ಹಿರಿಯ ನಾಗರಿಕರಿಗೆ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಆ.2: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ 1 ಸಂಸ್ಥೆಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹರು ಆ.10ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ಉರ್ವಾಸ್ಟೋರ್, ಜಿಪಂ ಕಟ್ಟಡ ದೂ.ಸಂ.: 0824-2458173 ಇಲ್ಲಿ ಕಚೇರಿ ವೇಳೆ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





