Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರಸರಕಾರ ಅರಣ್ಯಕಾಯ್ದೆಗೆ ತಿದ್ದುಪಡಿ...

ಕೇಂದ್ರಸರಕಾರ ಅರಣ್ಯಕಾಯ್ದೆಗೆ ತಿದ್ದುಪಡಿ ತರಲಿ

ವಾರ್ತಾಭಾರತಿವಾರ್ತಾಭಾರತಿ29 July 2016 10:20 PM IST
share
ಕೇಂದ್ರಸರಕಾರ ಅರಣ್ಯಕಾಯ್ದೆಗೆ ತಿದ್ದುಪಡಿ ತರಲಿ

ಮೂಡಿಗೆರೆ, ಜು.29: 1991ರಿಂದ 2016ರವರೆಗೆ ಡೀಮ್ಡ್ ಫಾರೆಸ್ಟ್ ಸಮಸ್ಯೆ ಉಲ್ಬಣಿಸಿದ್ದು, ರಾಜ್ಯದಲ್ಲಿ 9.92 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಗೆ ಸೇರುತ್ತದೆ. ಜಿಲ್ಲೆಯಲ್ಲಿ 1.40 ಸಾವಿರ ಹೆಕ್ಟೇರ್ ಭೂಮಿ ಕಂದಾಯ ಮತ್ತು ಅರಣ್ಯ ವ್ಯಾಪ್ತಿಗೆ ಒಳಪಡುತ್ತದೆ.

 ಡೀಮ್ಡ್ ಫಾರೆಸ್ಟ್ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ಇರುವುದರಿಂದ ಈಗಾಗಲೇ ಜಂಟಿ ಸರ್ವೇ ಕಾರ್ಯ ಮುಗಿದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಪ್ರೀಂ ಕೋರ್ಟ್‌ಗೆ ಅಫಿದಾವಿತ್ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಪಟ್ಣಣದ ಚರ್ಚ್ ಹಾಲ್‌ನಲ್ಲಿ ಶುಕ್ರವಾರ ನಡೆದ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಕುರಿತ ಸಚಿವರೊಂದಿಗೆ ರೈತರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಂದಾಯ ಮತ್ತು ಅರಣ್ಯ ಭೂಮಿಗೆ ಡಿ.ಲೈನ್(ಗಡಿಗುರುತು)ಗಾಗಿ ಮತ್ತೊಮ್ಮೆ ಜಂಟಿ ಸರ್ವೇ ಮಾಡಿ ಡಿ.ಲೈನ್ ಗುರುತಿಸಲಾಗುವುದು ಎಂದ ಅವರು, ಶೇ.50 ರಷ್ಟು ಅರಣ್ಯ ಕಾಯ್ದೆ ನ್ಯಾಯಾಲಯ ವ್ಯಾಪ್ತಿಗೆ ಬರುವುದರಿಂದ ಕಾನೂನು ಮೂಲಕ ಎಲ್ಲವನ್ನು ತೀರ್ಮಾನಿಸಲು ಮುಂದಾಗಿರುವುದಾಗಿ ತಿಳಿಸಿದರು.

ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ತಂದರು. ಈ ಕಾಯ್ದೆಯಿಂದಾಗಿ ಕೆಲ ಸಮಸ್ಯೆಗಳನ್ನು ಈಗಿನ ಸ್ವರೂಪಕ್ಕನುಗುಣವಾಗಿ ಪರಿಹರಿಸಲು ಅರಣ್ಯ ಕಾಯ್ದೆಯಲ್ಲಿ ತೊಡಕನ್ನು ಎದುರಿಸಬೇಕಾಗಿದೆ. ಆದ್ದರಿಂದ ಈಗಿನ ಕೇಂದ್ರ ಸರಕಾರ ಅರಣ್ಯ ಕಾಯ್ದೆಗೆ ಕೆಲ ಮಾರ್ಪಾಡುಗಳನ್ನು ಮಾಡಬೇಕಾಗಿದೆ. ಕಾಫಿ ತೋಟದ ಮರಗಳ ಕಟಾವಿಗೆ ಅರಣ್ಯಾಧಿಕಾರಿಗಳು ತೊಂದರೆ ನೀಡುತ್ತಾರೆ ಎಂಬ ಆರೋಪವಿದೆ. ಆದ್ದರಿಂದ ಮರಗಳ ಕಟಾವಿಗೆ ಹಾಗೂ ಸಾಗಾಟಕ್ಕೆ ಪರವಾನಿಗೆ ನೀಡಲು ವಲಯ ಅರಣ್ಯಾಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು ಎಂದು ತಿಳಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಮಾತನಾಡಿ, ಕಳಸಾ ಇನಾಮ್ ಭೂಮಿಯ ಬಗ್ಗೆ ನ್ಯಾಯಾಲಯದ ತೀರ್ಪಿನಿಂದಾಗಿ ಕಳಸ ಭಾಗದ ಸುಮಾರು 20.ಸಾವಿರ ಜನ ಭಯಪಡುವಂತಾಗಿದೆ. ದೇವಸ್ಥಾನ, ಶಾಲಾಕಟ್ಟಡ, ಅರಣ್ಯ ಕಚೇರಿ ಹಾಗೂ ಇನ್ನಿತರ ಕಟ್ಟಡಗಳು ತೆರವುಗೊಳಿಸುವ ಭೀತಿ ಎದುರಿಸುವಂತಾಗಿದೆ. ಸರಕಾರ ನ್ಯಾಯಾಲಯಕ್ಕೆ ಅಫಿದಾವಿತ್ ಸಲ್ಲಿಸುವ ಮೂಲಕ ಇನಾಮ್ ಭೂಮಿಯನ್ನು ಉಳಿಸಿಕೊಡಬೇಕೆಂದು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯೆ ಡಾ.ಮೋಟಮ್ಮ ಮಾತನಾಡಿ, 1978ರ ಕಾಯ್ದೆ ಪ್ರಕಾರ ಎಸ್ಸಿ, ಎಸ್ಟಿಗಳ ಭೂಮಿಯನ್ನು ಸಕ್ರಮಗೊಳಿಸುವ ಅಧಿಕಾರವಿದೆ. ಇತರ ವರ್ಗದ ಭೂಮಿಯನ್ನು ಸಕ್ರಮಗೊಳಿಸಲು ಕಾನೂನಿನ ಆವಶ್ಯಕತೆ ಇದೆ. ಅರಣ್ಯ ಹಕ್ಕು ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಮುಂದಾಗಬೇಕೆಂದು ಸಚಿವರನ್ನು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೆಶ್, ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊಸಮಠ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್, ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಯರಾಂ, ಉಪವಿಭಾಗಾಧಿಕಾರಿ ಸ್ನೇಹಲ್, ಎಂ.ಪಿ.ಕುಮಾರಸ್ವಾಮಿ, ಕೆ.ಸಿ.ರತನ್, ಸಿಡಿಎ ಅಧ್ಯಕ್ಷ ಚಂದ್ರೇಗೌಡ, ಪ್ರಭಾಕರ್, ಶಾಮಣ್ಣ, ಸುಧಾ ಯೋಗೇಶ್, ರಂಜನ್ ಅಜೀತ್ ಕುಮಾರ್, ದೇವರಾಜು, ಪಾರ್ವತಮ್ಮ, ಉಪಾಧ್ಯಕ್ಷ ಮದೀಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಡಾನೆ ಹಾವಳಿ ತಪ್ಪಿಸಲು ವನ್ಯಜೀವಿ ಕಾಯ್ದೆಗೆ ತಿದ್ದುಪಡಿ: ಕಾಡಾನೆ ಸೇರಿದಂತೆ ಇತರೇ ಕಾಡು ಪ್ರಾಣಿ ಗಳ ಹಾವಳಿ ತಡೆಗಟ್ಟಲು ವನ್ಯಜೀವಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಹಾಗೂ ಮಳೆಗಾಲ ಅಂತ್ಯಗೊಂಡ ನಂತರ ತೋಟಗಳಿಗೆ ಲಗ್ಗೆ ಇಡುತ್ತಿರುವ ಆನೆಗಳನ್ನು ಹಿಡಿದು ಆನೆ ಶಿಬಿರಗಳಿಗೆ ಸಾಗಿಸಲಾಗುವುದು. ಹುಲಿ, ಚಿರತೆಗಳ ಹಾವಳಿಯು ಹೆಚ್ಚಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅವುಗಳನ್ನು ಪ್ರಾಣಿ ಸಂಗ್ರಾಹಾಲಯಗಳಿಗೆ ಸಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಮಂಗಗಳಿಂದಾಗಿ ಕಾಫಿ, ಬಾಳೆ, ಅಡಿಕೆ, ಕಿತ್ತಳೆ ಸಹಿತ ಇತರ ಬೆಳೆಗಳಿಗೆ ತೊಂದರೆಯಾಗುತ್ತಿರುವುದರಿಂದ ಮಂಗಗಳ ಸಂತತಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆನೆ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ರೂ. ವರೆಗೂ ಪರಿಹಾರ ವಿತರಿಸಲಾಗುತ್ತಿದೆ. ಬೆಳೆ ನಾಶಕ್ಕೆ ಅನುಗುಣವಾಗಿ ಪರಿಹಾರವನ್ನು ವಿತರಿಸ ಲಾಗುತ್ತಿತ್ತು. ಇದರ ಮೊತ್ತವನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X