Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆ.1ರಿಂದ ಆಧಾರ್ ಕೂಪನ್ ಮೂಲಕ ಪಡಿತರ...

ಆ.1ರಿಂದ ಆಧಾರ್ ಕೂಪನ್ ಮೂಲಕ ಪಡಿತರ ವಿತರಣೆ: ಆಹಾರ ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ28 July 2016 8:18 PM IST
share
ಆ.1ರಿಂದ ಆಧಾರ್ ಕೂಪನ್ ಮೂಲಕ ಪಡಿತರ ವಿತರಣೆ: ಆಹಾರ ಸಚಿವ ಯು.ಟಿ.ಖಾದರ್

ಬೆಂಗಳೂರು, ಜು.28: ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಪಡಿತರ ಧಾನ್ಯಗಳನ್ನು ಆ.1ರಿಂದ ಆಧಾರ್ ಸಂಖ್ಯೆ ಆಧಾರಿತ ಬಯೋಮೆಟ್ರಿಕ್ ಕೂಪನ್ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು ಎಂದು ಆಹಾರ ಸಚಿವ ಯು.ಟಿ. ಖಾದರ್‌ತಿಳಿಸಿದ್ದಾರೆ.

  ಗುರುವಾರ ನಗರದ ಮಲ್ಲೇಶ್ವರಂನಲ್ಲಿರುವ ಐಪಿಪಿ ಕೇಂದ್ರದಲ್ಲಿ ಸುಧಾರಿತ ಪಡಿತರ ವಿತರಣೆ ಕುರಿತ ಪಾಲಿಕೆ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿಂದ ಆಧಾರ್ ಸಂಖ್ಯೆಯ ಹೊಂದಾಣಿಕೆಯ ಕೂಪನ್ ವ್ಯವಸ್ಥೆಯಲ್ಲಿ ಸೀಮೆಎಣ್ಣೆಯನ್ನು ವಿತರಿಸಲಾಗಿದೆ. ಈ ಕ್ರಮದಿಂದ ಶೇ.80 ರಷ್ಟು ಸೀಮೆಎಣ್ಣೆ ಸೋರಿಕೆಯಾಗುತ್ತಿದ್ದನ್ನು ತಪ್ಪಿಸಲಾಗಿದೆ ಎಂದರು.

  ಪಡಿತರ ಧಾನ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಪಡಿತರ ವಿತರಣೆಯಲ್ಲಿ ಆಗುವ ಸೋರಿಕೆ, ನಷ್ಟವನ್ನು ತಪ್ಪಿಸಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ಪ್ರಸ್ತುತ ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವ 14 ಮಾನದಂಡಗಳನ್ನು ರದ್ದುಪಡಿಸಿ ಕೇವಲ ನಾಲ್ಕು ಮಾನದಂಡಗಳಿಗೆ ಇಳಿಸಲಾಗಿದೆ ಎಂದರು.
ಪಡಿತರ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಸೋರಿಕೆಯನ್ನು ತಡೆಗಟ್ಟಲು ಪಾಲಿಕೆ ಸದಸ್ಯರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ವ್ಯವಸ್ಥೆಯನ್ನು ಗ್ರಾಮೀಣ ಪ್ರದೇಶದಲ್ಲಿ ಕೂಡಲೆ ಚಾಲನೆ ನೀಡಲಾಗುವುದು ಎಂದರು.

  ನಗರದಲ್ಲಿ 6,11,118 ಪಡಿತರ ಕಾರ್ಡ್‌ಗಳ ಪೈಕಿ 18,064 ಅಂತ್ಯೋದಯ, 5,64,239 ಬಿಪಿಎಲ್ ಕಾರ್ಡ್‌ಗಳ ಹಾಗೂ 88,064 ಪಡಿತರ ಚೀಟಿಗಳು ಈಗಾಗಲೇ ವಿತರಿಸಲಾಗಿದೆ. ಅಲ್ಲದೆ ನಗರದ ವ್ಯಾಪ್ತಿಯಲ್ಲಿ ಶೇ.8ರಷ್ಟು ಬೋಗಸ್ ಪಡಿತರ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ 23,77,056 ಕುಟುಂಬಗಳಿಗೆ ಶೇ. 25.70 ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಎಲ್ಲಾ ಪಡಿತರ ಚೀಟಿಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಕಾರ್ಯ ಶೇ. 99 ರಷ್ಟು ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
  ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 393 ಪಡಿತರ ವಿತರಣಾ ಯಂತ್ರಗಳನ್ನು ಸ್ಥಾಪಿಸಲಾಗಿದೆ. 800 ಕೂಪನ್‌ಗಳಿಗೆ ವಿತರಣೆ ಮಾಡುವಷ್ಟು ಆಹಾರ ಧಾನ್ಯಗಳನ್ನು ಸಂಗ್ರಹಿಸಲು ಪಡಿತರ ವಿತರಣಾ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ. ಅವಶ್ಯಕತೆಗಿಂತ ಶೇ.10ರಷ್ಟು ಆಹಾರ ಧ್ಯಾನಗಳನ್ನು ಸರಕಾರ ಪೂರೈಸಲಾಗುತ್ತದೆ. ಅಕ್ರಮವಾಗಿ ಆಹಾರ ಧಾನ್ಯಗಳನ್ನು ದಾಸ್ತಾನು ಮಾಡುವವರನ್ನು ಪತ್ತೆಹಚ್ಚಿ ಕೊಟ್ಟಲ್ಲಿ, ಒಟ್ಟಾರೆ ದಾಸ್ತಾನು ಆಧಾರದಡಿ ಶೇ. 5 ರಷ್ಟು ಬಹುಮಾನ ನೀಡಲಾಗುವುದು ಎಂದು ಪಡಿತರ ವಿತರಕರಿಗೆ ಮನವಿ ಮಾಡಿದರು.
ಕಾರ್ಯದರ್ಶಿ ಹರ್ಷಕುಮಾರ್ ಮಾತನಾಡಿ, ಆಹಾರ ಧಾನ್ಯಗಳಿಗೆ ಒಮ್ಮೆ ಕೂಪನ್ ಪಡೆದರೆ, ಯಾವುದೇ ರೇಷನ್ ಅಂಗಡಿಗಳಿಗೆ ತೆರಳಿ ಅಲ್ಲಿ ಆಹಾರ ಧಾನ್ಯಗಳನ್ನು ಪಡೆಯಬಹುದು. ಇದರಿಂದ ಇಂಥದ್ದೇ ರೇಷನ್ ಅಂಗಡಿಗಳಿಗೆ ತೆರಳಿ ಪಡಿತರ ಖರೀದಿ ಮಾಡುವುದು ತಪ್ಪುತ್ತದೆ ಎಂದರು.
 ಇನ್ನು ಮುಂದೆ ನಗರ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ಮಾಡುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾ.ಪಂಚಾಯಿತಿಗಳಿಗೆ ವಹಿಸಲಾಗಿದೆ. ಸಮರ್ಪಕವಾಗಿ ಆಹಾರ ಧ್ಯಾನಗಳು ಪೂರೈಕೆಯಾಗುತ್ತಿರುವುದನ್ನು ಪರೀಕ್ಷಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿ ಎರಡು ತಿಂಗಳಿಗೊಮ್ಮೆ ಸಾರ್ವಜನಿಕರ ಸಭೆಗಳನ್ನು ಹಮ್ಮಿಕೊಂಡು ಕುಂದುಕೊರತೆಗಳನ್ನು ಆಲಿಸಲಿದೆ ಎಂದರು.
 ಸಂವಾದ ಕಾರ್ಯಕ್ರಮದಲ್ಲಿ ಮೇಯರ್ ಮಂಜುನಾಥ ರೆಡ್ಡಿ, ಉಪಮೇಯರ್ ಹೇಮಲತಾ, ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ, ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೂಪನ್ ಪಡೆಯುವುದು ಹೇಗೆ?
 ನಿರ್ದಿಷ್ಟ ಮೊಬೈಲ್ ನಂಬರ್‌ನಿಂದ ಪಡಿತರ ಕೂಪನ್ ಸಹಾಯವಾಣಿ ಸಂಖ್ಯೆ 1614ಕ್ಕೆ ಕರೆ ಮಾಡಿ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಕೂಡಲೆ ಕೂಪನ್ ನಂಬರ್ ನಿಮ್ಮ ಮೊಬೈಲ್‌ಗೆ ಸಂದೇಶ ರವಾನೆಯಾಗುತ್ತದೆ. ಅಲ್ಲದೆ ಈ ಕೂಪನ್ ನಂಬರ್ ಸ್ಪಷ್ಟಪಡಿಸಲು ಐಸಿವಿಆರ್ ಮೂಲಕ ವಾಯ್ಸೆ ರೇಕಾರ್ಡ್ ದಾಖಲಾಗುತ್ತದೆ. ಈ ಕೂಪನ್ ನಂಬರ್ ಅಥವಾ ಎಸ್‌ಎಂಎಸ್ ಅನ್ನು ತೋರಿಸಿ ಪಡಿತರ ಪಡೆಯಬಹುದು.
-ಹರ್ಷಕುಮಾರ್, ಕಾರ್ಯದರ್ಶಿ

ಆನ್‌ಲೈನ್‌ನಲ್ಲಿ ಪಡಿತರ ಕಾರ್ಡ್

 ಆನ್‌ಲೈನ್ ಮೂಲಕ ಪಡಿತರ ಕಾರ್ಡ್‌ಗಳನ್ನು ಪಡೆಯಲು ಹೊಸ ಸಾಫ್ಟ್‌ವೇರ್ ಸಿದ್ಧಪಡಿಸಲು ಚಿಂತಿಸಲಾಗಿದೆ. ಇದರಿಂದ ಮನೆಯಲ್ಲೇ ಕುಳಿತುಕೊಂಡು ಪಡಿತರ ಚೀಟಿಗಳನ್ನು ಪಡೆಯಬಹುದು. ಇದರಿಂದ ಸಮಯ ಉಳಿತಾಯವಾಗಿ, ಭ್ರಷ್ಟಾಚಾರ ತಡೆಯಬಹುದಾಗಿದೆ.
-ಯು.ಟಿ.ಖಾದರ್, ಆಹಾರ ಸಚಿವ

ಬಿಪಿಎಲ್ ಕಾರ್ಡ್ ಯಾರಿಗೆ?
ಸರಕಾರಿ, ನಿಗಮ, ಮಂಡಳಿಗಳಲ್ಲಿ ಉದ್ಯೋಗ, ಆದಾಯ ತೆರಿಗೆ ಪಾವತಿಸುವವರು, ನಾಲ್ಕು ಚಕ್ರಗಳ ವಾಹನ ಹೊಂದಿರುವವರು, 125 ಯುನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವವರು, ನಗರ ಪ್ರದೇಶದಲ್ಲಿ 800 ಚದರ ಅಡಿ, ಗ್ರಾಮೀಣ ಪ್ರದೇಶದಲ್ಲಿ 1,200 ಚದರ ಅಡಿ ವಿಸ್ತೀರ್ಣಕ್ಕೂ ಹೆಚ್ಚು ಜಾಗದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಹೊರತುಪಡಿಸಿ ಉಳಿದವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ.
-ಯು.ಟಿ.ಖಾದರ್, ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X