Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಹಜ್ ಯಾತ್ರಿಕರಿಗೆ ತರಬೇತಿ...

ತೊಕ್ಕೊಟ್ಟು: ಹಜ್ ಯಾತ್ರಿಕರಿಗೆ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 Aug 2016 10:58 PM IST
share
ತೊಕ್ಕೊಟ್ಟು: ಹಜ್ ಯಾತ್ರಿಕರಿಗೆ ತರಬೇತಿ ಕಾರ್ಯಕ್ರಮ

ಉಳ್ಳಾಲ, ಆ.2: ಮನಸ್ಸು ಶುದ್ಧಿಯಾಗಿರದೆ ಮಕ್ಕಾ, ಮದೀನಾ ಅಥವಾ ಎಲ್ಲೇ ಹೋಗಿ ಪ್ರಾರ್ಥಿಸಿದರೂ ಹಜ್ ಕರ್ಮ ಪೂರ್ತಿಯಾಗದು, ಆದ್ದರಿಂದ ಎಲ್ಲದಕ್ಕಿಂತ ಮುನ್ನ ನಾವು ನಮ್ಮ ಮನಸ್ಸನ್ನು ಪರಿಶುದ್ದವಾಗಿಟ್ಟುಕೊಳ್ಳಬೇಕು ಎಂದು ಉಡುಪಿ ಸಂಯುಕ್ತ ಖಾಝಿ ಬೇಕಲ ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದರು.

ಮಂಜನಾಡಿ ವಲಯ ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್ ಆಶ್ರಯದಲ್ಲಿ ಮಂಗಳವಾರ ತೊಕ್ಕೊಟ್ಟು ಕಲ್ಲಾಪುವಿನ ಯುನಿಟಿ ಸಭಾಂಗಣದಲ್ಲಿ ನಡೆದ ಹಜ್ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಇಸ್ಲಾಂನ ಐದು ಕಡ್ಡಾಯ ಕರ್ಮಗಳಲ್ಲಿ ಹಜ್ ನಿರ್ವಹಣೆಯೂ ಒಂದಾಗಿದೆ. ಹಜ್ ನಿರ್ವಹಿಸುವವರು ಎಲ್ಲಾ ರೀತಿಯ ಸಾಲದಿಂದ ಮುಕ್ತವಾಗಿರಬೇಕು, ಯಾರೊಂದಿಗೂ ದ್ವೇಷ, ಅಸೂಯೆ ಹೊಂದಿರಬಾರದು. ಕಿಂಚಿತ್ ಲೋಪವಿದ್ದರೂ ಹಜ್ ಕರ್ಮ ನಿಷ್ಪ್ರಯೋಜಕ ಎಂದು ಹೇಳಿದರು.

ಶಿಬಿರ ಉದ್ಘಾಟಿಸಿದ ಸಚಿವ ಯು.ಟಿ.ಖಾದರ್ ಮಾತನಾಡಿ, ತಮ್ಮ ಬದುಕಿನಲ್ಲಿ ಹಜ್ ನಿರ್ವಹಿಸಬೇಕು ಎನ್ನುವ ಅಭಿಲಾಷೆ ಮುಸಲ್ಮಾನರ ಮನದಲ್ಲಿರುತ್ತದೆ. ಯಾತ್ರಾರ್ಥಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಬಾರಿ ಹಜ್‌ಗೆ ಹೋದವರು ಬಲಿಷ್ಟ, ಸೌಹಾರ್ದ ದೇಶ, ನಾಡು ನಿರ್ಮಾಣಕ್ಕಾಗಿ ಪ್ರಾರ್ಥಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಉದ್ಯಮಿ ಕುಂಞಿ ಅಹ್ಮದ್ ಹಾಜಿ ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್‌ನ ಉಪಾಧ್ಯಕ್ಷ ಟಿ.ಎಸ್.ಇಸ್ಮಾಯೀಲ್, ಟಿ.ಎಸ್.ಅಬ್ದುಲ್ಲಾ, ಕೋಶಾಧಿಕಾರಿ ಕತಾರ್ ಬಾವ ಹಾಜಿ, ಕಾರ್ಯದರ್ಶಿಗಳಾದ ಮುಹಮ್ಮದ್ ಮಾಸ್ಟರ್, ಎಂ.ಇ.ಮೊಯ್ದೀನ್ ಕುಂಞಿ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಆಲಿಕುಂಞಿ ಪಾರೆ ಸ್ವಾಗತಿಸಿದರು. ಉಪಾಧ್ಯಕ್ಷ ಹೈದರ್ ಪರ್ತಿಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X