Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮ್ ಯುವಕರಿಗೆ ಹಲ್ಲೆ, ಅವಹೇಳನ

ಮುಸ್ಲಿಮ್ ಯುವಕರಿಗೆ ಹಲ್ಲೆ, ಅವಹೇಳನ

ಜೈ ಶ್ರೀರಾಮ್ ಘೋಷಣೆ ಕೂಗಿಸಿದ ಸಂಘ ಪರಿವಾರ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ2 Aug 2016 11:47 PM IST
share

ಅಹ್ಮದಾಬಾದ್, ಆ.2: ಸಂಘ ಪರಿವಾರ ಕಾರ್ಯಕರ್ತರೆನ್ನಲಾದ ಕೆಲವರು ಇಬ್ಬರು ಮುಸ್ಲಿಮ್ ಯುವಕರಿಗೆ ಹಲ್ಲೆಗೈದು, ಅವರ ದೇವರಾದ ಅಲ್ಲಾಹ್ ನನ್ನು ಅವಹೇಳನಗೈದು ಅವರಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಬಿಟ್ಟಿದೆ ಎಂದು ಜನತಾ ಕಾ ರಿಪೋರ್ಟರ್ ವರದಿಯೊಂದು ಹೇಳಿದೆ.

 ವೀಡಿಯೊದಲ್ಲಿ ಅಮಿತ್ ಸಿಂಗ್ ರಾಥೋಡ್ ಎಂಬ ವ್ಯಕ್ತಿ ಇಬ್ಬರು ಮುಸ್ಲಿಮ್ ಯುವಕರಿಗೆ ಹೊಡೆಯುತ್ತಿರುವ ದೃಶ್ಯವಿದೆ. ಸ್ವಲ್ಪಹೊತ್ತಿನಲ್ಲಿ ಆತನೊಂದಿಗೆ ಸೇರಿದ ಆತನ ಸಹಚರರು ಆ ಮುಸ್ಲಿಮ್ ಯುವಕರ ಅಸಹಾಯಕತೆಗೆ ಜೋರಾಗಿ ನಗುತ್ತಿರುವುದೂ ಕಾಣಿಸುತ್ತದೆ.
‘‘ಈ ವೀಡಿಯೊ ನೋಡಿದಾಗ ಕರುಳು ಚುರುಕ್ಕೆನ್ನುತ್ತದೆ. ಈ ಕ್ರಿಮಿನಲ್ ಗೂಂಡಾ ಗಳನ್ನು ಸಂಘ ಪರಿವಾರ ನಮ್ಮ ಜನರ ಮೇಲೆ ಛೂ ಬಿಟ್ಟಿದೆ’’ ಎಂದು ಈ ವೀಡಿಯೊ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರತಿಕ್ರಿಯಿಸಿದರು.
ಗೃಹ ಸಚಿವ ರಾಜನಾಥ ಸಿಂಗ್ ಈ ಘಟನೆಯ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಈ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತ ಗೌರವ್ ಪಾಂಡಿ ಆಗ್ರಹಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವೀಡಿಯೊವನ್ನು ಟ್ರುತ್ ಆಫ್ ಗುಜರಾತ್ ವೆಬ್ ಸೈಟ್ ನಡೆಸುವ ಪ್ರತೀಕ್ ಸಿನ್ಹ ಅಪ್‌ಲೋಡ್ ಮಾಡಿದ್ದಾರೆ. ‘‘ಇದು ಹಿಂದೂತ್ವ ಉಗ್ರವಾದದ ಮುಖ. ಅವರು ಉಪಯೋಗಿಸಿದ ಭಾಷೆ ತೀರಾ ಅವಮಾನಕಾರಿ. ಎಚ್ಚರಿಕೆಯಿಂದ ವೀಕ್ಷಿಸಿ (ಅವಮಾನಕರ ಕಮೆಂಟ್ ಮಾಡಿದವರನ್ನು ನಿಷೇಧಿಸಲಾಗುವುದು)’’ ಎಂದು ಅವರು ಬರೆದಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಈ ವೀಡಿಯೊಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
  ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದರ ಪ್ರಕಾರ ಬಿಹಾರದ ಇಬ್ಬರು ಯುವ ವಲಸಿಗ ಕಾರ್ಮಿಕರನ್ನು ವ್ಯಕ್ತಿಯೊಬ್ಬ ಅವಹೇಳನಗೈಯ್ಯುವ ವೀಡಿಯೊ ಬಹಿರಂಗಗೊಂಡ ನಂತರ ಸೋಮವಾರ ಸೂರತ್ ನಗರದ ಲಿಂಬಾಯತ್ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗೊಡಾದರಾ ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಿಂದ ಕೆಲಸಗಾರರನ್ನು ಅಮಿತ್ ಸಿಂಗ್ ರಾಥೋಡ್ ಎಂಬ ವ್ಯಕ್ತಿ ಬಲವಂತವಾಗಿ ಹೊರದಬ್ಬುವ ದೃಶ್ಯ ವೀಡಿಯೊದಲ್ಲಿದೆ. ರಾಥೋಡ್ ಜೊತೆ ಇನ್ನಿತರ ಹಲವರು ಆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿದ್ದು ರಾಥೋಡ್‌ನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X