ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆ.3: ರಾಜ್ಯ ಸರಕಾರವು ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ- ರೇಣುಕಾ ಚಿದಂಬರಂ, ಯೋಜನೆ, ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ-ಡಾ.ರಜನೀಶ್ ಗೋಯಲ್‌ರನ್ನು ವರ್ಗಾವಣೆ ಮಾಡಲಾಗಿದೆ.
ರಜನೀಶ್ ಗೋಯಲ್‌ರನ್ನು ಯುವ ಸೇವೆ ಹಾಗೂ ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯನ್ನಾಗಿ ಮುಂದುವರಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಇಲಾಖೆಯ ಸರಕಾರದ ಪ್ರಧಾನಕಾರ್ಯದರ್ಶಿ-ಉಮಾ ಮಹಾದೇವನ್‌ರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ- ವಿ.ಯಶವಂತ್, ರಾಜ್ಯ ಗೃಹ ಮಂಡಳಿಯ ಆಯುಕ್ತ-ಎ.ಬಿ.ಇಬ್ರಾಹೀಮ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ)ರನ್ನಾಗಿ ಡಾ.ಎಂ.ಲೋಕೇಶ್‌ರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
Next Story





