ಶೀಘ್ರದಲ್ಲಿ ಮಹಿಳಾ ಉದ್ಯಮಿಗಳ ಸಮಾವೇಶ: ಸಚಿವ ದೇಶಪಾಂಡೆ

ಬೆಂಗಳೂರು,ಜು. 28: ರಾಜ್ಯದಲ್ಲಿ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಸದ್ಯದಲ್ಲೇ ಮಹಿಳಾ ಉದ್ಯಮಿಗಳ ಸಮಾವೇಶವನ್ನು ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ 12ನೆ ವರ್ಷದ ಆವಿಷ್ಕಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಏರೋಸ್ಪೇಸ್,ಆಹಾರ ಸಂಸ್ಕರಣೆ, ಐಟಿ-ಬಿಟಿ ಸೇರಿದಂತೆ ಎಲ್ಲ್ಲ ವಲಯಗಳಲ್ಲಿ ಉದ್ಯಮ ಆರಂಭಿಸಲು ರಾಜ್ಯದಲ್ಲಿ ಉತ್ತಮ ವಾತಾವರಣವಿದೆ ಎಂದರು.
ರಾಜ್ಯದಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮಹಿಳಾ ಉದ್ಯಮಿಗಳನ್ನು ಆಕರ್ಷಿಸಲು ಸರಕಾರ ಚಿಂತನೆ ನಡೆಸಿದೆ. ಆದುದರಿಂದ ರಾಜ್ಯದಲ್ಲಿ ಮಹಿಳಾ ಉದ್ಯಮಿಗಳು ಬಂಡವಾಳ ಹೂಡಲು ಉತ್ತೇಜನ ನೀಡುವ ಸಲುವಾಗಿ ಸದ್ಯದಲ್ಲೇ ಮಹಿಳಾ ಉದ್ಯಮಿಗಳ ಸಮಾವೇಶವನ್ನು ನಗರದಲ್ಲಿ ಆಯೋಜಿಸಲಾಗುವುದು ಎಂದರು.ೇಂದ್ರ ಸರಕಾರದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ರಾಜ್ಯ ಸರಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದಲ್ಲಿ ನಡೆದಿರುವ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಬಗ್ಗೆ ದೇಶದ ಗಮನ ಸೆಳೆಯಲು ಮುಂದಿನ ವರ್ಷ ರಾಜ್ಯದಲ್ಲಿ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ತಿ ಉತ್ಸಾಹದಿಂದ ಸ್ಟಾರ್ಟ್ ಅಪ್ ಕಂಪೆನಿಗಳನ್ನು ಆರಂಭಿಸುವ ಉದ್ಯಮಿಗಳು ಕೆಲ ದಿನಗಳ ನಂತರ ಹಣಕಾಸಿನ ಕೊರತೆ, ಮತ್ತಿತರ ಕಾರಣಗಳಿಂದ ಈ ಸಂಸ್ಥೆಗಳನ್ನು ನಡೆಸಲಾಗದೆ ಸಂಕಷ್ಟಕ್ಕೆ ಸಿಲುಕುತ್ತಿರುವುದು ತನ್ನ ಗಮನಕ್ಕೆ ಬಂದಿದೆ. ಹಾಗಾಗಿ ಉದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ, ಸಲಹೆ, ನೆರವು ನೀಡಲು ಸರಕಾರ ಸಿದ್ಧವಿದೆ. ಸ್ಟಾರ್ಟ್ ಅಪ್ ಉದ್ಯಮಗಳನ್ನು ಆರಂಭಿಸುವ ಉದ್ಯಮಿಗಳು ಅದನ್ನು ಯಶಸ್ವಿಯಾಗಿ ಮುನ್ನಡೆಸಲು ಹೆಚ್ಚು ಗಮನ ನೀಡಬೇಕು ಎಂದು ತಿಳಿಸಿದರು.
ದೇಶದಲ್ಲಿ ಬಂಡಾವಳ ಹೂಡಿಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿರುವ ವಿುಲ ಅವಕಾಶಗಳನ್ನು ಉದ್ಯಮಿಗಳು ಬಳಸಿಕೊಳ್ಳಬೇಕು. ಬೆಂಗಳೂರು ನಗರವನ್ನು ಹೊರತುಪಡಿಸಿ ರಾಜ್ಯದ ಬೇರೊಂದು ನಗರದಲ್ಲಿ ಉದ್ಯಮವನ್ನು ಸ್ಥಾಪಿಸುವುದು ಬಂಡವಾಳ ಹೂಡಿಕೆ ದೃಷ್ಟಿಯಿಂದ ಉತ್ತಮ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಇನೊಸಿಸ್ ಮುಖ್ಯಸ್ಥ ಕ್ರಿಸ್ ಗೋಪಾಲಕೃಷ್ಣ, ಭಾರತೀಯ ಕೈಗಾರಿಕೆ ಒಕ್ಕೂಟದ ವಿಶಾಲ್ ಬಾಲಿ, ಕೈಗಾರಿಕೆ ಹಾಗೂ ವಾಣಿಜ್ಯ ಇಲಖೆಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ಇತರರು ಉಪಸ್ಥಿತರಿದ್ದರು.







