Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆಪ್ಟಂಬರ್‌ವರೆಗೆ ಮರಳುಗಾರಿಕೆ ನಿರ್ಬಂಧ:...

ಸೆಪ್ಟಂಬರ್‌ವರೆಗೆ ಮರಳುಗಾರಿಕೆ ನಿರ್ಬಂಧ: ಜಿಲ್ಲಾಧಿಕಾರಿ ನಕುಲ್

ಮರಳು ನೀತಿ ಸಭೆ

ವಾರ್ತಾಭಾರತಿವಾರ್ತಾಭಾರತಿ3 Aug 2016 10:18 PM IST
share
ಸೆಪ್ಟಂಬರ್‌ವರೆಗೆ ಮರಳುಗಾರಿಕೆ ನಿರ್ಬಂಧ: ಜಿಲ್ಲಾಧಿಕಾರಿ ನಕುಲ್

ಕಾರವಾರ,ಆ.3: ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.1ರಿಂದ ಜು.31ರವರೆಗೆ ಮುಂಗಾರು ಅವಧಿಯಲ್ಲಿ ವಿಧಿಸಲಾಗಿದ್ದ ಮರಳುಗಾರಿಕೆ ನಿಷೇಧ ಇನ್ನೂ ಒಂದು ತಿಂಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.

ಬುಧವಾರ ನಡೆದ ಜಿಲ್ಲಾ ಮರಳು ನೀತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು.

  ಮೀನುಗಳು ಮೊಟ್ಟೆ ಇಡುವ ಹಾಗೂ ಮರಿ ಮಾಡುವ ಪ್ರಕ್ರಿಯೆ ಸೆಪ್ಟಂಬರ್‌ವರೆಗೂ ನಡೆಯುವ ಹಿನ್ನೆಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಪರಿಸರ ತಜ್ಞರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರಾವಳಿಯಲ್ಲಿ ನದಿಗಳು ತುಂಬಿ ಹರಿಯುತ್ತಿರುವ ಕಾರಣ ಮರಳುಗಾರಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆಪ್ಟಂಬರ್‌ವರೆಗೆ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

 ಅಕ್ರಮ ಮರಳು ಸಾಗಣೆಗೆ ತಡೆ: ಶರಾವತಿಯಲ್ಲಿ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ತಡೆಯಲು ಉಪವಿಭಾಗಾಧಿಕಾರಿ ಅವರು ನಿರಂತರ ಸ್ಥಳ ಪರಿಶೀಲನೆ ನಡೆಸಬೇಕು. ಮರಳು ಅಕ್ರಮವಾಗಿ ಸಾಗಾಟವಾಗದಂತೆ ತಡೆಯಲು ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಅಕ್ರಮ ಮರಳುಗಾರಿಕೆಯಲ್ಲಿ ತೊಡಗುವ ಬೋಟ್‌ಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಜರಗಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ಚೆಕ್‌ಪೋಸ್ಟ್‌ಗಳನ್ನು ಬಲಪಡಿಸಬೇಕು. ಕಂದಾಯ, ಪೊಲೀಸ್, ಆರ್‌ಟಿಒ, ಗಣಿ ಮತ್ತು ಭೂವಿಜ್ಞಾನ, ಅರಣ್ಯ, ಪಂಚಾಯತ್ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯ ಲೋಪ ಎಸಗಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಪ್ತಿ ಮಾಡಲಾಗಿರುವ ಮರಳನ್ನು ಸರಕಾರಿ ಇಲಾಖೆಗಳಿಗೆ ಆದ್ಯತೆ ಮೇರೆಗೆ ನೀಡುವಂತೆ ಅವರು ಸೂಚಿಸಿದರು.

ಜಿಪಿಎಸ್ ಅಳವಡಿಸಿದ ಲಾರಿಗಳಲ್ಲಿ ಮಾತ್ರ ಮರಳು ಸಾಗಣೆಗೆ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿ ಮರಳು ತೆಗೆಯಲು ಬಳಸುವ ಬೋಟ್‌ಗಳಿಗೆ ಜಿಪಿಎಸ್ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಥಮ ಹಂತದಲ್ಲಿ 10ಬೋಟ್‌ಗಳಿಗೆ ಪ್ರಾಯೋಗಿಕವಾಗಿ ಜಿಪಿಎಸ್ ಅಳವಡಿಕೆ ಮಾಡಿ ಫಲಿತಾಂಶ ಪರಿಶೀಲಿಸಲಾಗುವುದು. ಜಿಪಿಎಸ್ ಅಳವಡಿಸಿದ ಲಾರಿಗಳ ಚಲನೆ ಮೇಲೆ ನಿಗಾ ಇರಿಸಲು ಪೊಲೀಸ್ ಕಂಟ್ರೋಲ್ ರೂಂನಲ್ಲಿ ತಾಂತ್ರಿಕ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಪಿಎಸ್ ಪರಿಶೀಲನೆಗೆ ಸಂಬಂಧಪಟ್ಟ ಇಲಾಖೆಗಳಿಗೆ ಲಾಗಿನ್ ಒದಗಿಸಬೇಕು. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ (ಪ್ರಭಾರಿ) ಮುಹಮ್ಮದ್ ನಸ್ರುಲ್ಲಾ, ಅಡಿಷನಲ್ ಎಸ್ಪಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X