Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದ...

ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದ ತೊಂದರೆ: ಸರಿಪಡಿಸದಿದ್ದರೆ ಉಗ್ರ ಹೋರಾಟ

ವಾರ್ತಾಭಾರತಿವಾರ್ತಾಭಾರತಿ1 Aug 2016 4:33 PM IST
share
ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದ ತೊಂದರೆ: ಸರಿಪಡಿಸದಿದ್ದರೆ ಉಗ್ರ ಹೋರಾಟ

ಸಕಲೇಶಪುರ,ಆ.1: ಎತ್ತಿನಹೊಳೆ ತಿರುವು ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದ ಯೋಜನೆ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಸ್ಥಿತಿ ಸಂಪುರ್ಣ ಅಸ್ತವ್ಯಸ್ಥವಾಗಿದ್ದು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಎತ್ತಿನಹೊಳೆ ಯೋಜನೆ ಹಿಡುವಳಿದಾರರ ಹಾಗೂ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಸ್ವಾದೀಶ್ ಮೂರ್ತಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಟಿ ನಡೆಸಿದ ಅವರು, ನಿಯಮಾನುಸಾರ ಕಾಮಗಾರಿ ನಡೆಸದ ಕಾರಣ ಈ ಭಾಗದದಲ್ಲಿ ಅರಣ್ಯ, ಪರಿಸರ ನಾಶ ಉಂಟಾಗಿರುವ ಜೊತೆಗೆ ಸಂಚಾರಿ ರಸ್ತೆಗಳು ಕೆಸರು ಗದ್ದೆಗಳಂತಾಗಿವೆ. ಜನರು ಓಡಾಡುವ ರಸ್ತೆ ಪಕ್ಕದಲ್ಲಿಯೇ ಭಾರಿ ಗಾತ್ರದ ಪೈಪ್‌ಗಳನ್ನು ಹೂಳಲಾಗಿದ್ದು ಅವುಗಳ ಬಾಯಿ ತೆರೆದ ಸ್ಥಿತಿಯಲ್ಲಿಯೇ ಇರುವುದರಿಂದ ಮರಣ ಬಾವಿಗಳಾಗಿ ಮಾರ್ಪಟ್ಟಿವೆ. ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಅಗೆದು ಹಾಗೆಯೇ ಬಿಟ್ಟಿರುವ ಪರಿಣಾಮ ಮಳೆಯ ನೀರು, ಕೆಸರು ಮಿಶ್ರಿತವಾಗಿ ರಸ್ತೆಗಳ ಮೇಲೆ ಹರಿಯುತ್ತಿದೆ. ಇದರಿಂದಾಗಿ ಜನ ಓಡಾಡಲು, ವಾಹನಗಳು ಸಂಚರಿಸಲು ಕಷ್ಟವಾಗಿದೆ ಎಂದು ದೂರಿದರು.

ಕಾಮಗಾರಿ ಹೆಸರಿನಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳನ್ನು ಸಿಡಿಸಲಾಗುತ್ತಿದೆ. ಭೀಮೇಶ್ವರನ ಗುಡಿ ಸಮೀಪ ರೈಲ್ವೆ ಮಾರ್ಗ ಹಾದುಹೋಗಿದ್ದು ಇದಕ್ಕೆ ಸಮಚಕಾರ ಉಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಭಾಗದ ಮನೆಗಳು ಸ್ಫೊಟಕಗಳ ಸಿಡಿತಕ್ಕೆ ಬಿರುಕು ಬಿಟ್ಟಿದ್ದು ಶಿಥಿಲಾವಸ್ಥೆಗೆ ತಲುಪಿವೆ. ಶಾಲೆ, ಅಂಗನವಾಡಿ ಕೇಂದ್ರಗಳ ಸಮೀಪವೇ ದೊಡ್ಡ ಗುಂಡಿಗಳನ್ನು ತೋಡಿ ಹಾಗೆಯೇ ಬಿಟ್ಟಿರುವುದರಿಂದ ಮಕ್ಕಳು ಓಡಾಡಲು ಕಷ್ಟವಾಗಿದೆ. ಯಾವಾಗ ಏನು ಅನಾಹುತ ಸಂಭವಿಸುತ್ತದೋ ಎಂಬ ಭಯ ಮನೆ ಮಡಿದೆ ಎಂದರು.

ಸಂಬಂಧಿಸಿದವರು ಕೂಡಲೆ ಎಚ್ಛೆತ್ತುಕೊಂಡು ಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕಿದೆ. ಎಲ್ಲಾ ಕಾರ್ಯಗಳನ್ನು ಒಟ್ಟಿಗೆ ಮಾಡಲು ಸಆಧ್ಯವಾಗದಿದ್ದರೂ ತಾತ್ಕಾಲಿಕವಾಗಿ ಗುಂಡಿ ಮುಚ್ಚುವುದು, ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವುದು, ಬಾಯ್ತೆರೆದು ನಿಂತಿರುವ ಬಾರಿ ಗಾತ್ರದ ಪೈಪ್‌ಗಳ ಬಾಯಿ ಮುಚ್ಚುವ ಕೆಲಸ ಮಾಡಬೇಕು. ಈ ಕೆಲಸಗಳನ್ನು ವಾರದೊಳಗೆ ನಡೆಸಲು ಮುಂದಾಗದಿದ್ದರೆ ವಿವಿಧ ಸಂಘಟನೆಗಳು ಹಾಗು ಸಂತ್ರಸ್ಥರ ಸಹಕಾರದೊಂದಿಗೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೊಷ್ಟಿಯಲ್ಲಿ ಭೂಷಣ್ ಗಾನದಹೊಳೆ, ಕಾರ್ತಿಕ್, ನಿಶಾಂತ್, ಮಾವಿನಕೋಲು ಚಂದ್ರಶೇಖರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X