ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಗಾಯ
ಕಾಸರಗೋಡು, ಆ.1: ಯುವ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಉದುಮದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಮಾಂಗಾಡ್ ಆರ್ಯಡ್ಕದ ದಿನೇಶ್(34)ಎಂದು ಗುರುತಿಸಲಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ರಾತ್ರಿ ಆರ್ಯಡ್ಕ ಬಸ್ಸು ನಿಲ್ದಾಣ ಸಮೀಪ ದಾಳಿ ನಡೆದಿದ್ದು, ಡಿವೈಎಫ್‌ಐ ಕಾರ್ಯಕರ್ತರು ಕೃತ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





