Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜರಂಗದಳದ ಕುಮ್ಮಕ್ಕಿನಿಂದಲೇ ಹಲ್ಲೆ

ಬಜರಂಗದಳದ ಕುಮ್ಮಕ್ಕಿನಿಂದಲೇ ಹಲ್ಲೆ

ಮ.ಪ್ರ.: ಬೀಫ್ ಸಾಗಾಟದ ಶಂಕೆಯಲ್ಲಿ ಥಳಿತಕ್ಕೊಳಗಾದ ಮಹಿಳೆಯ ಆರೋಪ

ವಾರ್ತಾಭಾರತಿವಾರ್ತಾಭಾರತಿ28 July 2016 11:02 PM IST
share

ಭೋಪಾಲ್, ಜು.28: ತಮ್ಮ ಮೇಲೆ ಹಲ್ಲೆ ನಡೆಸುವಂತೆ ಬಜರಂಗದಳ ಕಾರ್ಯಕರ್ತರೇ ಪ್ರಚೋದನೆ ನೀಡಿದ್ದರೆಂದು ಗೋಮಾಂಸ ಸಾಗಾಟ ಮಾಡುತ್ತಿದ್ದರೆಂಬ ಶಂಕೆಯಲ್ಲಿ ಮಧ್ಯಪ್ರದೇಶದ ಮಾಂಡ್‌ಸೌರ್ ರೈಲ್ವೆ ನಿಲ್ದಾಣದಲ್ಲಿ ಬರ್ಬರವಾಗಿ ಥಳಿಸಲ್ಪಟ್ಟ ಇಬ್ಬರು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

 '' ನಾವು ಮಾಂಡ್‌ಸೌರ್‌ಗೆ ಬರುತ್ತಿದ್ದಾಗ, ಕೆಲವು ಬಜರಂಗದಳ ಕಾರ್ಯಕರ್ತರು ನಮ್ಮನ್ನು ತಡೆದು ನಿಲ್ಲಿಸಿದರು ಹಾಗೂ ನಾವು ಏನನ್ನು ಒಯ್ಯುತ್ತಿದ್ದೇವೆಂದು ಅವರು ಪ್ರಶ್ನಿಸಿದರು. ನಾವು ಅವರಿಗೆ ಅದು ' ಎಮ್ಮೆ ಕರುವಿನ ಮಾಂಸ' ಎಂದು ಹೇಳಿದಾಗ ಅವರು ಅದನ್ನು ಒಪ್ಪದೆ, ಅದು ದನದ ಮಾಂಸವೆಂದೇ ಪಟ್ಟು ಹಿಡಿದರು'' ಹಲ್ಲೆಗೊಳಗಾದ ಮಹಿಳೆಯರಲ್ಲೊಬ್ಬರಾದ ಸಲ್ಮಾ ತಿಳಿಸಿದ್ದಾರೆ.
    ''ಆನಂತರ, ನಾವು ಅವರಿಗೆ ಬೇಕಾದರೆ ಪಶುವೈದ್ಯರಿಂದ ಮಾಂಸವನ್ನು ಪರೀಕ್ಷಿಸುವಂತೆಯೂ ತಿಳಿಸಿದೆವು. ಆದರೂ ಅವರು ನಮ್ಮ ಮಾತು ಕೇಳಲಿಲ್ಲ. ಅವರು ತಮ್ಮ ಜೊತೆಗಿದ್ದ ಮಹಿಳೆಯರಿಗೆ, ನಮ್ಮನ್ನು ಥಳಿಸುವಂತೆ ಸೂಚಿಸಿದರು'' ಎಂದು ಸಲ್ಮಾ ಆಪಾದಿಸಿದ್ದಾರೆ.
ಹಲ್ಲೆಗೊಳಗಾದ ತಮ್ಮನ್ನು ರಕ್ಷಿಸಲು ಧಾವಿಸಿದ ಪೊಲೀಸರಿಗೂ ಬಜರಂಗದಳ ಕಾರ್ಯಕರ್ತರು ಬೆದರಿಕೆಯೊಡ್ಡಿದರೆಂದು ಆಕೆ ಆಪಾದಿಸಿದ್ದಾರೆ.
   ಸಲ್ಮಾ ಮೇವಾಟಿ (35) ಹಾಗೂ ಶಮೀಂ ಅಖ್ತರ್ ಹುಸೈನ್ (30) ಮೇಲೆ ತಥಾಕಥಿತ ಗೋ ಸಂರಕ್ಷಕರು ಹಿಗ್ಗಾಮಗ್ಗಾ ಥಳಿಸಿದ್ದರು. ಆನಂತರ ಪೊಲೀಸರು ಕೂಡ ಗೋಮಾಂಸ ಸಾಗಾಟ ಮಾಡುತ್ತಿದ್ದರೆಂಬ ಶಂಕೆಯಲ್ಲಿ ಈ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
 ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ಅದು ಎಮ್ಮೆಯ ಮಾಂಸವೆಂದು ದೃಢಪಟ್ಟ ಬಳಿಕ ಪೊಲೀಸರು ಮೊಕದ್ದಮೆಯನ್ನು ಹಿಂತೆಗೆದುಕೊಂಡಿದ್ದರು.
ಆರಂಭದಲ್ಲಿ ಈ ಪ್ರಕರಣವನ್ನು ಮಾಂಡ್‌ಸೌರ್ ಠಾಣಾ ಪೊಲೀಸರು ದಾಖಲಿಸಿಕೊಂಡಿದ್ದರು.ಘಟನೆಯು ರೈಲು ನಿಲ್ದಾಣದಲ್ಲಿ ನಡೆದ ಕಾರಣ ಆನಂತರ ಪ್ರಕರಣವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಗೋವಿಂದ್‌ರಾವ್ ಚೌಹಾಣ್, ದಿಲೀಪ್ ದೇವ್‌ಡಾ,ಸ್ವದೇಶ್ ಚನಾಲ್ ಹಾಗೂ ವಿಕಾಸ್ ಅಹಿರ್ ಎಂಬ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್‌ಗಳಾದ 323 (ಸ್ವಯಂಪ್ರೇರಿತವಾಗಿ ಹಲ್ಲೆ ನಡೆಸಿದ), 341 ( ಸಮಾನ ಉದ್ದೇಶದಿಂದ ಗುಂಪಿನಿಂದ ಹಲ್ಲೆ)ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X