ಮಹಾದಾಯಿ ನೀರು ಹಂಚಿಕೆಜನಪ್ರತಿನಿಗಳು ಪ್ರತಿಷ್ಠೆ ಬದಿಗೊತ್ತಿ ಚಿಂತಿಸಲಿ: ಸ್ಪೀಕರ್ ಕೋಳಿವಾಡ
ಬೆಂಗಳೂರು, ಜು.28: ರಾಜ್ಯದಲ್ಲಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಒಣ ಪ್ರತಿಷ್ಠೆಯನ್ನು ಬದಿಗೊತ್ತಿ, ಸರಿಯಾದ ರೀತಿಯಲ್ಲಿ ಚಿಂತನೆ ನಡೆಸಿದರೆ ಮಹಾದಾಯಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬಹುದು ಎಂದು ವಿಧಾನಸಭೆ ಸಭಾಧ್ಯಕ್ಷ ಕೋಳಿವಾಡ ಅಭಿಪ್ರಾಯಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹಾದಾಯಿ ನ್ಯಾಯಾಕರಣದ ತೀರ್ಪಿನಿಂದ ಉತ್ತರ ಕರ್ನಾಟಕದ ಜನತೆಗೆ ಆಘಾತವಾಗಿದೆ. ಈ ಬಗ್ಗೆ ಜನಪ್ರತಿನಿಗಳು ಗಂಭೀರವಾಗಿ ಚಿಂತಿಸಿ, ಸೂಕ್ತ ನಿರ್ಣಯವೊಂದನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ದೃಢ ನಿರ್ಧಾರ ಕೈಗೊಂಡರೆ ಮಹಾದಾಯಿ ನೀರು ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬಹುದು. ಹೀಗಾಗಿ ರಾಜ್ಯದ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿಗೆ ಒತ್ತಡ ಹಾಕಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಕೋಳಿವಾಡ ತಿಳಿಸಿದರು.
ರಾಜಕೀಯ ಬೇಡ: ಜನತೆಗೆ ನೀರನ್ನು ದೊರಕಿಸಿಕೊಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಎಲ್ಲ ಪಕ್ಷದ ಮುಖಂಡರು ಒಟ್ಟಾಗಿ ಈ ಬಗ್ಗೆ ಚಿಂತನೆ ನಡೆಸಬೇಕು. ರಾಜ್ಯದ ಸಂಸದರು ಪಕ್ಷಭೇದ ಮರೆತು ಕೂಡಲೆ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ, ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಸರ್ವಪಕ್ಷಗಳ ನಿಯೋಗವನ್ನು ಕರೆಯುವಂತೆ ಒತ್ತಾಯಿಸಬೇಕು ಎಂದು ಅವರು ಮನವಿ ಮಾಡಿದರು.