕೆ ಒಳಗಾಗುತ್ತಿರುವುದನ್ನು ತೋರಿಸುತ್ತಿದೆ. ಅದಕ್ಕಾಗಿ ಬಾಣಸ್ಕಂಠದ ಹಲವು ಮಂದಿ ದಲಿತರು ಬೌದ್ಧ ಧರ್ಮಕ್ಕೆ ಪರಿವರ್ತನೆಗೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾರೆಂದು ಸ್ಥಳೀಯ ದಲಿತ ನಾಯಕ ಹಾಗೂ ಬಿಡಿಎಸ್‌ನ ಕಾರ್ಯದರ್ಶಿ ದಿನೇಶ್ ಮಹ್ವಾನಾ ಎಂಬವರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಸಾವಿರಾರು ದಲಿತರು ಪ್ರತಿಭಟನಾ ರ್ಯಾಲಿಗಳಲ್ಲಿ ಭಾಗವಹಿಸಿದ್ದಾರೆ. ಸಮಾನವಾಗಿ ನಡೆಸಿಕೊಳ್ಳದಿದ್ದರೆ ತಾವು ಹಿಂದೂ ಧರ್ಮವನ್ನು ಅನುಸರಿಸುವುದರಲ್ಲಿ ಅರ್ಥವಿಲ್ಲವೆಂಬ ನಿರ್ಧಾರಕ್ಕೆ ಸಭೆಯೊಂದರಲ್ಲಿ ತಾವು ಬಂದಿದ್ದೇವೆ. ಅದಕ್ಕಾಗಿ ಮತಾಂತರವಾಗ ಬಯಸುವವರಿಗೆ ತಾವು ಫಾರ್ಮ್‌ಗಳನ್ನು ಹಂಚಿದ್ದೇವೆ. ಇದುವರೆಗೆ ಅಂತಹ ಸುಮಾರು 1 ಸಾವಿರದಷ್ಟು ಫಾರ್ಮ್‌ಗಳು ತುಂಬಿಸಲ್ಪಟ್ಟು ತಮಗೆ ಮರಳಿ ಬಂದಿವೆಯೆಂದು ಅವರು ತಿಳಿಸಿದ್ದಾರೆ.
ಗುಜರಾತ್‌ನಲ್ಲಿ ಮತಾಂತರವು ಗುಜರಾತ್ ಧಾರ್ಮಿಕ ಸ್ವಾತಂತ್ರ ಕಾಯ್ದೆ -2008ರ ಅನ್ವಯ ನಡೆಯುತ್ತದೆ. ಅದರನ್ವಯ ಮತಾಂತರಗೊಳ್ಳಲು ಬಯಸುವ ವ್ಯಕ್ತಿಯು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X