‘ಆರೋಗ್ಯದ ಸಮಸ್ಯೆಗೆ ಮನೋಜ್ಞಾನ ಅಗತ್ಯ’
ಅರಿವು ಅಭಿಯಾನ ಹಾಗೂ ಬೀದಿ ನಾಟಕಕ್ಕೆ ಚಾಲನೆ
 mdg news ph 2 (1).jpg)
ುೂಡಿಗೆರೆ, ಆ.2: ಆರೋಗ್ಯ ಸಮಸ್ಯೆಯಿಂದ ಮುಕ್ತರಾಗಲು ದಿನನಿತ್ಯದ ಚಟುವಟಿಕೆಗಳಲ್ಲಿ ಆರೋಗ್ಯವನ್ನು ವೃದ್ಧಿಸಿಕೊ ಳ್ಳುವ ಮನೋಜ್ಞಾನ ಬೆಳೆಸಿ ಕೊಳ್ಳುವುದು ಅಗತ್ಯ ಎಂದು ಶಾಸಕ ಬಿ.ಬಿ.ನಿಂಗಯ್ಯ ಹೇಳಿದ್ದಾರೆ.
ಅವರು, ಮಂಗಳವಾರ ಪಟ್ಟಣದ ಲಯನ್ಸ್ ವೃತ್ತದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಸಹಯೋಗದಲ್ಲಿ ಆ.2ರಿಂದ 7ರವರೆಗೆ ಮೂಡಿಗೆರೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯ ಆರೋಗ್ಯ ಯೋಜನೆ ಕುರಿತು ಅರಿವು ಅಭಿಯಾನ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿರುವ ಈ ದಿನಗಳಲ್ಲಿ ಅವರ ಆರೋಗ್ಯದ ಕಡೆ ಕಾಳಜಿ ವಹಿಸುವುದು ಅತಿ ಮುಖ್ಯವಾಗಿದೆ ಎಂದರು.
ತಾಲೂಕಿನಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿದ್ದು, ಇಂತಹ ಕಾರ್ಯಕ್ರಮಗಳಿಂದ ಪ್ರಯೋಜನ ಪಡೆದುಕೊಳ್ಳುವ ಅಗತ್ಯವಿದೆ ಎಂದ ಅವರು, ಆರೋಗ್ಯಕ್ಕೆ ಸಂಬಂಧಿಸಿದ ಬೀದಿ ನಾಟಕಗಳಿಂದ ಜನರಲ್ಲಿ ಅರಿವು ಮೂಡಿಸುವುದರಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಸಾಧ್ಯವಿದೆ ಎಂದು ತಿಳಿಸಿದರು.
ವಾರ್ತಾ ಇಲಾಖೆಯ ಮೂರು ವಾಹನಗಳಲ್ಲಿ ಆರೋಗ್ಯಕ್ಕೆ ಸಂಬಂಧಿ ಸಿದ ಕಲಾಜಾಥಾ ಹಾಗೂ ನಾಟಕ ಪ್ರದರ್ಶನಗಳು ನಡೆದವು. ಸರಕಾರ ದಿಂದ ಉಚಿತ ಆರೋಗ್ಯ ಯೋಜನೆಗಳ ಬಗ್ಗೆ ಸಾರ್ವಜನಿಕ ಮಾಹಿತಿ ನೀಡಲಾಯಿತು. ಕಲಾ ತಂಡಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಜಾನಪದ ಹಾಡು, ಲಾವಣಿ ಪದ, ಗೀಗೀಪದ ಸಹಿ
ತ ಗ್ರಾಮೀಣ ಶೈಲಿಯ ಹಾಡುಗಳು ಸಾರ್ವಜನಿಕರನ್ನು ರಂಜಿಸಿದವು. ಈ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾರಾಯಣ ಸ್ವಾಮಿ, ಎಂ.ಕೆ.ಪ್ರಾಣೇಶ್, ಕೆ.ಸಿ.ರತನ್, ಪಾರ್ವತಮ್ಮ, ಅಮಿತಾ ಮುತ್ತಪ್ಪ, ಶಾಮಣ್ಣ, ಟಿ.ಎ.ಮದೀಶ್, ಮಂಜುನಾಥ, ಸುವರ್ಣ ಕುಮಾರ, ಡಾ.ಯೋಗೀಶ್, ಡಾ.ಸುಂದರೇಶ್ ಮತ್ತಿತತರು ಉಪಸ್ಥಿತರಿದ್ದರು.







