ವಿದ್ಯುತ್ ಕಂಬಕ್ಕೆ ಅಪರಿಚಿತ ವಾಹನ ಢಿಕ್ಕಿ

ಕುಶಾಲನಗರ, ಆ.2: ಪಟ್ಟಣದ ಮಾರ್ಕೇಟ್ ರಸ್ತೆಯ ಬದಿಯಲ್ಲಿದಂತಹ ವಿದ್ಯುತ್ ಕಂಬಕ್ಕೆ ತಡರಾತ್ರಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ವರದಿಯಾಗಿದೆ.
ಹಾಸನ-ಮೈಸೂರು ಕಡೆ ತೆರಳುವ ಮಾರ್ಗ ಮಧ್ಯೆ ಹಾರ್ಡ್‌ವೇರ್ ಅಂಗಡಿಯ ಮುಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ವಿದ್ಯುತ್ ಸ್ಥಗಿತಗೊಳಿಸಿರುತ್ತಾರೆ. ಇದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಚೆಸ್ಕ್ಕಾಂ ಆಧಿಕಾರಿಗಳಿಗೆ ಕಂಬವನ್ನು ಸರಿಪಡಿಸಿಕೊಡಬೇಕೆಂದು ತಿಳಿಸಿದ್ದಾರೆ.
ಈ ಸಂಬಂಧ ಕುಶಾಲನಗರದ ಟೌನ್ ಪೊಲೀಸ್ ಠಾಣೆಗೆ ದೂರನ್ನು ದಾಖಲಾಗಿದೆೆ.
Next Story





