Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಯಲ್ಲಿ ಭಾರತೀಯ ಕಾರ್ಮಿಕರ ಸಮಸ್ಯೆ :...

ಸೌದಿಯಲ್ಲಿ ಭಾರತೀಯ ಕಾರ್ಮಿಕರ ಸಮಸ್ಯೆ : ಭಾರತೀಯ ಮಾಧ್ಯಮಗಳಿಂದ ವೈಭವೀಕರಣ, ಪಕ್ಷಪಾತಿ ವರದಿ

ಅನಿವಾಸಿ ಭಾರತೀಯರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ3 Aug 2016 1:32 PM IST
share
ಸೌದಿಯಲ್ಲಿ ಭಾರತೀಯ ಕಾರ್ಮಿಕರ ಸಮಸ್ಯೆ : ಭಾರತೀಯ ಮಾಧ್ಯಮಗಳಿಂದ ವೈಭವೀಕರಣ, ಪಕ್ಷಪಾತಿ ವರದಿ

ಜಿದ್ದಾ, ಆ.3: ನಷ್ಟದಲ್ಲಿರುವ ಖಾಸಗಿ ಕಂಪೆನಿಯೊಂದು ಹಾಗೂ ಅದರ ಭಾರತೀಯ ಉದ್ಯೋಗಿಗಳ ನಡುವಿನ ಸಮಸ್ಯೆಯನ್ನು ವೈಭವೀಕರಿಸಿ ಭಾರತೀಯ ಮಾಧ್ಯಮಗಳು ಪಕ್ಷಪಾತಿ ವರದಿ ಮಾಡುತ್ತಿವೆಯೆಂದು ಸೌದಿಯಲ್ಲಿನ ಭಾರತೀಯ ಸಮುದಾಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇದೊಂದು ಪ್ರತ್ಯೇಕ ಪ್ರಕರಣವಾಗಿದ್ದು ಸುಮಾರು 30 ಲಕ್ಷ ಭಾರತೀಯರು ಸೌದಿಯಲ್ಲಿ ಉದ್ಯೋಗ ಮಾಡಿಕೊಂಡು ಸಂತಸದಿಂದಿದ್ದಾರೆಂದು ಅಲ್ಲಿನ ಭಾರತೀಯ ಸಮುದಾಯ ಹೇಳಿದೆಯಲ್ಲದೆ, ಅತ್ಯಧಿಕ ಸಂಖ್ಯೆಯ ಅನಿವಾಸಿ ಭಾರತೀಯರಿಗೆ ಉದ್ಯೋಗ ದೊರಕಿಸಿದ್ದಕ್ಕಾಗಿ ಹಾಗೂ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ ಶ್ರಮಿಸುವ ಸೌದಿ ಸರಕಾರಕ್ಕೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಸೌದಿಯಲ್ಲಿನ ಅನಿವಾಸಿಗಳಲ್ಲಿ ಭಾರತೀಯರು ಅತ್ಯಧಿಕ ಸಂಖ್ಯೆಯಲ್ಲಿದ್ದಾರಲ್ಲದೆ, ಜಗತ್ತಿನ ಇತರೆಡೆಗಳಿಗಿಂತ ಹೆಚ್ಚಿನ ಸಂಖ್ಯೆಯ ಭಾರತೀಯ ಪಾಸ್ ಪೋರ್ಟ್ ಹೊಂದಿರುವವರು ಕೂಡ ಸೌದಿಯಲ್ಲೇ ಇದ್ದಾರೆ.

ಕೆಲ ನಿರ್ಮಾಣ ಕಂಪೆನಿಗಳು ಆರ್ಥಿಕ ಸಮಸ್ಯೆಯಿಂದಾಗಿ ಭಾರತೀಯರಲ್ಲದೆ ವಿವಿಧ ರಾಷ್ಟ್ರಗಳ ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಅರಬ್ ನ್ಯೂಸ್‌ನೊಂದಿಗೆ ಮಾತನಾಡುತ್ತಾ ತಿಳಿಸಿದ ಅಖ್ತಾರ್-ಉಲ್-ಇಸ್ಲಾಂ ಸಿದ್ಧೀಖೀ ಎಂಬ ಭಾರತೀಯ ಉದ್ಯಮಿ ‘‘ಭಾರತೀಯ ಮಾಧ್ಯಮ ಈ ವಿಚಾರವನ್ನು ಯಾಕೆ ವೈಭವೀಕರಿಸುತ್ತಿದೆ ಎಂದು ತಿಳಿದಿಲ್ಲ’’ ಎಂದು ಹೇಳಿದರು.

‘‘ಭಾರತದಲ್ಲಿ ಖಾಸಗಿ ಸಂಸ್ಥೆಗಳಾದ ಕಿಂಗ್ ಫಿಶರ್, ಸಹಾರ ಮತ್ತಿತರ ಕಂಪೆನಿಗಳು ದಿವಾಳಿಯಾಗಿ ಅವುಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಭಾರತ ಸರಕಾರ ಅವರಿಗೆಲ್ಲಾ ಉದ್ಯೋಗ ನೀಡಿದೆಯೇನು ? ತಮ್ಮ ಉದ್ಯೋಗಿಗಳಿಗೆ ಸಹಾಯ ಮಾಡುವುದು ಬಿಡಿ, ಕಿಂಗ್ ಫಿಶರ್ ಮಾಲಕ ವಿಜಯ್ ಮಲ್ಯ ಸಾಲ ಮರುಪಾವತಿಸುವುದನ್ನು ತಪ್ಪಿಸುವ ಸಲುವಾಗಿ ಭಾರತದಿಂದಲೇ ಪರಾರಿಯಾದರೂ ಸರಕಾರಕ್ಕೆ ಅವರನ್ನು ಇಲ್ಲಿಯ ತನಕ ಹಿಡಿಯಲು ಸಾಧ್ಯವಾಗಿಲ್ಲ,’’ ಎಂದು ಅವರು ವಿವರಿಸಿದರು.

‘‘ಇಲ್ಲಿನ ಭಾರತೀಯರು ಉದ್ಯೋಗವಿಲ್ಲದೆ ಹಸಿವಿನಿಂದ ಕಂಗಾಲಾಗಿದ್ದಾರೆಂಬ ವಿಷಯದಲ್ಲಿ ವರದಿ ಮಾಡಿ ಏನೂ ಪ್ರಯೋಜನವಿಲ್ಲ. ಬಾಧಿತರಾದವರು ತಮ್ಮ ಮಾಲಕರೊಂದಿಗೆ ಸೇರಿ ಸಮಸ್ಯೆ ಪರಿಹರಿಸಿ ಸ್ವದೇಶಕ್ಕೆ ಮರಳಬಹುದು,’’ ಎನ್ನುತ್ತಾರೆ ಅಬ್ದುಲ್ಲಾಖ್ ಬಸ್ತವಿ ಎಂಬ ಭಾರತೀಯ ಮೂಲದ ಐಟಿ ತಜ್ಞ. ‘‘ಕಾರ್ಮಿಕ ವಿವಾದಗಳ ವಿಚಾರದಲ್ಲಿ ನೌಕರರು ನ್ಯಾಯಾಲಯದ ಮೊರೆ ಹೋಗಬಹುದು,’’ ಎಂದು ಅವರು ತಿಳಿಸಿದರು.

ಇಲ್ಲಿನ ಮಾಧ್ಯಮ ಸಂಸ್ಥೆಯಲ್ಲಿ ಕೆಲಸ ಮಾಡುವ ಮೋಜಿಬ್ ಸಿದ್ಧೀಖಿ ಹೀಗೆಂದು ಹೇಳುತ್ತಾರೆ : ‘‘ಭಾರತದಲ್ಲಿ ಬಡ ಮುಸ್ಲಿಮರು ಹಾಗೂ ದಲಿತರ ವಿರುದ್ಧ ಗಂಭೀರ ದೌರ್ಜನ್ಯಗಳು ವರದಿಯಾಗಿವೆ. ಇದರ ಬಗ್ಗೆ ವಿಸ್ತೃತವಾಗಿ ವರದಿ ಮಾಡಿ ಹೆಚ್ಚುತ್ತಿರುವ ಅಸಹಿಷ್ಣುತೆಗೆ ಕಡಿವಾಣ ಹಾಕಬೇಕಿದೆ. ಅದರ ಬದಲು ಭಾರತೀಯ ಮಾಧ್ಯಮ ಇಲ್ಲಿನ ಕಾರ್ಮಿಕ ಸಮಸ್ಯೆಗಳ ಬಗ್ಗೆ ವರದಿಗಳನ್ನು ಪ್ರಕಟಿಸಿ ಉದ್ದೇಶಪೂರ್ವಕವಾಗಿ ಇತ್ತೀಚಿಗಿನ ದೌರ್ಜನ್ಯ ಪ್ರಕರಣಗಳಿಂದ ಟೀಕೆ ಎದುರಿಸುತ್ತಿರುವ ಸರಕಾರದಿಂದ ಜನರ ಗಮನವನ್ನು ಬೇರೆಡೆ ಹರಿಸಲು ಯತ್ನಿಸುತ್ತಿದೆ. ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರ ಬಗ್ಗೆ ತಮಗೆ ಕಾಳಜಿಯಿದೆಯೆಂದು ತೋರಿಸುವ ಮೂಲಕ ಅಲ್ಪಸಂಖ್ಯಾತರನ್ನು ಓಲೈಸುವ ತಂತ್ರ ಇದಾಗಿದೆ’’ಎಂದು ಅವರು ಹೇಳಿದರು.

‘‘ಸೌದಿಯಲ್ಲಿ ಭಾರತೀಯ ವಲಸಿಗರ ಸಮಸ್ಯೆ ಬಿಗಡಾಯಿಸಿದೆಯೆಂದಾದಲ್ಲಿ ಇಲ್ಲಿನ ಅನಿವಾಸಿ ಭಾರತೀಯರಿಂದ ದೇಶಕ್ಕೆ ರವಾನೆಯಾಗುವ ಹಣ ಅತ್ಯಧಿಕವಾಗಿರಲು ಹೇಗೆ ಸಾಧ್ಯ?’’ ಎಂದೂ ಅವರು ಪ್ರಶ್ನಿಸಿದ್ದಾರೆ.

‘‘ಭಾರತ ಸರಕಾರ ಅಲ್ಲಿನ ಮುಸ್ಲಿಮರು ಹಾಗೂ ದಲಿತರ ಬಗ್ಗೆ ನಿಜವಾಗಿಯೂ ಕಾಳಜಿಯಿದೆಯೆಂದಾದಲ್ಲಿ ಅದು ಮೊದಲು ಗೋ ರಕ್ಷಣೆಯ ಹೆಸರಿನಲ್ಲಿ ಸಮಾಜ ವಿದ್ರೋಹಿ ಶಕ್ತಿಗಳು ನಡೆಸುವ ವಿಧ್ವಂಸಕ ಕೃತ್ಯಗಳನ್ನು ನಿಲ್ಲಿಸಲಿ’’ ಎಂದು ನೇಮಕಾತಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿರುವ ದಮ್ಮಾಮ್ ನಿವಾಸಿ ಸಾಖಿಬ್ ಹಂಝ ಹೇಳಿದ್ದಾರೆ.

‘‘ಭಾರತೀಯ ಮಾಧ್ಯಮ ಸೌದಿಯಲ್ಲಿ ಕೆಲಸ ಕಳೆದುಕೊಂಡಿರುವವರ ಸಂಖ್ಯೆಯನ್ನು ಉತ್ಪ್ರೇಕ್ಷಿಸಿದೆ ಎಂದು ಸಫತ್ ಏವ್ಯೇಶನ್‌ನ ಮಾರ್ಕೆಟಿಂಗ್ ಮುಖ್ಯಸ್ಥ ಮುಹಮ್ಮದ್ ಅಕ್ರಮ್ ತಿಳಿಸಿದ್ದಾರೆ. ಆರ್ಥಿಕ ಸಮಸ್ಯೆಯಲ್ಲಿರುವ ಸಂಸ್ಥೆಯೊಂದು ನೌಕರರನ್ನು ಕೆಲಸದಿಂದ ತೆಗೆದು ಹಾಕುವುದು ಹೊಸತೇನಲ್ಲ’’ ಎಂದು ಹೇಳಿದ ಅವರು ಆರ್ಥಿಕ ಕಾರಣಗಳಿಗಾಗಿ ನೌಕರರನ್ನು ಕೆಲಸದಿಂದ ತೆಗೆದು ಹಾಕುವ ಹಲವಾರು ಸಂಸ್ಥೆಗಳು ಭಾರತದಲ್ಲಿವೆ ಎಂದೂ ವಿವರಿಸಿದ್ದಾರೆ.

courtesy : Arab News

share
ವಾರ್ತಾಭಾರತಿ
ವಾರ್ತಾಭಾರತಿ
Next Story
X