Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್:ಸತ್ತ ದನಗಳನ್ನೆತ್ತಲು ದಲಿತರ...

ಗುಜರಾತ್:ಸತ್ತ ದನಗಳನ್ನೆತ್ತಲು ದಲಿತರ ನಿರಾಕರಣೆ,ಸರಕಾರದಿಂದ ರಕ್ಷಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 July 2016 9:01 PM IST
share
ಗುಜರಾತ್:ಸತ್ತ ದನಗಳನ್ನೆತ್ತಲು ದಲಿತರ ನಿರಾಕರಣೆ,ಸರಕಾರದಿಂದ ರಕ್ಷಣೆಗೆ ಆಗ್ರಹ

ಅಹ್ಮದಾಬಾದ್,ಜು.29: ಉನಾದಲ್ಲಿ ದಲಿತ ಯುವಕರ ಮೇಲೆ ದೌರ್ಜನ್ಯವನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿರುವ, ಸಾಂಪ್ರದಾಯಿಕವಾಗಿ ಸತ್ತ ದನಗಳ ಚರ್ಮವನ್ನು ಸುಲಿದು ಹದಗೊಳಿಸುವ ವೃತ್ತಿಯಲ್ಲಿ ತೊಡಗಿಕೊಂಡಿರುವ ದಲಿತ ಸಮುದಾಯದ ಸದಸ್ಯರು ಗುಜರಾತಿನ ವಿವಿಧೆಡೆಗಳಲ್ಲಿ ಸತ್ತು ಬಿದ್ದಿರುವ ಜಾನುವಾರುಗಳ ಕಳೇಬರಗಳನ್ನು ವಿಲೇವಾರಿಗೊಳಿಸಲು ನಿರಾಕರಿಸಿದ್ದಾರೆ. ಗೋರಕ್ಷಕರಿಂದ ಕಿರುಕುಳವನ್ನು ತಡೆಯಲು ಸರಕಾರವು ತಮಗೆ ರಕ್ಷಣೆಯನ್ನು ನೀಡಬೇಕು ಮತ್ತು ಗುರುತಿನ ಚೀಟಿಗಳನ್ನು ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ದಲಿತರ ಈ ನಿರ್ಧಾರ ಆಡಳಿತವನ್ನು ಹೈರಾಣುಗೊಳಿಸಿದೆ. ವಿಶೇಷವಾಗಿ ಸುರೇಂದ್ರನಗರವೊಂದರಲ್ಲೇ ಕಳೆದೊಂದು ವಾರದಲ್ಲಿ 80ಕ್ಕೂ ಅಧಿಕ ಜಾನವಾರುಗಳನ್ನು ಪೌರಾಡಳಿತದ ಸಿಬ್ಬಂದಿಗಳೇ ವಿಲೇವಾರಿಗೊಳಿಸಿದ್ದಾರೆ.

ದಲಿತ ಸಂಘಟನೆಗಳು ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ತಾನು ಸರಕಾರದೊಂದಿಗೆ ಚರ್ಚಿಸುವುದಾಗಿ ಸುರೇಂದ್ರನಗರ ಜಿಲ್ಲಾಧಿಕಾರಿ ಉದಿತ್ ಅಗರವಾಲ್ ಸುದ್ದಿಗಾರರಿಗೆ ತಿಳಿಸಿದರು.
 
ಜಾನುವಾರುಗಳ ಚರ್ಮ ಸುಲಿಯುವ ವೃತ್ತಿಯಲ್ಲಿ ತೊಡಗಿಕೊಂಡಿರುವ ದಲಿತರು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದು, ಹಲವಾರು ದಲಿತ ಸಂಘಟನೆಗಳ ಒಕ್ಕೂಟವಾಗಿರುವ ದಲಿತ ಮಾನವ ಅಧಿಕಾರ ಆಂದೋಲನವು ಈ ಮುಷ್ಕರಕ್ಕೆ ಕರೆ ನೀಡಿದೆ. ಗುಜರಾತ್‌ನಾದ್ಯಂತ ಹೆಚ್ಚೆಚ್ಚು ದಲಿತರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ. ಸುರೇಂದ್ರನಗರದಲ್ಲಿ ನಮ್ಮ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಸಮುದಾಯದ ಹೆಚ್ಚಿನ ಕುಟುಂಬಗಳು ಕಳೆದೊಂದು ವಾರದಿಂದ ಮೃತ ಜಾನುವಾರುಗಳ ವಿಲೇವಾರಿ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿವೆ ಎಂದು ನವಸಾರ್ಜನ ಟ್ರಸ್ಟ್‌ನ ನಾತು ಪರಮಾರ್ ತಿಳಿಸಿದರು. ಇದರಿಂದಾಗಿ ಜಿಲ್ಲಾಡಳಿತವೀಗ ಪ್ರತಿದಿನ ಕನಿಷ್ಠ 200 ಮೃತ ಜಾನುವಾರುಗಳನ್ನು ವಿಲೇವಾರಿಗೊಳಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X