Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು: ನಾಳೆ ಮನೆಮನೆಗಳಲ್ಲಿ ಘಮಘಮಿಸಲಿದೆ...

ಕೊಡಗು: ನಾಳೆ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದು ಸೊಪ್ಪಿನ ಪಾಯಸ

ಕೊಡಗಿನಲ್ಲಿ ಕಕ್ಕಡ 18ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ1 Aug 2016 10:07 PM IST
share
ಕೊಡಗು: ನಾಳೆ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದು ಸೊಪ್ಪಿನ ಪಾಯಸ

ಮಡಿಕೇರಿ, ಆ.1: ಕೊಡಗಿನಲ್ಲಿ ಆಟಿ ಅಥವಾ ಕಕ್ಕಡ ಆಚರಣೆಯ 18ನೆ ದಿನ ಆಗಸ್ಟ್ 3. ಕಕ್ಕಡ ಆರಂಭವಾಗಿ 18 ದಿನ ತುಂಬುತ್ತಿದ್ದಂತೆ 18 ಔಷಧೀಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ ಅಥವಾ ರುಚಿ ರುಚಿಯಾದ ವಿವಿಧ ಖಾದ್ಯಗಳನ್ನು ಮಾಡಿ ಸೇವಿಸುವುದು ವಿಶೇಷ. ಕೊಡಗಿನ ಮನೆ ಮನೆಗಳಲ್ಲಿ ಮದ್ದು ಸೊಪ್ಪಿನ ಪಾಯಸ ಘಮಘಮಿಸುತ್ತದೆ. ತುಳುನಾಡಿನಲ್ಲಿ ಆಟಿ 18 ಹೇಗೋ, ಹಾಗೇ ಕೊಡಗಿನಲ್ಲಿ ಕಕ್ಕಡ 18 ಕೂಡ ಒಂದು ವಿಶಿಷ್ಟ ಆಚರಣೆಯಾಗಿದೆ. ಹಸಿರ ಕಾನನದ ಗೂಡಾದ ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ ಇಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಯಥೇಚ್ಛವಾಗಿ ಸಿಗುವ ಮರ ಕೆಸ, ಕಣಿಲೆ, ಅಣಬೆ, ಮದ್ದು ಸೊಪ್ಪುಮಳೆ ಚಳಿ ಗಾಳಿಗೆ ಮಾನವನ ದೇಹವನ್ನು ಬೆಚ್ಚಗಿಡಲು ಸಹಕಾರಿಯಾಗಿದೆ. ಮಾತ್ರವಲ್ಲ ಇವುಗಳಲ್ಲಿ ಔಷಧೀಯ ಗುಣಗಳಿವೆ ಎನ್ನುವುದು ಹಿರಿಯರ ನಂಬಿಕೆ.

ನಾಟಿ ಕೋಳಿ, ಏಡಿ, ಹೊಳೆ ಮೀನು ಕೂಡ ಕಕ್ಕಡ ತಿಂಗಳಿನಲ್ಲಿ ಮಾಂಸಾಹಾರಿಗಳ ಹೊಟ್ಟೆಯನ್ನು ಸೇರಿ ದೇಹವನ್ನು ಬೆಚ್ಚಗಿಡಲು ಹಾಗೂ ಆರೋಗ್ಯ ವರ್ಧಕವಾಗಿ ಕೆಲಸ ಮಾಡಲು ಸಹಕರಿಯಾಗಿದೆ. ಆದರೆ ಇವುಗಳೆಲ್ಲದಕ್ಕಿಂತಲೂ ಭಿನ್ನವಾದ ಖಾದ್ಯವೆಂದರೆ ಮದ್ದು ಸೊಪ್ಪಿನಿಂದ ತಯಾರಿಸಿದ ಪಾಯಸ. ಈ ಪಾಯಸದಿಂದಲೇ ಕಕ್ಕಡ 18ಕ್ಕೆ ಮಹತ್ವವಿದೆ. ವರ್ಷಕ್ಕೊಂದು ಬಾರಿ ಕಕ್ಕಡ 18ರಂದು ಮದ್ದು ಸೊಪ್ಪಿನ ಪಾಯಸವನ್ನು ಸೇವಿಸುವ ಪದ್ಧತಿ ಕಳೆದ ಹಲವು ವರ್ಷಗಳಿಂದ ವಾಡಿಕೆಯಲ್ಲಿದೆ.

ಕೊಡಗಿನಲ್ಲಿ ಯಥೇಚ್ಛವಾಗಿ ಸಿಗುವ ಈ ಸೊಪ್ಪನ್ನು ಅಥವಾ ಈ ಸೊಪ್ಪಿನಿಂದ ತೆಗೆದ ರಸವನ್ನು ಜಿಲ್ಲೆಯ ಹೊರ ಭಾಗದಲ್ಲಿರುವ ಕೊಡಗಿನ ಜನ ಕಕ್ಕಡ 18ರಂದು ತಮ್ಮ ನೆಂಟರಿಷ್ಟರ ಮೂಲಕ ತರಿಸಿಕೊಂಡು ಸೇವಿಸುವಷ್ಟು ಜನಪ್ರಿಯ ಈ ಮದ್ದಿನ ಸೊಪ್ಪು. ವಿಶಿಷ್ಟವಾದ ಸುವಾಸನೆಯನ್ನು ಹೊಂದಿರುವ ಸೊಪ್ಪಿನಿಂದ ತಯಾರಾದ ಪಾಯಸ, ತಟ್ಟೆ ಹಿಟ್ಟು, ಹಲ್ವ ಹೀಗೆ ಯಾವುದೇ ಖಾದ್ಯವಿದ್ದರೂ ಕೊಡಗಿನ ಜೇನು ಮತ್ತು ತುಪ್ಪದೊಂದಿಗೆ ಸವಿದರೆ ಇವುಗಳ ರುಚಿ ದುಪ್ಪಟ್ಟಾಗಿರುತ್ತದೆ. ಕಕ್ಕಡ 18ಕ್ಕೆ ಜಾನಪದ ಹಾಗೂ ಆಯುರ್ವೇದ ಸ್ಪರ್ಶವಿದೆ. ಈ ದಿನ ಸಂಪ್ರದಾಯದಂತೆ ಸಾಮೂಹಿಕವಾಗಿ ಮನೆಯವರೆಲ್ಲ ಸೇರಿ ಗದ್ದೆಯಲ್ಲಿ ನಾಟಿ ಮಾಡಿ ಆನಂತರ ಮದ್ದು ಸೊಪ್ಪಿನ ಪಾಯಸ ಸೇವಿಸುತ್ತಾರೆ. ಕಕ್ಕಡ ಆರಂಭವಾದ ದಿನದಿಂದ 18ದಿನಗಳವರೆಗೆ ಪ್ರತಿದಿನ ಒಂದೊಂದು ಔಷಧಿಯಂತೆ ಒಟ್ಟು 18 ಔಷಧಿಗಳು ಈ ಸೊಪ್ಪಿನಲ್ಲಿ ಅಡಕವಾಗುತ್ತದೆ ಎನ್ನುವ ನಂಬಿಕೆ ಇದೆ. 18 ಔಷಧಿಗಳು ಸಂಪೂರ್ಣವಾಗಿ ಸೇರಿಕೊಂಡ ನಂತರವಷ್ಟೇ ಸೊಪ್ಪಿಗೆ ಪರಿಪೂರ್ಣ ಔಷಧೀಯ ಗುಣ ಬರುತ್ತದೆ ಎನ್ನುವ ಕಾರಣಕ್ಕೆ ಕಕ್ಕಡ 18ರಂದೆ ಮದ್ದು ಸೊಪ್ಪನ್ನು ಕೊಯ್ದು ಖಾದ್ಯವನ್ನು ತಯಾರಿಸಲಾಗುತ್ತದೆ. ಈ ಸೊಪ್ಪನ್ನು ಮಧುಬನ ಎಂದು ಕೂಡ ಕರೆಯುತ್ತಾರೆ.

ಗ್ರಾಮೀಣ ಪ್ರದೇಶದ ಜನರು ತಮ್ಮ ಮನೆಯ ಅಕ್ಕಪಕ್ಕದಲ್ಲೇ ಇದನ್ನು ಬೆಳೆಸಿಕೊಂಡಿದ್ದರೆ ಪಟ್ಟಣದ ಜನ ಗ್ರಾಮಸ್ಥರು ತಂದು ಮಾರುವ ಸೊಪ್ಪನ್ನು ಹಣ ನೀಡಿ ಕೊಂಡುಕೊಳ್ಳುತ್ತಾರೆ. ಒಟ್ಟಿನಲ್ಲಿ ಭಾರೀ ಮಳೆ ಗಾಳಿ ಚಳಿಯ ಕೊಡಗಿನಲ್ಲೀಗ ಘಮಘಮಿಸುವ ಬಿಸಿ ಬಿಸಿ ಮದ್ದು ಸೊಪ್ಪಿನ ಪಾಯಸದ್ದೇ ಮಾತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X