Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ...

ದೇಶದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಮುಸ್ಲಿಮರು: ಅಶ್ರಫ್

ತಂಝೀಮ್‌ನಿಂದ ಬೃಹತ್ ಮುಸ್ಲಿಮ್ ಐಕ್ಯತಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ30 July 2016 11:08 PM IST
share
ದೇಶದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಮುಸ್ಲಿಮರು: ಅಶ್ರಫ್

ಭಟ್ಕಳ, ಜು.30: ಮುಸ್ಲಿಂ ಸಮುದಾಯ ದೇಶದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾದ ಸಮುದಾಯವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ದ.ಕ. ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಹೇಳಿದ್ದಾರೆ.

   ಅವರು ಶನಿವಾರ ಇಲ್ಲಿನ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆ ಆಯೋಜಿಸಿದ್ದ ಕರಾವಳಿ ಜಿಲ್ಲೆಗಳ ಮುಸ್ಲಿಮ್ ಸಮುದಾಯದ ಈದ್ ಮಿಲನ್ ಹಾಗೂ ಏಕತಾ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕರಾವಳಿ ಜಿಲ್ಲೆಗಳ ಮುಸ್ಲಿಮರು ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾಗುತ್ತಿದ್ದು ಉತ್ತರಕನ್ನಡ, ಉಡುಪಿ ಹಾಗೂ. ದ.ಕ. ಜಿಲ್ಲೆಯ ಮುಸ್ಲಿಮ್ ಮುಖಂಡರನ್ನುಒಂದೇ ವೇದಿಕೆಯಡಿ ತರುವ ತಂಝೀಮ್‌ನ ಪ್ರಯತ್ನ ನಿಜಕ್ಕೂ ಹೆಚ್ಚು ಪ್ರಶಂಸನೀಯ. ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಬೇಕಾಗಿದೆ ಎಂದರು.

ಮಂಗಳೂರು ಜಮಾಅತೆ ಇಸ್ಲಾಮೀ ಹಿಂದ್‌ನ ಅಧ್ಯಕ್ಷ ಮುಹಮ್ಮದ್ ಕುಂಞಿ ಮಾತನಾಡಿ, ಮುಸ್ಲಿಮ್ ಸಮುದಾಯ ಸೋತು ಹೋಗುವ, ಭರವಸೆ ಕಳೆದುಕೊಳ್ಳುವ, ಹತಾಶರಾಗುವ ಸಮುದಾಯವಲ್ಲ. ನಮ್ಮಲ್ಲಿನ ಭಿನ್ನತೆಗಳನ್ನು ಬದಿಗೊತ್ತಿ ಸಮುದಾಯಕ್ಕಾಗಿ ಶ್ರಮಿಸಬೇಕಾಗಿದೆ. ಪವಿತ್ರ ಕುರ್‌ಆನ್ ಹಾಗೂ ಪ್ರವಾದಿ ಮುಹಮ್ಮದ್ ಪೈಗಂಬರರ ಸಂದೇಶಗಳನ್ನು ಪಾಲಿಸುತ್ತ ನಾವು ಸಮುದಾಯವನ್ನು ಮುನ್ನಡೆಸಬೇಕು. ಬೇರೆ ಬೇರೆ ಸಂಘಟನೆಗಳಲ್ಲಿ ಹಂಚಿ ಹೋಗಿರುವುದು ಮುಸ್ಲಿಮರ ದುರಂತವಾಗಿದೆ ಎಂದರು.

ಭಟ್ಕಳ ಜಾಮಿಯಾ ಮಸೀದಿಯ ಖತೀಬ್ ಮತ್ತು ಇಮಾಮ್ ಮೌಲಾನ ಅಬ್ದುಲ್ ಅಲೀಮ್ ನದ್ವಿ ಮಾತನಾಡಿ, ಮುಸ್ಲಿಮ್ ಸಮುದಾಯ ಪರಸ್ಪರರನ್ನು ಗೌರವಿಸುತ್ತ ಇತರರನ್ನು ಅರ್ಥ ಮಾಡಿಕೊಳ್ಳುತ್ತ ಒಗ್ಗಟ್ಟಾಗಿ ಬದುಕಬೇಕು ಎಂದು ಕರೆ ನೀಡಿದರು.

ಮಜ್ಲಿಸೆ ಇಸ್ಲಾಹ್ ತಂಝೀಮ್ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಮಝಮ್ಮಿಲ್ ಕಾಝಿಯಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ. ಸೈಯದ್ ಖಲಿಲುರ್ರಹ್ಮಾನ್ ಎಸ್.ಎಂ, ಮಂಗಳೂರು ಶಾಸಕ ಬಿ.ಎ. ಮೊಯ್ದಿನ್ ಬಾವ, ಮುಸ್ಲಿಮ್ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಅಹ್ಮದ್, ಸುನ್ನಿ ಮುಖಂಡ ಹೈದರ್ ಮಂಗಳೂರು, ಶಾಫಿ ಬೆಳ್ಳಾರೆ ಮುಂತಾದವರು ಮಾತನಾ ಡಿದರು. ವೇದಿಕೆಯಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಹೀಂ ಜುಕಾಕೋ, ಫಾರೂಕ್ ಬಾವಾ, ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮೌಲಾನ ಮಖ್ಬೂಲ್ ಅಹ್ಮದ್ ನದ್ವಿ ಮತ್ತಿತರರು ಉಪಸ್ಥಿತರಿದ್ದರು.

 ಮೌಲಾನ ನೇಮತುಲ್ಲಾ ಅಸ್ಕರಿ ಕುರ್‌ಆನ್ ಪಠಿಸಿದರು. ತಂಝೀಮ್ ಪ್ರಧಾನ ಕಾರ್ಯದರ್ಶಿ ಮುಹಿಯು ದ್ದೀನ್ ಅಲ್ತಾಫ್ ಖರೂರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಸ್ವಾಗತಿಸಿದರು. ಅತೀಖುರ್ರಹ್ಮಾನ್ ಶಾಬಂದ್ರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X