ಕಾರು ಅಪಘಾತ : ವಿದ್ಯಾರ್ಥಿ ಮೃತ್ಯು

ಮಂಗಳೂರು, ಜು. 29: ವೈದ್ಯಕೀಯ ವಿದ್ಯಾರ್ಥಿಗಳ ತಂಡವೊಂದು ಮಂಗಳೂರಿನಿಂದ ತಣ್ಣೀರುಬಾವಿ ಬೀಚ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಒರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ ಎನ್‌ಎಂಪಿಟಿ ಗೆಸ್ಟ್ ಹೌಸ್ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನ ತೆಲಂಗಾಣದ ಭಾರ್ಗವ (26) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಪರಾಸ್ ಜಿ. (27) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ರಕ್ಷಿತ್ ರೆಡ್ಡಿ ಮತ್ತು ಜಿಲ್ಸ್‌ರಾಜ್ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಸುರತ್ಕಲ್ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





