ನಗರಾಭಿವೃದ್ಧಿ ಸಚಿವರ ಪ್ರವಾಸ
ಮಂಗಳೂರು, ಆ.2: ನಗರಾಭಿ ವೃದ್ಧಿ ಹಾಗೂ ಹಜ್ ಸಚಿವ ಆರ್.ರೋಶನ್ ಬೇಗ್ ಆ.3 ಮತ್ತು 4ರಂದು ದ.ಕ. ಜಿಲ್ಲಾ ಪ್ರವಾಸ ದಲ್ಲಿರುವರು.
ಅಪರಾಹ್ನ 2 ಗಂಟೆಗೆ ನಗರದ ಟಿ.ಎಂ.ಎ. ಪೈ ಹಾಲ್ನಲ್ಲಿ ನಡೆ ಯುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆಯುವ ಮಂಗಳೂರಿನಿಂದ ಹಜ್ ಯಾತ್ರೆಗೆ ತೆರಳುವ ವಿಮಾನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸು ವರು. 6 ಗಂಟೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವರು. ಆ.4ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನಿಂದ ಮೊದಲ ವಿಮಾನದಲ್ಲಿ ಹಜ್ ಯಾತ್ರೆಗೆ ತೆರಳಲಿರುವ ಯತ್ರಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸುವರು. 10:30ಕ್ಕೆ ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾ ಭಿವೃದ್ಧಿ ಪ್ರಾಧಿಕಾರ, ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸು ವರು. ಅಪರಾಹ್ನ 2:30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಕಾಸರಗೋಡಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8:30ಕ್ಕೆ ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿ ಸರ್ಕ್ಯೂಟ್ ಹೌಸ್ನಲ್ಲಿ ತಂಗು ವರು. ಆ.5ರಂದು ಪೂರ್ವಾಹ್ನ 11:20ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.