Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ದಲಿತರ ಕುಂದು ಕೊರತೆ ಸಭೆ

ಬೆಳ್ತಂಗಡಿ: ದಲಿತರ ಕುಂದು ಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ29 July 2016 8:00 PM IST
share
ಬೆಳ್ತಂಗಡಿ: ದಲಿತರ ಕುಂದು ಕೊರತೆ ಸಭೆ

ಬೆಳ್ತಂಗಡಿ, ಜು.29: ಗ್ರಾಮ ಪಂಚಾಯತ್‌ಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೇವಲ ಕಸ ಗುಡಿಸುವ ಕೆಲಸವನ್ನು ಮಾತ್ರ ದಲಿತರಿಗೆ ಮೀಸಲಿಡಲಾಗುತ್ತಿದೆ. ಇತರ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ಮೀಸಲಾತಿಯನ್ನು ತಪ್ಪಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಈ ಕಸ ಗುಡಿಸುವ ಕೆಲಸಕ್ಕೆ ನಮಗೆ ಮೀಸಲಾತಿ ಬೇಡ. ಅದನ್ನು ಮೇಲ್ವರ್ಗದವರಿಗೆ ಕೊಡಿ. ಇತರೆ ಕೆಲಸಗಳಿಗೆ ಮೀಸಲಾತಿ ನೀಡಿ ಎಂದು ತಾಲೂಕು ಮಟ್ಟದ ದಲಿತರ ಕುಂದು ಕೊರತೆ ಸಭೆಯಲ್ಲಿ ಸೇರಿದ್ದ ಜನರು ಒಕ್ಕೊರಲಿನಿಂದ ಅಧಿಕಾರಿಗಳನ್ನು ಆಗ್ರಹಿಸಿದರು.

ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ತಹಶೀಲ್ದಾರ್ ಪ್ರಸನ್ನಮೂರ್ತಿ ಅಧ್ಯಕ್ಷತೆಯಲ್ಲಿ ಶುಕ್ರವಾರ ದಲಿತರ ಕುಂದುಕೊರತೆ ಸಭೆ ನಡೆಯಿತು. ಸಭೆಯಲ್ಲಿ ನೂತನ ಗ್ರಾಮ ಪಂಚಾಯತ್‌ಗಳು ಮಾಡುತ್ತಿರುವ ಸಿಬ್ಬಂದಿ ನೇಮಕ ಪ್ರಕ್ರಿಯೆಯಲ್ಲಿ ದಲಿತರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ದಲಿತ ಮುಖಂಡ ಬಿ.ಕೆ ವಸಂತ್ ಪ್ರಸ್ತಾಪಿಸಿದರು.

ಕಸ ಗುಡಿಸುವ ಕೆಲಸವಿದ್ದರೆ ಮಾತ್ರ ಮೀಸಲಾತಿ ಇತರ ಕೆಲಸಗಳಿಗೆ ಅರ್ಜಿ ಆಹ್ವಾನಿಸುವಾಗ ಮೀಸಲಾತಿಯ ವಿಚಾರವೇ ಇರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆಂಜ ಗ್ರಾಮ ಪಂಚಾಯತ್‌ನಲ್ಲಿ ಸಿಬ್ಬಂದಿ ಆಯ್ಕೆ ಪ್ರಕ್ರಿಯೆಯಲ್ಲಿ ಪಂಚಾಯತ್ ಆಡಳಿತ ಅರ್ಹರಿಗೆ ಅನ್ಯಾಯ ಮಾಡಿದ್ದಾರೆ. ದ್ವಿತೀಯ ಪಿಯುಸಿ ಅರ್ಹತೆಯನ್ನು ಕೇಳಲಾಗಿತ್ತು. ಈ ಹುದ್ದೆಗೆ ಅರ್ಹತೆಯಿರುವವರು ಅರ್ಜಿ ಸಲ್ಲಿಸಿದ್ದರೂ ಅದನ್ನು ಬದಿಗಿಟ್ಟು ತಮಗೆ ಬೇಕಾದವರಿಗೆ ಹುದ್ದೆಗಳನ್ನು ನೀಡುವ ಪ್ರಯತ್ನ ನಡೆಯುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಈಬಗ್ಗೆ ಪರಿಶೀಲಿಸಿ ಕಾನೂನು ಮೀರಿ ನೇಮಕಾತಿ ನಡೆದಿದ್ದರೆ ಅದನ್ನು ಸರಿ ಪಡಿಸುವುದಾಗಿ ತಾ. ಪಂ ಕಾರ್ಯನಿರ್ವಹಣಾಧಿಕಾರಿ ಸಿ. ಆರ್. ನರೇಂದ್ರ ಭರವಸೆ ನೀಡಿದರು.

ದಲಿತರಿಗೆ ಮೀಸಲಿರಿಸಲಾಗಿರುವ ಡಿ.ಸಿ ಮನ್ನಾ ಜಮೀನು ಹಂಚುವಂತೆ ದಶಕಗಳಿಂದ ಕೇಳುತ್ತಿದ್ದೇವೆ. ಆದರೆ ಇನ್ನೂ ಹಂಚಿಕೆಯಾಗಿಲ್ಲ, ಕಂದಾಯ ಇಲಾಖೆಯ ಬಳಿ ಇರುವ ಜಮೀನನ್ನಾದರೂ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸಂಜೀವ ಆರ್. ಒತ್ತಾಯಿಸಿದರು. ದಲಿತರಿಗೆ ಜಮೀನು ನೀಡಲು ಆದಾಯ ಮಿತಿ ಎಂಟು ಸಾವಿರ ಎಂದು ನಿಗದಿಪಡಿಸಲಾಗಿದೆ. ಎಂಟು ಸಾವಿರ ಆದಾಯವಿರುವ ಆದಾಯ ಪ್ರಮಾಣ ಪತ್ರವನ್ನು ಯಾರೂ ನೀಡುವುದಿಲ್ಲ ಅದರಿಂದಾಗಿ ಎಲ್ಲ ಅರ್ಜಿಗಳೂ ತಿರಸ್ಕೃತವಾಗುತ್ತಿದೆ. ಈ ಆದಾಯದ ಮಿತಿಯನ್ನು ಮೂವತ್ತು ಸಾವಿರಕ್ಕೆ ಏರಿಸಬೇಕು ಎಂದು ಚಂದು ಎಲ್. ಒತ್ತಾಯಿಸಿದರು. ಈ ಬಗ್ಗೆ ನಿರ್ಣಯ ತೆಗೆದುಕೊಂಡು ಸರಕಾರಕ್ಕೆ ಕಳುಹಿಸಲು ನಿರ್ಧರಿಸಲಾಯಿತು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗಿನ ಆದಿವಾಸಿಗಳ ಸಮಸ್ಯೆಗಳ ಬಗ್ಗೆ ಶೇಖರ ಎಲ್. ಗಮನ ಸೆಳೆದರು. ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಸರಕಾರ ಮುಂದಾಗಬಾರದು. ಅವರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು. ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. 94 ಸಿ ಯಲ್ಲಿಯೂ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಹಕ್ಕುಪತ್ರ ನೀಡಲು ಬಿಡುತ್ತಿಲ್ಲ ಎಂದು ತಾ.ಪಂ ಸದಸ್ಯ ಜಯರಾಮ ಆರೋಪಿಸಿದರು.

ಕೆಲ್ಲಕೆರೆ ಕೊರಗರ ಕಾಲನಿಯ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದಾಗ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಮಾತನಾಡಿ, ಅಲ್ಲಿನ ಸಮಸ್ಯೆಗೆ ಪರಿಹಾರ ಕಾಣಲು ಈಗಾಗಲೇ ಅನುದಾನ ಮೀಸಲಿರಿಸಲಾಗಿದೆ ಎಂದು ತಿಳಿಸಿದರು. ಶಿಶಿಲ ಗ್ರಾಮದಲ್ಲಿ ಅಕ್ರಮ ಸಕ್ರಮ ಕಡತಗಳನ್ನು ತಯಾರಿಸಲು ಗ್ರಾಮ ಸಹಾಯಕರು ಲಂಚ ಕೇಳುತ್ತಿದ್ದಾರೆ ಎಂದು ಗ್ರಾ.ಪಂ. ಉಪಾಧ್ಯಕ್ಷೆ ಗೀತಾ ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದರು. ಲಾಯಿಲ ಗ್ರಾಮದ ಸಮಸ್ಯೆಗಳ ಬಗ್ಗೆ ನಾಗರಾಜ ಎಸ್. ಲಾಯಿಲ ಗಮನ ಸೆಳೆದರು.

ಸಭೆಯಲ್ಲಿ ತಾಲೂಕು ಪಂಚಾಯತು ಅಧ್ಯಕ್ಷೆ ದಿವ್ಯಜ್ಯೋತಿ, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪನಾಯ್ಕ, ಸಮಾಜಕಲ್ಯಾಣ ಅಧಿಕಾರಿ ಮೋಹನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X