ಬೈಕ್-ಬಸ್ಸು ಢಿಕ್ಕಿ: ಯುವಕ ಬಲಿ
ಪಡುಬಿದ್ರೆ, ಜು.30: ಖಾಸಗಿ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟ ಘಟನೆ ಶನಿವಾರ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಕಾರ್ಕಳ ಕುಂಟಪಾಡಿ ನಿವಾಸಿ ಗೋವಿಂದ ಭಂಡಾರಿ ಪುತ್ರ ಸಂಭ್ರಮ್ ಜಿ. ಭಂಡಾರಿ (24) ಎಂದು ಗುರುತಿಸಲಾಗಿದೆ. ಇಂಜಿಯರ್ ಪದವಿ ಮುಗಿಸಿದ್ದ ಮೃತರು ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಕೆಲಸಕ್ಕೆಂದು ಹೋಗುತ್ತಿದ್ದ ಅವರ ಬೈಕ್‌ಗೆ ಪಡುಬಿದ್ರೆ ಪೇಟೆಯಲ್ಲಿ ಸರ್ವಿಸ್ ಬಸ್ಸು ಢಿಕ್ಕಿ ಹೊಡೆದಿದೆ. ಬಸ್ಸಿನ ಹಿಂಬದಿಯ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುವಾಗ ಮೃತಪಟ್ಟಿದ್ದಾರೆೆ ಎಂದು ತಿಳಿದು ಬಂದಿದೆ.
ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





