ಲಾರಿ ಢಿಕ್ಕಿ: ಚಾಲಕ ಮೃತ್ಯು
ಕಾಸರಗೋಡು, ಜು.29: ನಿಯಂತ್ರಣ ತಪ್ಪಿದ ಲಾರಿ ಮರಕ್ಕೆ ಢಿಕ್ಕಿ ಹೊಡೆದುಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಟಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಲಾರಿ ಚಾಲಕ ಮಹಾರಾಷ್ಟ್ರದ ಸುನಿಲ್ ಎಂದು ಗುರುತಿಸಲಾಗಿದೆ. ಕ್ಲೀನರ್ ಲಕ್ಷ್ಮಣ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಚ್ಚಿಯಿಂದ ಗುಜರಾತ್‌ಗೆ ಟಯರ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿಮಗುಚಿಬಿದ್ದು ಈ ಅಪಘಾತ ನಡೆದಿದೆ. ಲಾರಿಯಡಿ ಸಿಲುಕಿದ್ದ ಇಬ್ಬರನ್ನು ಕ್ರೇನ್ ಬಳಸಿ ಲಾರಿಯನ್ನು ಮೇಲಕ್ಕೆತ್ತಿದ ಬಳಿಕ ಹೊರ ತೆಗೆಯಲಾಯಿತು.
ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುನಿಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





