ಮನೆಗೆ ನುಗ್ಗಿ ಚಿನ್ನಾಭರಣ ಕಳವು
ವಿಟ್ಲ, ಜು.29: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ವೌಲ್ಯದ ಚಿನ್ನಾಭರಣ ಸಹಿತ ಹಲವು ಸಾಮಗ್ರಿಗಳನ್ನು ಕಳವುಗೈದ ಘಟನೆ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ, ಮೂಡುಪಡುಕೋಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಇಲ್ಲಿನ ನಿವಾಸಿ ಚಾಂದ್ ಸಾಹೇಬ್ ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4 ಲಕ್ಷ ರೂಪಾಯಿ ವೌಲ್ಯದ ಚಿನ್ನಾಭರಣ, 2 ಮೊಬೈಲ್ ಪೋನ್ ಹಾಗೂ ವ್ಯಾನಿಟಿ ಬ್ಯಾಗ್‌ಗಳನ್ನು ಕಳವುಗೈದಿದ್ದಾರೆ.
Next Story





