ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗೆ ಶಂಕುಸಾ್ಥಪನೆ

ಶಿವಮೊಗ್ಗ, ಆ.3: ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಅನುದಾನದಡಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ರವರು ಬುಧವಾರ ಬೆಳಗ್ಗೆ ಗುದ್ದಲಿಪೂಜೆ ನೆರವೇರಿಸಿದರು. ಆಶ್ರಯ ಬಡಾವಣೆಯ ಬಿ ಹಾಗೂ ಡಿ ಬ್ಲಾಕ್‌ನಲ್ಲಿ ಸರಿಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗುದ್ದಲಿಪೂಜೆ ನೆರವೇರಿಸುವ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಬೊಮ್ಮನಕಟ್ಟೆ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಗುದ್ದಲಿಪೂಜೆ ನೆರವೇರಿಸಿದ ನಂತರ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ಆಶ್ರಯ ಬಡಾವಣೆಯಲ್ಲಿ ಸಕಲ ಮೂಲಸೌಕರ್ಯ ಕಲ್ಪಿಸಲು ಅಗತ್ಯವಾದ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಬಡಾವಣೆಯಲ್ಲಿ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಕಾರ್ಪೊರೇಟರ್ ಬೊಮ್ಮನಕಟ್ಟೆ ಮಂಜುನಾಥ್ ಮಾತನಾಡಿ, ಈ ಹಿಂದಿನ ಶಾಸಕರ ಅವಧಿಯಲ್ಲಿ ಆಶ್ರಯ ಬಡಾವಣೆಗೆ ಯಾವುದೇ ಮೂಲಸೌಕರ್ಯ ಕಲ್ಪಿಸಲಾಗಿರಲಿಲ್ಲ.ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿತ್ತು. ಆದರೆ ಹಾಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಬಡಾವಣೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.





