Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರ ವರ್ಗಾವಣೆ ವಿರೋಧಿಸಿ ಹಲವು...

ಶಿಕ್ಷಕರ ವರ್ಗಾವಣೆ ವಿರೋಧಿಸಿ ಹಲವು ಶಾಲೆಗಳಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 July 2016 5:17 PM IST
share
ಶಿಕ್ಷಕರ ವರ್ಗಾವಣೆ ವಿರೋಧಿಸಿ ಹಲವು ಶಾಲೆಗಳಲ್ಲಿ ಪ್ರತಿಭಟನೆ

ಮಂಗಳೂರು,ಜು.28: ರಾಜ್ಯ ಸರ್ಕಾರದ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶವನ್ನು ವಿರೋಧಿಸಿ ಕುತ್ತಾರು ಪದವು ಪ್ರದೇಶದ ಸರಕಾರಿ ಪ್ರಾಥಮಿಕ ಶಾಲೆ ಮುನ್ನೂರು, ಬೆಂಗರೆ, ಉಳ್ಳಾಲ ಒಂಬತ್ತುಕೆರೆ, ಪಡುಪಣಂಬೂರು, ಮರಕಡ, ತಡಂಬೈಲ್, ಗುರುಪುರ ನಡುಗುಡ್ಡೆ ಮೊದಲಾದ ಶಾಲೆಗಳಲ್ಲಿ ಇಲ್ಲಿ ಎಸ್‌ಎಫ್‌ಐ, ಡಿವೈಎಫ್‌ಐ ಹಾಗೂ ಎಸ್‌ಡಿಎಂಸಿ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮುನ್ನೂರು ಶಾಲೆಯಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್, ರಾಜ್ಯ ಸರಕಾರದ ಹೊಸ ವರ್ಗಾವಣೆ ಆದೇಶವು ಅವೈಜ್ಞಾನಿಕವಾಗಿದ್ದು ಸರಕಾರಿ ಶಾಲೆಗಳನ್ನು ಮುಚ್ಚುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. ದೈಹಿಕ ಶಿಕ್ಷಣವು ಶಿಕ್ಷಣದ ಭಾಗವಾಗಿದ್ದು ಆದರೆ 200 ರಷ್ಟು ವಿದ್ಯಾರ್ಥಿಗಳು ಇದ್ದರೆ ಮಾತ್ರ ದೈಹಿಕ ಶಿಕ್ಷಕರು ಎಂಬ ನೀತಿಯು ನ್ಯಾಯಯುತವಲ್ಲ ಎಂದು ಹೇಳಿದರು.

ಪಂಚಾಯತ್ ಮಾಜಿ ಅಧ್ಯಕ್ಷ ರಹ್ಮಾನ್ ಮಾತನಾಡಿ, ನನ್ನ ಮಕ್ಕಳನ್ನು ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣವಿದೆ ಎಂಬ ಕಾರಣದಿಂದ ಸರಕಾರಿ ಶಾಲೆಗೆ ಸೇರಿಸಿದ್ದು, ಆದರೆ ಸರಕಾರ ಶಾಲೆಯ ಗುಣಮಟ್ಟ ಕುಸಿಯುವಂತೆ ಮಾಡುತ್ತಿದ್ದು, ಪೋಷಕರು ಮತ್ತು ಶಿಕ್ಷಕರಲ್ಲಿ ಅವಿನಾಭಾವ ಸಂಬಂಧವಿದ್ದು ಈ ಶಿಕ್ಷಕರು ಹೋದರೆ ವಿದ್ಯಾರ್ಥಿಗಳನ್ನು ಶಾಲೆಯಿಂದ ತೆಗೆಯಬೇಕಾದ ಅನಿವಾರ್ಯತೆ ಬರಬಹುದು ಎಂದರು.

ಡಿವೈಎಫ್‌ಐ ಮುಖಂಡರಾದ ಮಹಾಬಲ ದೆಪ್ಪೆಲಿಮಾರ್ ಮಾತನಾಡಿ, ಶಾಲೆಯಲ್ಲಿ ಏನೇ ಸಮಸ್ಯೆಯಾದರೂ ಶಿಕ್ಷಕರೇ ಆ ಸಮಸ್ಯೆಯನ್ನು ಬಗೆಹರಿಸುತ್ತಿದ್ದರು. ಹಿಂದೆ ಈ ಶಾಲೆಯ ಮೇಲ್ಛಾವಣಿ ಕುಸಿದ ಸಂದರ್ಭ ಶಿಕ್ಷಕರೇ ನಮ್ಮನ್ನು ಮನವಿ ಮಾಡಿದ ಕಾರಣಕ್ಕಾಗಿ ದುರಸ್ತಿಗೊಳಿಸಿದ್ದು, ಸರಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಆದರೆ ಹೀಗಿರುವಾಗ ಈ ಶಿಕ್ಷಕರನ್ನೇ ವರ್ಗಾವಣೆ ಮಾಡಿದರೆ ಶಾಲೆಯ ಪರಿಸ್ಥಿತಿ ಕೇಳುವವರು ಯಾರು ಇರಲಿಕ್ಕಿಲ್ಲ. ಆದ್ದರಿಂದ ಕೂಡಲೇ ಸರಕಾರ ಈ ಬಗ್ಗೆ ಆಲೋಚಿಸಬೇಕೆಂದು ಅಗ್ರಹಿಸಿದರು.

ಅಲ್ಲದೇ, ಶಾಲೆಯ ವಿದ್ಯಾರ್ಥಿಗಳೂ ತಮ್ಮ ನೆಚ್ಚಿನ ಶಿಕ್ಷಕಿಯ ವರ್ಗಾವಣೆ ವಿರೋಧಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪ್ರತಿಭಟನೆಯ ಮಹತ್ವವನ್ನು ವಿವರಿಸಿ ಮನವಿ ಪತ್ರ ಸಲ್ಲಿಸಲಾಯಿತು. ಈ ಪ್ರತಿಭಟನೆಯ ನೇತೃತ್ವವನ್ನು ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫ, ಸದಸ್ಯರಾದ ಕವಿತ, ಪಂಚಾಯತ್ ಸದಸ್ಯರಾದ ಇಸ್ಮಾಯೀಲ್, ಚಂದ್ರಾವತಿ, ಶಶಿಕಲಾ ಮತ್ತು ಮುಖಂಡರಾದ ಅಭಿಷೇಕ್, ಲಿಮಿತಾ, ದೀಕ್ಷಿತ್, ಡಿವೈಎಫ್‌ಐ ಮುಖಂಡರಾದ ಭರತ್, ಮಿಥುನ್ ಕಂಪ, ಸಂಕೇತ್ ಮತ್ತು ಪೋಷಕರಾದ ಗಾಯತ್ರಿ, ಮಾಲತಿ ವಹಿಸಿದ್ದರು.

ಬೆಂಗರೆ ಶಾಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಡಿವೈಎಫ್‌ಐ ನಾಯಕರಾದ ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮಾತನಾಡಿದರು.
  ಪ್ರತಿಭಟನೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಕೈರುನ್ನೀಸಾ, ಡಿವೈಎಫ್‌ಐನ ಸ್ಥಳೀಯ ಮುಖಂಡರಾದ ರಿಯಾಝ್, ಹನೀಫ್ ಬೆಂಗರೆ, ವಹಾಬ್, ಅಸ್ಲಾಂ, ಜಮೀಳಾ, ಜಾಕಿರ, ರುಕ್ಯಾ, ಉಮೈರ್, ಆಯಿಷಾ ಬಾನು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X