Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ನೀವು ಯಾವುದನ್ನೂ, ಯಾರನ್ನೂ ದೇಶಕ್ಕಾಗಿ...

"ನೀವು ಯಾವುದನ್ನೂ, ಯಾರನ್ನೂ ದೇಶಕ್ಕಾಗಿ ಕಳೆದುಕೊಂಡಿಲ್ಲ"

ಡೊನಾಲ್ಡ್ ಟ್ರಂಪ್‌ಗೆ ಹುತಾತ್ಮ ಅಮೇರಿಕನ್ ಮುಸ್ಲಿಂ ಯೋಧನ ತಂದೆ

ವಾರ್ತಾಭಾರತಿವಾರ್ತಾಭಾರತಿ29 July 2016 1:27 PM IST
share
ನೀವು ಯಾವುದನ್ನೂ, ಯಾರನ್ನೂ ದೇಶಕ್ಕಾಗಿ ಕಳೆದುಕೊಂಡಿಲ್ಲ

ಫಿಲಡೆಲ್ಫಿಯಾ, ಜು.29: ‘ನೀವು ಯಾವುದನ್ನೂ, ಯಾರನ್ನೂ ದೇಶಕ್ಕಾಗಿ ಕಳೆದುಕೊಂಡಿಲ್ಲ’ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಿಲರಿ ಕ್ಲಿಂಟನ್ ಅವರ ಬೆಂಬಲಾರ್ಥ ನಡೆದ ಸಮಾವೇಶವೊಂದರಲ್ಲಿ ಇರಾಕ್ ಯುದ್ಧದಲ್ಲಿ ಹುತಾತ್ಮನಾದ ಅಮೆರಿಕನ್ ಮುಸ್ಲಿಂ ಯೋಧನೊಬ್ಬನ ತಂದೆ ಭಾವಪರವಶರಾಗಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಉದ್ದೇಶಿಸಿ ಹೇಳಿದ ಮಾತಿದು.

ಖಿಝ್ರ ಖಾನ್ ಎಂಬವರ ಪುತ್ರ ಆರ್ಮಿ ಕ್ಯಾಪ್ಟನ್ ಹುಮಾಯುನ್ ಖಾನ್ 12 ವರ್ಷಗಳ ಹಿಂದೆ ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿಯೊಂದರಲ್ಲಿ ಮೃತಪಟ್ಟಿದ್ದರು. ಖಾನ್ ಕುಟುಂಬ ಹಲವಾರು ವರ್ಷಗಳ ಹಿಂದೆ ಸಂಯುಕ್ತ ಅರಬ್ ಸಂಸ್ಥಾನದಿಂದ ಅಮೆರಿಕಕ್ಕೆ ವಲಸೆ ಬಂದಿತ್ತು.
‘ಯಾವುದೇ ತ್ಯಾಗ ಮಾಡದ ಟ್ರಂಪ್ ನಮ್ಮ ಕುಟುಂಬದಂತಹ ಇತರ ಧಾರ್ಮಿಕ ಅಲ್ಪಸಂಖ್ಯಾತರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಟ್ರಂಪ್ ಅವರು ಹೇಳಿದ ಹಾಗೆ ಮುಸ್ಲಿಮರ ಪ್ರವೇಶವನ್ನು ಅಮೆರಿಕ ಬಹಳ ಹಿಂದೆಯೇ ನಿಷೇಧಿಸಿದ್ದಿದ್ದರೆ ನಮ್ಮ ಮಗ ಈ ದೇಶದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುವ ಅವಕಾಶವೇ ಇರಲಿಲ್ಲ ’ ಎಂದು ಅವರು ಹೇಳಿದರು.

‘‘ನೀವು ಅರ್ಲಿಂಗ್ಟನ್ ಸ್ಮಶಾನಕ್ಕೆ ಭೇಟಿ ನೀಡಿದ್ದೀರೇನು? ಅಲ್ಲಿ ದೇಶಕ್ಕಾಗಿ ಹೋರಾಡುತ್ತಾ ಮಡಿದ ಧೀರ ಸೈನಿಕರ ಸಮಾಧಿಗಳನ್ನೊಮ್ಮೆ ನೋಡಿ- ಅಲ್ಲಿ ಎಲ್ಲಾ ಜಾತಿ, ಧರ್ಮಗಳ ಮಂದಿಯ ಸಮಾಧಿಯೂ ಇದೆ’ ಎಂದರು.

‘ಡೊನಾಲ್ಡ್ ಟ್ರಂಪ್ ಇತರ ಅಲ್ಪಸಂಖ್ಯಾತ ಮಹಿಳೆಯರ, ನ್ಯಾಯಾಧೀಶರ ಹಾಗೂ ತಮ್ಮದೇ ಪಕ್ಷದ ನಾಯಕತ್ವಕ್ಕೆ ಅಗೌರವ ತೋರಿಸುತ್ತಿದ್ದಾರೆ. ಅವರು ಗೋಡೆಗಳನ್ನು ಕಟ್ಟಿ ನಮ್ಮನ್ನು ದೇಶದಿಂದ ಹೊರ ಹಾಕಲು ಬಯಸಿದ್ದಾರೆ’ಎಂದರು ಖಾನ್.

ಭಾಷಣದ ನಡುವೆ ತಮ್ಮ ಸೂಟ್‌ನಿಂದ ದೇಶದ ಸಂವಿಧಾನದ ಪಾಕೆಟ್ ಸೈಜ್ ಪ್ರತಿಯೊಂದನ್ನು ಹೊರಗೆಳೆದ ಅವರು, ಅದನ್ನು ಎತ್ತಿ ತೋರಿಸುತ್ತಾ ‘ಡೊನಾಲ್ಡ್ ಟ್ರಂಪ್, ಅಮೆರಿಕನ್ನರು ಅವರ ಭವಿಷ್ಯಕ್ಕಾಗಿ ನಿಮ್ಮ ಮೇಲೆ ವಿಶ್ವಾಸವಿಡಬೇಕೆಂದು ನೀವು ಹೇಳುತ್ತಿದ್ದೀರಿ. ನಿಮ್ಮನ್ನೊಂದು ಪ್ರಶ್ನೆ ಕೇಳಬಯಸುತ್ತೇನೆ. ಅಮೆರಿಕದ ಸಂವಿಧಾನವನ್ನು ನೀವು ಯಾವತ್ತಾದರೂ ಓದಿದ್ದೀರಾ ? ನನ್ನಲ್ಲಿರುವ ಪ್ರತಿಯನ್ನು ನಿಮಗೆ ನೀಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ಸ್ವಾತಂತ್ರ್ಯ (ಲಿಬರ್ಟಿ) ಹಾಗೂ ಕಾನೂನಿನಡಿಯಲ್ಲಿ ಸಮಾನ ಸುರಕ್ಷೆ ಎಂಬ ಪದಗಳನ್ನು ಹುಡುಕಿ’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X