ಬೆಳ್ತಂಗಡಿ: ಹಲ್ಲೆ ಪ್ರಕರಣದ ಆರೋಪಿಗಳಿಗೆ ಜಾಮೀನು

ಉಪ್ಪಿನಂಗಡಿ, ಜು.28: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಜಾಮೀನು ನೀಡಿದೆ.
ಕಳ್ಳತನ, ಗಾಂಜಾ ವ್ಯಾಪಾರ ಇತ್ಯಾದಿ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವುದು ಸರಿಯಲ್ಲ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಕುಪ್ಪೆಟ್ಟಿ ಕಲ್ಪಣೆ ನಿವಾಸಿಗಳಾದ ನವಾಝ್, ಇಬ್ರಾಹೀಂ, ಹಸನ್ ಹಾಗೂ ರಫೀಕ್ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಪ್ಪೆಟ್ಟಿ ಹುಣ್ಸೆಕಟ್ಟ ಇಬ್ರಾಹೀಂ ಎಂಬವರ ಮಗ, ತರಕಾರಿ ಅಂಗಡಿ ಮಾಲಕ ಆದಂ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೇ, ಈ ಸಂದರ್ಭ ನನ್ನ ಬಳಿಯಿದ್ದ 12 ಸಾವಿರ ರೂ.ನಗದು, ಮೊಬೈಲ್ ಕಾಣೆಯಾಗಿರುತ್ತದೆ ಎಂದು ತಿಳಿಸಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ಚಾರ್ಚ್‌ಶೀಟ್ ಕಳುಹಿಸಿದ್ದು, ವಿಚಾರಣೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯ ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅನಿಲ್‌ಕುಮಾರ್ ಉಪ್ಪಿನಂಗಡಿ ಹಾಗೂ ಸಂದೇಶ್ ನಟ್ಟಿಬೈಲ್ ವಾದಿಸಿದ್ದರು.
Next Story





