Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯೂಪಡ್ಪು: ಶಿಕ್ಷಕಿಯ ವರ್ಗಾವಣೆ ಖಂಡಿಸಿ...

ನ್ಯೂಪಡ್ಪು: ಶಿಕ್ಷಕಿಯ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ30 July 2016 5:35 PM IST
share
ನ್ಯೂಪಡ್ಪು: ಶಿಕ್ಷಕಿಯ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ

ಕೊಣಾಜೆ, ಜು.30: ಹರೇಕಳ ನ್ಯೂಪಡ್ಪುವಿನ ಶಾಲೆಗೆ ಒಂದು ಇತಿಹಾಸ ಇದೆ. ಹರೇಕಳ ಹಾಜಬ್ಬ ಅವರು ಕಿತ್ತಲೆ ಹಣ್ಣು ಮಾರಾಟ ಮಾಡಿ ಬಡವರ ಮಕ್ಕಳೂ ಶಿಕ್ಷಣ ಕಲಿಯಬೇಕೆನ್ನುವ ಉದ್ದೇಶದಿಂದ ಹಲವಾರು ವರ್ಷದ ಪರಿಶ್ರಮದಿಂದ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಗೊಂಡಿತ್ತು. ಆದರೆ ಇದೀಗ ಸರಕಾರ ಇಂತಹ ಶಾಲೆಯ ಶಿಕ್ಷಕಿಯರನ್ನು ವರ್ಗಾಯಿಸುವ ಮೂಲಕ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ಎಸ್‌ಎಫ್‌ಐನ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಹೇಳಿದರು.

ಹರೇಕಳ ನ್ಯೂಪಡ್ಪುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸಿರುವುದನ್ನು ಖಂಡಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಶನಿವಾರ ನಡೆಸಿದ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಸರಕಾರ ಹೇಳುತ್ತಿದೆ. ನ್ಯೂಪಡ್ಪುವಿನ ಶಾಲೆಗೆ ಶಿಕ್ಷಕರ ಕೊರತೆಯಿದ್ದು, ದೈಹಿಕ ಶಿಕ್ಷಕರ ನೇಮಕಾತಿ ಇನ್ನೂ ಆಗಿಲ್ಲ. ಹಾಜಬ್ಬರ ಕನಸಿನ ಶಾಲೆ ಇದಾಗಿದ್ದು ಇಲ್ಲಿಯ ಶಿಕ್ಷಕಿ ರೇಷ್ಮಾ ಅವರನ್ನು ದೂರದ ಊರಿಗೆ ವರ್ಗಾಯಿಸಲಾಗಿದೆ. ಇದರಿಂದ ಇಲ್ಲಿಯ ವಿದ್ಯಾರ್ಥಿಗಳೂ ಸಂಕಷ್ಟಕ್ಕೀಡಾಗುತ್ತಾರೆ. ಏಕಾಏಕಿಯಾಗಿ ಸರಕಾರ ಶಿಕ್ಷಕರ ವರ್ಗಾವಣೆಯ ನೆಪದಲ್ಲಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ನೀಡುತ್ತಿದ್ದು, ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯರ ಸರಕಾರ ಹಾಜಬ್ಬರಂತಹ ಅಕ್ಷರ ಸಂತರಿಂದ ಕಲಿಯುವುದು ಬಹಳಷ್ಟು ಇದೆ. ಸರಕಾರವು ಇಂತಹ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಸ್‌ಎಫ್‌ಐ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಿದ್ಯಾರ್ಥಿಗಳು ಮತ್ತು ಪೋಷಕರು ತರಗತಿ ಬಹಿಷ್ಕರಿಸಿ ಜಾಥಾ ನಡೆಸಿ ನ್ಯೂಪಡ್ಪುಜಂಕ್ಷನ್‌ನಲ್ಲಿ ಧರಣಿ ನಡೆಸಿದರು.

ಧರಣಿಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಶರಣ್ ಶೆಟ್ಟಿ, ಡಿವೈಎಫ್‌ಐನ ರಫೀಕ್ ಹರೇಕಳ, ಉಮರಬ್ಬ ನ್ಯೂಪಡ್ಪು, ಎವರಿಸ್ ಕುಟಿನ್ಹಾ, ಪಂಚಾಯತ್ ಸದಸ್ಯ ಹನೀಫ್, ಸಿದ್ದೀಕ್ ನ್ಯೂಪಡ್ಪು, ಖಾಲಿದ್, ಎಸ್‌ಡಿಎಂಸಿ ಸದಸ್ಯರಾದ ಬೇಬಿ, ಶೋಭಾ, ಮುಹಮ್ಮದ್, ಅಸ್ಮಾ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X