Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಬಂದ್ ಬಹುತೇಕ ಯಶಸಿ್ವ

ಕರ್ನಾಟಕ ಬಂದ್ ಬಹುತೇಕ ಯಶಸಿ್ವ

ಕೆಲವೆಡೆ ಮಿಶ್ರಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ30 July 2016 11:06 PM IST
share
ಕರ್ನಾಟಕ ಬಂದ್ ಬಹುತೇಕ ಯಶಸಿ್ವ

ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ

ಬೆಳಗ್ಗೆಯಿಂದಲೇ ಸರಕಾರಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಬೆಳಗ್ಗೆ ಸಂಚರಿಸಿದ ಖಾಸಗಿ ಬಸ್‌ಗಳು ನಂತರ ರಸ್ತೆಗಿಳಿಯಲಿಲ್ಲ. ಚಿತ್ರಮಂದಿರಗಳು ಸಿನಿಮಾ ಪ್ರದರ್ಶನ ರದ್ದುಗೊಳಿಸಿದ್ದವು. ಪೆಟ್ರೋಲ್ ಬಂಕ್‌ಗಳು ಬಾಗಿಲು ಮುಚ್ಚಿದ್ದವು. ಕೆಲ ಸಿಟಿ ಬಸ್‌ಗಳು ಸಂಚರಿಸಿದರೂ ಸಂಖ್ಯೆ ಕಡಿಮೆಯಿತ್ತು. ಇದು ನಾಗರಿಕರ ದೈನಂದಿನ ಜೀವನದ ಮೇಲೆ ಪರಿಣಾಮ ಉಂಟು ಮಾಡಿತು.

ಮುಚ್ಚಲಿಲ್ಲ: ಉಳಿದಂತೆ ಶಾಲಾ-ಕಾಲೇಜುಗಳು, ಸರಕಾರಿ-ಖಾಸಗಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಣೆ ಮಾಡಿದವು. ನಗರದಲ್ಲಿ ಅಂಗಡಿ-ಮುಂಗಟ್ಟುಗಳು ಎಂದಿನಂತೆ ಬಾಗಿಲು ತೆರೆದಿದ್ದವು. ಮುಖ್ಯ ರಸ್ತೆಯಲ್ಲಿದ್ದ ಕೆಲ ವರ್ತಕರು ಪ್ರತಿಭಟನೆಯ ರ್ಯಾಲಿ ಹಾದು ಹೋಗುವ ವೇಳೆ ಬಾಗಿಲು ಮುಚ್ಚಿ ಬಳಿಕ ಎಂದಿನಂತೆ ವಹಿವಾಟು ಆರಂಬಿಸಿದರು.

ಆಟೋ, ಟ್ಯಾಕ್ಸಿಗಳ ಸಂಚಾರ ಎಂದಿನಂತೆಯೇ ಇತ್ತು. ಸಿಟಿಬಸ್‌ಗಳ ಸಂಚಾರ ವಿರಳವಾಗಿದ್ದ ಕಾರಣ ಆಟೋ, ಮ್ಯಾಕ್ಸಿಕ್ಯಾಬ್‌ಗಳಿಗೆ ಸಾಕಷ್ಟು ಬೇಡಿಕೆ ಕಂಡುಬಂದಿತು. ಪೆಟ್ರೋಲ್ ಬಂಕ್‌ಗಳು ಬಾಗಿಲು ಮುಚ್ಚಿದ್ದರಿಂದ ವಾಹನ ಚಾಲಕರು ಇಂಧನಕ್ಕೆ ಪರದಾಡುವಂತಾಗಿತ್ತು. ಮಧ್ಯಾಹ್ನದ ಬಳಿಕ ಕೆಲ ಪೆಟ್ರೋಲ್ ಬಂಕ್‌ಗಳು ಕಾರ್ಯಾರಂಭ ಮಾಡಿದವು. ಸರಕಾರಿ ಹಾಗೂ ಖಾಸಗಿ ಬಸ್‌ಗಳು ಕೂಡ ಸಂಜೆಯ ನಂತರ ಓಡಾಡಲು ಆರಂಭಿಸಿದವು. ಇದರಿಂದ ಪರಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಯಿತು. ಬಿಗಿಭದ್ರತೆ: ಬಂದ್ ಕರೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿತ್ತು. ವ್ಯಾಪಕ ಕಟ್ಟೆಚ್ಚರವಹಿಸಲಾಗಿತ್ತು. ಗಸ್ತು ವ್ಯವಸ್ಥೆ ಬಿಗಿಗೊಳಿಸಲಾಗಿತ್ತು. ಇದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗಲಿಲ್ಲ. ಪ್ರತಿಭಟನೆ: ಬಸ್ ಆಪರೇಟರ್ಸ್‌ ಅಸೋಸಿಯೇಷನ್, ಜಯಕರ್ನಾಟಕ ಸಂಘಟನೆ ಜಿಲ್ಲಾ ಯೂತ್ ಘಟಕ, ಕರವೇ ನಾರಾಯಣಗೌಡ ಬಣ, ನವ ಕರ್ನಾಟಕ ಯುವ ಶಕ್ತಿ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು. ಕೆಲ ಸಂಘಟನೆಗಳು ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದವು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಅರ್ಪಿಸಿದವು.

ಗೋವಾ ಸಿಎಂಗೆ ಎಚ್ಚರಿಕೆ:

ಗೋವಾ ಸರಕಾರ ಮಹಾದಾಯಿ ಪ್ರಕರಣ ವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಉತ್ತರ ಕರ್ನಾಟಕ ಭಾಗವರಿಗೆ ಸಹಕಾರಿಯಾಗುವಂತೆ ಗೋವಾ ಮುಖ್ಯಮಂತ್ರಿಯವರು ಕ್ರಮಕೈಗೊಳ್ಳಬೇಕು. ಮಹಾದಾಯಿಯ ನೀರನ್ನು ಪೋಲು ಮಾಡುವುದು ಸರಿಯಲ್ಲ. ಒಂದು ವೇಳೆ ಈ ಬಗ್ಗೆ ಗೋವಾ ಸರಕಾರ ಕ್ರಮಕೈಗೊಳ್ಳದ ಪಕ್ಷದಲ್ಲಿ ಕರ್ನಾಟಕದಿಂದ ಗೋವಾಕ್ಕೆ ರಫ್ತಾಗುವ ಅಗತ್ಯ ಸಾಮಗ್ರಿಗಳನ್ನು ತಡೆಯುವುದಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೇಕರ್ ಎಚ್ಚರಿಕೆ ನಿಡಿದರು.

ದಾವಣಗೆರೆ: ರೈಲು ತಡೆದು ಪ್ರತಿಭಟನೆ: ಮಹಾದಾಯಿ ನ್ಯಾಯಾಧಿಕರಣದ ತೀರ್ಪು ಖಂಡಿಸಿ ಕರವೇ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಬೆಳಗ್ಗೆ ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು ಟೈಯರ್‌ಗಳನ್ನು ಸುಟ್ಟು ಬಳಿಕ ಮಹಾನಗರ ಪಾಲಿಕೆಯ ಮುಂಭಾಗ, ಬಿಎಸ್‌ಎನ್‌ಎಲ್ ಕಚೇರಿ, ರೈಲು ನಿಲ್ದಾಣದ ಎದುರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸಿದರು.

 ಪ್ರತಿಭಟನಾ ನಿರತರನ್ನು ಉದೇಶಿಸಿ ಮಾತನಾಡಿದ ದಾವಣಗೆರೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ, ರಾಜ್ಯದ 28 ಸಂಸದರು ಸಂಸತ್‌ನಲ್ಲಿ ನಮ್ಮ ನೆಲದ ಸಮಸ್ಯೆಗಳ ಬಗ್ಗೆ ಚಕಾರ ಎತ್ತದಿರುವುದು ವಿಷಾದದ ಸಂಗತಿ. ಕಳೆದ 20 ವರ್ಷಗಳಿಂದ ಉತ್ತರ ಕರ್ನಾಟಕದ ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ ಜನರು ಕುಡಿಯುವ ನೀರಿಗಾಗಿ ಕೇವಲ 7 ಟಿಎಂಸಿ ನೀರಿಗಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ, ಮಹಾದಾಯಿ ಮಧ್ಯಾಂತರ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.

ಗದಗ ಜಿಲ್ಲೆಯ ನರಗುಂದದಲ್ಲಿ ಹೋರಾಟದಲ್ಲಿ ಪಾಲ್ಗೊಂಡ ರೈತರ ಮೇಲೆ ದೌರ್ಜನ್ಯ ನಡೆಸಿ ಗುಂಡಾಗಳ ರೀತಿ ವರ್ತಿಸಿರುವುದು ಖಂಡನೀಯ ಎಂದ ಅವರು, ಇನ್ನಾದರೂ ಸರಕಾರದ ಜನಪ್ರತಿನಿಧಿಗಳು ಎಚ್ಚೆತ್ತು ಈ ಕೂಡಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರವೇವತಿಯಿಂದ ದಿಲ್ಲಿಗೆ ತೆರಳಿ ಸಂಸತ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಚಿಕ್ಕಮಗಳೂರು ಬಂದ್ ಯಶಸ್ವಿ: 

ಚಿಕ್ಕಮಗಳೂರು: ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ಆದೇಶವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಶನಿವಾರ ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು. ನಸುಕು ಹರಿಯುತ್ತಿದ್ದಂತೆಯೇ ನಗರ ಹೊರವಲಯದ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಚಿಕ್ಕಮಗಳೂರು ಶಿವಮೊಗ್ಗ ರೈಲನ್ನು ತಡೆದು ರಾಜ್ಯ, ಕೇಂದ್ರ ಸರಕಾರ ಹಾಗೂ ರಾಜ್ಯದ ಸಂಸದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

 ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಕರವೇ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದ ಹಲವಾರು ವರ್ಷಗಳಿಂದ ಇದ್ದರೂ ಕೇಂದ್ರ ಸರಕಾರ ಅದನ್ನು ಬಗೆಹರಿಸಿ ಬರಗಾಲದಿಂದ ತತ್ತರಿಸುತ್ತಿರುವ ಉತ್ತರ ಕರ್ನಾಟಕದ ಜನರಿಗೆ ನೀರುಣಿಸುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ರಾಜ್ಯದ ಸಂಸದರು ತಕ್ಷಣ ಪ್ರಧಾನ ಮಂತ್ರಿಯವರ ಬಳಿ ನಿಯೋಗ ತೆರಳಿ ಮಹದಾಯಿ ನದಿ ನೀರಿನ ಹಂಚಿಕೆ ವಿವಾದದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕವಾದುದು. ಬೇಡಿಕೆ ಈಡೇರದಿದ್ದಲ್ಲಿ ರಾಜ್ಯದ ಎಲ್ಲ್ಲ ಸಂಸದರ ಮನೆಗಳ ಮುಂದೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಂದ್‌ಗೆ ಉ.ಕ.ದಲ್ಲಿ ಉತ್ತಮ ಪ್ರತಿಕ್ರಿಯೆ

ಉತ್ತರ ಕನ್ನಡ: ಮಹಾದಾಯಿ ನ್ಯಾಯಾಧಿಕರಣದ ತೀರ್ಪನ್ನು ಪುನರ್ ಪರಿಶೀಲನೆ ನಡೆಬೇಕು ಎಂದು ಕನ್ನಡಪರ ಸಂಘಟನೆಗಳು ಶನಿವಾರ ನೀಡಿದ್ದ ಕರ್ನಾಟಕ ಬಂದ್ ಕರೆಗೆ ಉತ್ತರ ಕನ್ನಡದಲ್ಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್‌ನಿಂದ ಜನರ ತೀವ್ರ ತೊಂದರೆ ಪಡುವಂತಾಯಿತು.

ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತವಾಗಿದ್ದರಿಂದ ಜನ ಸಂಚಾರ ವಿರಳವಾಗಿತ್ತು. ಕಾರವಾರ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಟೆಂಪೊ, ರಿಕ್ಷಾ ಚಾಲಕರು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ವ್ಯಕ್ತ ಪಡಿಸಿದ್ದರು.

ಕನ್ನಡಪರ ಸಂಘಟನೆಗಳಾದ ಕನ್ನಡ ಚಳುವಳಿ ವಾಟಾಳ್ ಪಕ್ಷ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿದರು. ಬೆಳಗ್ಗೆ ನಗರದ ಸುಭಾಷ್ ವೃತ್ತದ ಬಳಿ ಸೇರಿದ ಸಂಘಟನೆಗಳು ಗೋವಾ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಸುಭಾಷ್ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಚಳುವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ತೀರ್ಪನ್ನು ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.

ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ

ಕೊಡಗು: ಮಹಾದಾಯಿ ನೀರಿನ ಹಂಚಿಕೆ ಸಂಬಂಧ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೊಧಿಸಿ ಕನ್ನಡ ಪರ ಸಂಘಟನೆಗಳು ನೀಡಿದ್ದ ರಾಜ್ಯ ಬಂದ್‌ಗೆ ಕರೆಗೆ ಕೊಡಗು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇತ್ತೀಚೆಗಷ್ಟೇ ಡಿವೈಎಎಸ್ಪಿಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ಕೊಡಗಿನಲ್ಲಿ ಬಂದ್ ನಡೆದಿದ್ದ ಕಾರಣದಿಂದ ಮತ್ತೆ ಬಂದ್ ನಡೆಸಲು ಚೇಂಬರ್ ಆಫ್ ಕಾಮರ್ಸ್ ಹಾಗೂ ಖಾಸಗಿ ಬಸ್ ಮಾಲಕರ ಸಂಘ ನಿರಾಸಕ್ತಿ ತೋರಿತು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮಡಿಕೇರಿ ಡಿಪೋದಿಂದ ತೆರಳಬೇಕಿದ್ದ ಎಲ್ಲಾ ಬಸ್‌ಗಳ ಸಂಚಾರ ಮಧ್ಯಾಹ್ನದವರೆಗೆ ಸಂಪೂರ್ಣ ಸ್ಥಗಿತಗೊಂಡಿತ್ತು. ಮಧ್ಯಾಹ್ನದ ಬಳಿಕ ಮೈಸೂರು, ಬೆಂಗಳೂರು, ಮಂಗಳೂರು ವಿಭಾಗಗಳಿಗೆ ಕೆಲವು ಬಸ್‌ಗಳ ಸಂಚಾರವನ್ನು ಆರಂಭಿಸಲಾಯಿತು.

ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಎಂದಿನಂತೆ ಮುಂದುವರಿದಿತ್ತು.ಕೊಡಗಿನಲ್ಲಿ ಬಂದ್ ನಡೆಯದ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೆೇಜುಗಳು, ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಅಲ್ಲದೆ, ಜನಜೀವನ ಎಂದಿನಂತೆ ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X