Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀರು ಕೇಳಿದ್ದಕ್ಕೆ ಲಾಠಿ ಏಟು

ನೀರು ಕೇಳಿದ್ದಕ್ಕೆ ಲಾಠಿ ಏಟು

ಗರ್ಭಿಣಿ, ವೃದ್ಧರನ್ನು ಬಿಡದೆ ಥಳಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ30 July 2016 6:58 PM IST
share

ಬೆಂಗಳೂರು/ಯಮನೂರು ಜು.30: ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ಖಂಡಿಸಿ ಪ್ರತಿಭಟನೆ ಮಾಡಿದ ರೈತರನ್ನು ಬಂಧಿಸುವ ನೆಪದಲ್ಲಿ ನವಲಗುಂದ ತಾಲೂಕಿನ ಯಮನೂರಿಗೆ ಗ್ರಾಮಕ್ಕೆ ನುಗ್ಗಿದ ಪೊಲೀಸರು ಮಹಿಳೆಯರನ್ನು, ವೃದ್ಧರನ್ನು ಮನ ಬಂದಂತೆ ಥಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ನವಲಗುಂದ ತಾಲೂಕಿನ ಯಮನೂರಿಗೆ ಏಕಾಏಕಿ ನುಗ್ಗಿದ ನೂರಾರು ಪೊಲೀಸರು ಮನೆ, ಮನೆಗೆ ನುಗ್ಗಿ ವೃದ್ಧರು, ಮಹಿಳೆಯರು ಹಾಗೂ ಮಕ್ಕಳೆನ್ನದೆ ಬೀದಿಗೆ ಎಳೆದೆ ತಂದು ಮನಬಂದಂತೆ ಥಳಿಸಿದರು. ವೃದ್ಧರು ಪರಿಪರಿಯಾಗಿ ಬೇಡಿಕೊಂಡರು ಬಿಡದೆ ಕೈ ಕಾಲು ಮುರಿಯುವಂತೆ ಹೊಡೆದಿದ್ದಾರೆ ಎಂದು ಗ್ರಾಮಾಸ್ಥರು ಆರೋಪಿಸಿದ್ದಾರೆ.
ಬಾಗಿಲು ಮುರಿದ ಪೊಲೀಸರು: ಪೊಲೀಸರ ಬೂಟುಗಳ ಶಬ್ದ ಕೇಳುತ್ತಿದ್ದಂತೆ ಭಯಗೊಂಡ ಮಹಿಳೆಯರು ಮನೆಯ ಬಾಗಿಲು ಹಾಕಿಕೊಂಡಿದ್ದಾರೆ. ಆದರೆ, ಪೊಲೀಸರು ಬಾಗಿಲುಗಳನ್ನು ಮುರಿದು ವೃದ್ಧ ಮಹಿಳೆಯನ್ನು ಮನಬಂದಂತೆ ಥಳಿಸಿದ್ದಾರೆ. ಗ್ರಾಮದ ಸಿದ್ದವ್ವ ಸಾರಾವಾರಿ (70), ಸಾವಿತ್ರಿ ಹಿರೇಮಠ (55), ಕಾಶವ್ವ ಚುಳಕಿ (55) ಎಂಬ ಮಹಿಳೆಯರಿಗೆ ತೀವ್ರವಾದ ಪೆಟ್ಟಾಗಿದೆ.
ಗರ್ಭಿಣಿಯನ್ನು ಬಿಡದ ಪೊಲೀಸರು: ಪ್ರತಿಭಟನೆ ಮಾಡಿದ ರೈತರನ್ನು ಬಂಧಿಸುವ ನೆಪದಲ್ಲಿ ಯಮಲೂರು ಗ್ರಾಮಕ್ಕೆ ನುಗ್ಗಿದ ಪೊಲೀಸರು ಶಿಲ್ಪಾಜಾಲಿಕಟ್ಟಿ ಎಂಬ ಗರ್ಭಿಣಿ ಮಹಿಳೆಯನ್ನು ಥಳಿಸಿ ಗಾಯಗೊಳಿಸಿದ್ದಾರೆ. ಇದರಿಂದಾಗಿ ಭಯಗೊಂಡಿರುವ ಗ್ರಾಮಾಸ್ಥರು ಊರನ್ನು ತೊರೆದಿದ್ದಾರೆ.


ಯಮನೂರು ಗ್ರಾಮಸ್ಥರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ನೋಡಿ ತೀವ್ರ ನೋವುಂಟಾಗಿದೆ. ವೃದ್ಧರು ಮಹಿಳೆಯರು ಎನ್ನದೆ ಮನೆಗೆ ನುಗ್ಗಿ ಪೊಲೀಸರು ಥಳಿಸುತ್ತಿದ್ದಾರೆ. ಇದನ್ನು ನೋಡುತ್ತಿದ್ದರೆ ಕರ್ನಾಟಕ ಬ್ರಿಟಿಷ್ ಆಡಳಿತದಲ್ಲಿದೆಯೆ ಎಂಬ ಅನುಮಾನ ಬರುವಂತಿದೆ. ಅಂತೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್‌ಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವಂತಹ ಅರ್ಹತೆಯಿಲ್ಲ.
-ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

ನವಲುಗುಂದ ತಾಲೂಕಿನ ಯಮಲೂರು ಗ್ರಾಮದ ಕೆಲವು ರೈತರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಹೀಗಾಗಿ ಪ್ರಕರಣ ದಾಖಲುಗೊಂಡಿರುವ ರೈತರನ್ನು ಬಂಧಿಸುವುದಕ್ಕಾಗಿ ಪೊಲೀಸರು ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಕೆಲವು ಪೊಲೀಸರು ಗ್ರಾಮಸ್ಥರ ಮೇಲೆ ಅತಿರೇಕವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಓಂ ಪ್ರಕಾಶ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X