Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ಹಾವಳಿ ತಡೆಗೆ ಸರಕಾರಗಳ...

ಕಾಡಾನೆ ಹಾವಳಿ ತಡೆಗೆ ಸರಕಾರಗಳ ನಿರ್ಲಕ್ಷ್ಯ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ-ಮಾನವ ಸಂಘರ್ಷ

ವಾರ್ತಾಭಾರತಿವಾರ್ತಾಭಾರತಿ28 July 2016 9:48 PM IST
share
ಕಾಡಾನೆ ಹಾವಳಿ ತಡೆಗೆ ಸರಕಾರಗಳ ನಿರ್ಲಕ್ಷ್ಯ

 *ಮುಸ್ತಫಾ ಸಿದ್ದಾಪುರ

ಸಿದ್ದಾಪುರ, ಜು.28: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ರೂಪಿಸಲು ಸರಕಾರಗಳು ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಕೃಷಿ ಫಸಲು ನಷ್ಟದೊಂದಿಗೆ ಕಾರ್ಮಿಕ ಜೀವಗಳು ಬಲಿಯಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಹಲವು ವರ್ಷಗಳಿಂದ ಆನೆ-ಮಾನವ ಸಂಘರ್ಷದಲ್ಲಿ ವರ್ಷಕ್ಕೆ 10ಕ್ಕೂ ಹೆಚ್ಚು ಆನೆಗಳು ಹಾಗೂ ಕಾರ್ಮಿಕ ಜೀವಗಳು ಬಲಿಯಾಗುತ್ತಿದೆ. ಕಾಡಾನೆ ಹಾವಳಿ ತಡೆಗೆ ಕಾರ್ಮಿಕರು ನಿರಂತರ ಹೋರಾಟಗಳನ್ನು ನಡೆಸಿದ್ದರೂ ಸರಕಾರ ಹಾಗೂ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಆನೆ ಮಾನವ ಸಂಘರ್ಷ ಹೆಚ್ಚಾಗಲು ಕಾರಣವಾಗಿದೆ. ದಕ್ಷಿಣ ಕೊಡಗಿನಲ್ಲಿ ಅರಣ್ಯ ಪ್ರದೇಶದ ಸಮೀಪದಲ್ಲಿಯೇ ಕೃಷಿ ಫಸಲಿನೊಂದಿಗೆ ಸಣ್ಣ ಪ್ರಮಾಣದಲ್ಲಿ ರೈತರು ತಮ್ಮ ಬದುಕು ಸಾಗಿಸುತ್ತಿದ್ದು, ಕಾಡಾನೆ ಹಾವಳಿಯಿಂದ ಭತ್ತ ಬೇಸಾಯವನ್ನು ಸ್ಥಗಿತಗೊಳಿಸಿದ್ದಾರೆ. ತೋಟಗಳಲ್ಲಿ ಬೆಳೆಯುತ್ತಿರುವ ಫಸಲಿಗೆ ಕಾಡಾನೆಗಳು ಲಗ್ಗೆ ಇಡುತ್ತಿರುವ ಪರಿಣಾಮ ಲಕ್ಷಗಟ್ಟಲೆ ರೂ. ಸಾಲ ಮಾಡಿ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಪರಿಹಾರಕ್ಕಾಗಿ ಬೆಳೆಗಾರರು ವರ್ಷಗಟ್ಟಲೇ ಅಲೆದರೂ ಒಂದು ಲಕ್ಷಕ್ಕೆ ಒಂದು ಸಾವಿರ ರೂ. ಪರಿಹಾರ ನೀಡುವುದರೊಂದಿಗೆ ಅರಣ್ಯ ಇಲಾಖೆ ಯಾವುದೇ ಸಂಬಂಧ ಇಲ್ಲದ ರೀತಿಯಲ್ಲಿ ವರ್ತಿಸುತ್ತಿದೆ. ಕಾಡಾನೆಗಳ ಭಯದ ನೆರಳಿನಲ್ಲಿ ದಿನ ನಿತ್ಯ ಸಂಸಾರದೊಂದಿಗೆ ಕಾರ್ಮಿಕರು ಕೆಲಸ ನಿರ್ವಹಿಸಬೇಕಾದ ಸ್ಥಿತಿ ಎದುರಾಗಿದ್ದು, ಕೆಲವೊಮ್ಮೆ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 5ಲಕ್ಷ ರೂ. ಪರಿಹಾರ ನೀಡಿ ಅರಣ್ಯ ಇಲಾಖೆ ಕೈ ತೊಳೆದುಕೊಳ್ಳುತ್ತಿದೆ. ಹೊಟ್ಟೆಪಾಡಿನ ಜೀವನಕ್ಕಾಗಿ ಕಾಫಿ ತೋಟದ ಕೆಲಸವನ್ನೇ ಅವಲಂಬಿತರಾಗಿರುವ ಬಡಪಾಯಿ ಕುಟುಂಬಗಳು ಆನೆ ಹಾವಳಿಯಿಂದ ಅನಾಥವಾಗುತ್ತಿರುವುದು ಜಿಲ್ಲೆಯಲ್ಲಿ ಕಂಡು ಬರುತ್ತಿದೆ. ಇದೀಗ ಕಾಡಾನೆ ಹಾವಳಿಯಿಂದ ಬದುಕುಳಿದರೆ ಸಾಕು ಎಂದು ಕೆಲಸ ಬಿಟ್ಟು ಹೊರ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಇದರಿಂದಾಗಿ ಕಾರ್ಮಿಕರ ಕೊರತೆಯಿಂದ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಪರ್ಯಾಯವಾಗಿ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಿಂದ ಕಾರ್ಮಿಕರನ್ನು ಕರೆ ತಂದು ಕೆಲಸ ನಿರ್ವಹಿಸುತ್ತಿದ್ದರೂ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಇರುವಿಕೆಯ ಮಾಹಿತಿ ಇಲ್ಲದ ಕಾರ್ಮಿಕರು ಮತ್ತೆ ಆನೆ ದಾಳಿಗೆ ಬಲಿಯಾಗುತ್ತಿದ್ದಾರೆ. ಕಾಫಿ ತೋಟಗಳ ಲೈನ್ ಮನೆಯಿಂದ ಶಾಲಾ ಕಾಲೇಜುಗಳಿಗೆ ತೆರಳಬೇಕಾದ ವಿದ್ಯಾರ್ಥಿಗಳು ಕಾಡಾನೆಗಳ ಭಯದಿಂದಾಗಿ ಮನೆಯಲ್ಲೇ ಉಳಿದು ಶಿಕ್ಷಣದಿಂದ ವಂಚಿತರಾಗುತ್ತಿರುವ ಪ್ರಸಂಗಗಳು ವರದಿಯಾಗಿದೆ. ಸಿದ್ದಾಪುರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯ ಗನ್‌ಮ್ಯಾನ್‌ಗಳ ಸಹಾಯದೊಂದಿಗೆ ಶಾಲೆಗೆ ತೆರಳುತ್ತಿರುವುದು ಸಾಮಾನ್ಯವಾಗಿದೆ.

ಕಾಡು ಪ್ರಾಣಿಗಳಿಗೆ ಅರಣ್ಯಗಳಲ್ಲಿ ಕುಡಿಯುವ ನೀರು ಮತ್ತು ಆಹಾರದ ವ್ಯವಸ್ಥೆ ಇಲ್ಲದೆ ಕಾಫಿ ತೋಟ ಹಾಗೂ ಗ್ರಾಮಗಳತ್ತ ಮುಖ ಮಾಡುತ್ತಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಷ್ಟದೊಂದಿಗೆ ಗ್ರಾಮಸ್ಥರಲ್ಲೂ ಭಯ ಮೂಡಿಸುತ್ತಿದೆ. ಅರಣ್ಯ ಇಲಾಖೆ ಮಾತ್ರ ಬೆಲೆ ಬಾಳುವ ತೇಗದ ಮರಗಳನ್ನು ಬೆಳೆಸಿ ಲಾಭದ ಯೋಜನೆಯಲ್ಲಿ ತಲ್ಲೀನವಾಗಿದೆ. ಅರಣ್ಯದಲ್ಲಿ ಕಾಡು ಪ್ರಾಣಿಗಳಿಗೆ ಬೇಕಾದ ಆಹಾರದ ವ್ಯವಸ್ಥೆಗಳನ್ನು ಮಾಡದೆ ಅಸಹಾಯಕತೆ ತೋರುತ್ತಿರುವುದೇ ಆನೆ ಮಾನವ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ 56 ಕೋಟಿ ರೂ.ನ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಇದೀಗ ಕಂದಕ ನಿರ್ಮಾಣ, ಸ್ಪೈಕ್ ಗೇಟ್ ಹಾಗೂ ಸೋಲಾರ್ ಬೇಲಿ ಅಳವಡಿಕೆ, ಕಾಂಕ್ರಿಟ್ ಪಿಲ್ಲರ್ ನಿರ್ಮಾಣ ಮತ್ತು ಕಾವಲುಗಾರರ ನೇಮಕ ಸೇರಿದಂತೆ ಶೇ.30ರಷ್ಟು ಕೆಲಸಗಳು ಪೂರ್ಣಗೊಂಡಿದೆಯಾದರೂ ಇವುಗಳನ್ನೆಲ್ಲಾ ವಿಫಲಗೊಳಿಸಿ ಕಾಡಾನೆಗಳು ಅರಣ್ಯದಿಂದ ಕಾಫಿ ತೋಟಗಳ ಮೂಲಕ ಪಟ್ಟಣ ಪ್ರವೇಶಿಸುತ್ತಿದೆ. ಎರಡು ದಿನಗಳ ಹಿಂದೆ ಮಧ್ಯ ರಾತ್ರಿ ಕಾಡಾನೆಯೊಂದು ಮುಖ್ಯ ರಸ್ತೆಯಲ್ಲಿ ರಾಜಾರೋಷವಾಗಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದ್ದು, ಇದರಿಂದ ಪಟ್ಟಣದಲ್ಲಿರುವ ಜನರಲ್ಲೂ ಆತಂಕ ಮನೆಮಾಡಿದೆ.

ಅರಣ್ಯ ಇಲಾಖೆ ಸಾರ್ವಜನಿಕರಲ್ಲಿ ಕಾಡಾನೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಡಾನೆಗಳ ಇರುವಿಕೆಯನ್ನು ಪತ್ತೆ ಹಚ್ಚಿ ಸಾರ್ವಜನಿಕರ ಮೊಬೈಲ್‌ಗಳಿಗೆ ಸಂದೇಶಗಳನ್ನು ನೀಡುತ್ತಿದ್ದು, ದಿನಕ್ಕೆ 50ಕ್ಕೂ ಹೆಚ್ಚು ಕಾಡಾನೆಗಳ ಇರುವಿಕೆಯ ಸಂದೇಶಗಳನ್ನು ರವಾನಿಸುತ್ತಿದೆ.

 ಕಾಫಿ ತೋಟಗಳಲ್ಲಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಮುಂದಾದರೆ ಆಕ್ರೋಶಗೊಳ್ಳುತ್ತಿರುವ ಆನೆಗಳು ಒಂದು ಕಾಫಿ ತೋಟದಿಂದ ಮತ್ತೊಂದು ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಆಡಳಿತ ನಡೆಸುತ್ತಿರುವ ಸರಕಾರಗಳು ಹಾಗೂ ವಿರೋಧ ಪಕ್ಷದವರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸಭೆ, ವಿಧಾನ ಪರಿಷತ್ ಮತ್ತು ಸಂಸತ್ತಿನಲ್ಲಿ ಕೆಲವೊಂದು ವಿಷಯಗಳನ್ನು ಮುಂದಿಟ್ಟು ದೇಶಾದ್ಯಂತ ಕೋಲಾಹಲವನ್ನು ಸೃಷ್ಟಿಸಿ ರಾಜಕೀಯ ಮಾಡುತ್ತಿರುವುದನ್ನು ಬಿಟ್ಟು ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಸರ್ವ ಪಕ್ಷದವರು ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X