Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಣೆಯ ಹೆಸರಲ್ಲಿ ಮಾನವ ಹತ್ಯೆ ತಪ್ಪು

ಗೋರಕ್ಷಣೆಯ ಹೆಸರಲ್ಲಿ ಮಾನವ ಹತ್ಯೆ ತಪ್ಪು

ವೆಂಕಯ್ಯ ನಾಯ್ಡು

ವಾರ್ತಾಭಾರತಿವಾರ್ತಾಭಾರತಿ2 Aug 2016 11:46 PM IST
share

ಹೊಸದಿಲ್ಲಿ, ಆ.2: ಗೋ ಸಂರಕ್ಷಣೆಯ ಹೆಸರಿನಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರವನ್ನು ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಮಂಗಳವಾರ ಬಲವಾಗಿ ಖಂಡಿಸಿದ್ದಾರೆ. ಆದರೆ ಮತಾಂತರಗೊಳ್ಳುವು ದರಿಂದ ದಲಿತರ ವಿರುದ್ಧ ನಡೆಯುತ್ತಿರುವ ಪಕ್ಷಪಾತಗಳು ಕೊನೆಗೊಳ್ಳಲಾರವು ಎಂದವರು ಅಭಿಪ್ರಾಯಿಸಿದ್ದಾರೆ. ದಲಿತರು ಬೌದ್ಧ ಮತವನ್ನು ಸ್ವೀಕರಿಸಬೇಕೆಂದು, ತನ್ನ ಸಂಪುಟ ಸಹದ್ಯೋಗಿ ರಾಮದಾಸ್ ಅಠವಳೆ ಕರೆ ನೀಡಿದ ಕೆಲವೇ ದಿನಗಳ ಬಳಿಕ ವೆಂಕಯ್ಯ ನಾಯ್ಡು ಈ ಹೇಳಿಕೆಯನ್ನು ನೀಡಿದ್ದಾರೆ.

ಹಿಂದೂಧರ್ಮದಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲವೆಂದು ಪ್ರತಿಪಾದಿಸಿದ ಅವರು ‘‘ಇನ್ನೋರ್ವ ಮಾನವ ಜೀವಿಯ ವಿರುದ್ಧ ಭೇದಭಾವ ಮಾಡುವವನನ್ನು ಹಿಂದೂ ಎಂದು ಕರೆಯಲು ಸಾಧ್ಯವಿಲ್ಲ’’ ಎಂದರು.
‘‘ನೀವು ಗೋವನ್ನು ಗೌರವಿಸುವಿರಾದರೆ, ತುಂಬಾ ಒಳ್ಳೆಯದು. ಆದರೆ ಇತರ ಮಾನವರಿಗೂ ಬದುಕುವ ಹಾಗೂ ತಮ್ಮ ಉದ್ಯೋಗವನ್ನು ನಿರ್ವಹಿಸುವ ಹಕ್ಕಿದೆ.ನೀವು ಗೋವನ್ನು ಗೌರವಿಸಲು ಬಯಸುವಿರಾದರೆ ಅದನ್ನು ಗೌರವಿಸಿ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ ಗೋವನ್ನು ಸಂರಕ್ಷಿಸುವ ಹೆಸರಿನಲ್ಲಿ ನೀವು ಯಾರನ್ನಾದರೂ ಕೊಲ್ಲಬಹುದೆಂದು ಇದರ ಅರ್ಥವಲ್ಲ’’ ಎಂದು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದರು.
  ಹೊಸದಿಲ್ಲಿಯಲ್ಲಿ ನಡೆದ ಐಎಎಸ್ ರ್ಯಾಂಕ್ ವಿಜೇತೆ, ದಲಿತ ಯುವತಿ ಟೀನಾ ಡಾಬಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಗೋಸಂರಕ್ಷಣೆಯ ಹೆಸರಿನಲ್ಲಿ ದೌರ್ಜನ್ಯ ನಡೆಸುವುದು ಸಂಪೂರ್ಣ ತಪ್ಪೆಂದು ಹೇಳಿದರು.
 ಗುಜರಾತ್ ಹಾಗೂ ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಥಾಕಥಿತ ಗೋಸಂರಕ್ಷಕರು ದಲಿತರ ಮೇಲೆ ಹಿಂಸಾಚಾರ ನಡೆಸಿದ ಸರಣಿ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
  ಮತಾಂತರವುಈ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಕೆಲವು ಮಂದಿ ದಲಿತರಿಗೆ ಸೂಚಿಸಿದ್ದಾರೆ. ಆದರೆ ಹಾಗಾಗಲಾರದು. ಇತರ ಧರ್ಮಗಳಲ್ಲೂ ತಾವು ಇಂತಹದೇ ಪರಿಸ್ಥಿತಿಯನ್ನು ಎದುರಿಸಿದ್ದಾಗಿ ಹೇಳಿಕೊಂಡು ಎಷ್ಟೋ ಮಂದಿ ದಲಿತರು ಹಿಂದೂಧರ್ಮಕ್ಕೆ ವಾಪಾಸಾದ ಹಲವು ಪ್ರಕರಣಗಳಿವೆಯೆಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X