Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಜಿ ಒಲಿಂಪಿಯನ್ ಆಶಿಕ್‌ರನ್ನು ಮರೆತ...

ಮಾಜಿ ಒಲಿಂಪಿಯನ್ ಆಶಿಕ್‌ರನ್ನು ಮರೆತ ಪಾಕಿಸ್ತಾನ

ಜೀವನಕ್ಕೆ ರಿಕ್ಷಾ ಓಡಿಸುತ್ತಿರುವ ವಯೋವೃದ್ಧ ಆಶಿಕ್

ವಾರ್ತಾಭಾರತಿವಾರ್ತಾಭಾರತಿ3 Aug 2016 3:10 PM IST
share
ಮಾಜಿ ಒಲಿಂಪಿಯನ್ ಆಶಿಕ್‌ರನ್ನು ಮರೆತ ಪಾಕಿಸ್ತಾನ

  ಲಾಹೋರ್, ಆ.3: ಪಾಕಿಸ್ತಾನದ ಮಾಜಿ ಒಲಿಂಪಿಯನ್ ಮುಹಮ್ಮದ್ ಆಶಿಕ್ ತಾನು ಗೆದ್ದಂತಹ ಪದಕಗಳನ್ನು ಪ್ರತಿ ದಿನ ನೋಡುತ್ತಿರುತ್ತಾರೆ. ತನ್ನೊಂದಿಗೆ ಹಸ್ತಲಾಘವ ಮಾಡಿದ್ದ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿಗಳು, ಅಧ್ಯಕ್ಷರು, ಮುಖ್ಯ ಕಾರ್ಯಾಧ್ಯಕ್ಷರನ್ನು ಆಶಿಕ್ ಈಗಲೂ ನೆನಪಿಸಿಕೊಳ್ಳುತ್ತಾರೆ. ದೇಶದ ಜನರು, ರಾಜಕಾರಣಿಗಳು ತಾನು ಸತ್ತೇ ಹೋಗಿದ್ದಾಗಿ ಭಾವಿಸಿದ್ದಾರೆ ಎಂದು ಅವರು ಹೇಳುತ್ತಾರೆ.

 ದೇಶಕ್ಕೆ ಇಷ್ಟೊಂದು ಕೀರ್ತಿ ತಂದಿರುವ ತನ್ನನ್ನು ಎಲ್ಲರೂ ಏಕೆ ಮರೆತ್ತಿದ್ದಾರೆ ಎಂದು ನನಗೆ ಗೊತ್ತಾಗುತ್ತಿಲ್ಲ. ಆದಾಗ್ಯೂ, ನಾನು ತುಂಬಾ ಸಂತೋಷವಾಗಿರುವೆ...ಒಲಿಂಪಿಕ್ಸ್‌ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿರುವುದು ನನ್ನ ಅದೃಷ್ಟವೆಂದೇ ಭಾವಿಸಿದ್ದೇನೆ ಎಂದು 81ರ ಹರೆಯದ ಆಶಿಕ್ ಹೇಳುತ್ತಾರೆ.

1960 ಹಾಗೂ 1964ರ ಒಲಿಂಪಿಕ್ಸ್‌ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದ ಆಶಿಕ್ ಇದೀಗ ಜೀವನ ನಿರ್ವಹಣೆಗಾಗಿ ಲಾಹೋರ್‌ನಲ್ಲಿ ರಿಕ್ಷಾ ಚಾಲಕನಾಗಿದ್ದಾರೆ. ರಿಕ್ಷಾದಲ್ಲಿ ತಾನು ಗೆದ್ದಂತಹ ಪದಕಗಳನ್ನು ನೇತು ಹಾಕಿದ್ದಾರೆ. ರಿಕ್ಷಾದಲ್ಲಿ ಬರುವ ಪ್ರಯಾಣಿಕರು ತಮಗೆ ಸಂದೇಶವೊಂದನ್ನು ನೀಡಿ ಎಂದು ಹೇಳಿದರೆ, ತನ್ನ ಜೀವನ ಕಥೆಯನ್ನು ಹೇಳುವ ಅವರು, ನನ್ನ ಕಥೆ ಬಡವರಿಗೆ ಒಂದು ಎಚ್ಚರಿಕೆಯ ಗಂಟೆ. ಬಡವರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬಾರದು ಎಂದು ಕಿವಿ ಮಾತು ಹೇಳುತ್ತಾರೆ.

ಬಾಕ್ಸರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಆಶಿಕ್ 1950ರಲ್ಲಿ ಸೈಕ್ಲಿಂಗ್‌ನತ್ತ ತನ್ನ ಗಮನ ಹರಿಸಿದರು. 1960ರಲ್ಲಿ ರೋಮ್ ಹಾಗೂ 1964ರಲ್ಲಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಪಾಕ್‌ನ್ನು ಪ್ರತಿನಿಧಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲದಿದ್ದರೂ ಆ ಕಾಲದಲ್ಲಿ ಪಾಕಿಸ್ತಾನದಲ್ಲಿ ಹೀರೋವಾಗಿ ಮಿಂಚಿದ್ದರು. ಸೈಕ್ಲಿಂಗ್ ವೃತ್ತಿಜೀವನ ಕೊನೆಗೊಂಡ ಬಳಿಕ ಪಿಆರ್ ಹುದ್ದೆ ಗಿಟ್ಟಿಸಿಕೊಂಡಿದ್ದರು. ಆದರೆ, 1977ರಲ್ಲಿ ಅನಾರೋಗ್ಯದ ಕಾರಣ ಆ ಹುದ್ದೆ ತೊರೆದರು.

ಲಾಹೋರ್‌ನಲ್ಲಿ ಪ್ರಯಾಣಿಕರು ಸಿಗದ ಕಾರಣ ಕಳೆದ 6 ವರ್ಷಗಳಿಂದ ರಿಕ್ಷಾ ಓಡಿಸುವುದನ್ನು ಕಡಿಮೆ ಮಾಡಿದ್ದಾರೆ. ಸಣ್ಣ ಮನೆಯೊಂದರಲ್ಲಿ ವಾಸಿಸುವ ಆಶಿಕ್ ಪತ್ನಿಯನ್ನು ಕಳೆದುಕೊಂಡಿದ್ದಾರೆ. ನಾಲ್ವರು ಮಕ್ಕಳು ಅವರೊಂದಿಗೆ ನೆಲೆಸಿಲ್ಲ. ನಾನು ಮಕ್ಕಳನ್ನು ಅವಲಂಬಿಸಿಲ್ಲ ಎಂದು ಆಶಿಕ್ ಹೇಳುತ್ತಾರೆ.

ವೃದ್ದಾಪ್ಯದಲ್ಲಿರುವ ಆಶಿಕ್, ತನ್ನನ್ನೂ ಪತ್ನಿ ಸೇರಿರುವ ಜಾಗಕ್ಕೆ ಕೊಂಡೊಯ್ಯು ದೇವರೇ ಎಂದು ಪ್ರಾರ್ಥಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X